ಬೆಂಗಳೂರು ನಗರದಲ್ಲಿ ಮಹಿಳೆಯರ ಖಾಸಗಿ ವಿಡಿಯೋಗಳನ್ನು ಬಳಸಿಕೊಂಡು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ವ್ಯಕ್ತಿಯನ್ನು ಆರ್‌ಆರ್ ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಚಂದ್ರೇಗೌಡ ಎಂದು ಗುರುತಿಸಲಾಗಿದ್ದು, ಆತ ರಾಮನಗರ ಮಕ್ಕಳ ಆಯೋಗ ಸಮಿತಿ ಸದಸ್ಯನಾಗಿದ್ದನು.

ಆರೋಪಿಯು ತಾನು ಪೊಲೀಸ್, ವರದಿಗಾರ ಹಾಗೂ ವಕೀಲ ಎಂದು ಸುಳ್ಳು ಹೇಳಿ ಹಲವಾರು ಮಹಿಳೆಯರನ್ನು ಮೋಸಗೊಳಿಸುತ್ತಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ವಿಶೇಷವಾಗಿ ಗಂಡನಿಂದ ದೂರವಾಗಿದ್ದ ಮಹಿಳೆಯರನ್ನು ಗುರಿಯಾಗಿಸಿಕೊಂಡು ಪರಿಚಯ ಬೆಳೆಸಿ, ತಾನು ವಿಚ್ಛೇದಿತನಾಗಿದ್ದು ಮದುವೆಯಾಗುವುದಾಗಿ ನಂಬಿಸುತ್ತಿದ್ದನು.

ಈ ನಂಬಿಕೆಯನ್ನು ದುರುಪಯೋಗಪಡಿಸಿಕೊಂಡು ಮಹಿಳೆಯರೊಂದಿಗೆ ಆಪ್ತ ಸಂಬಂಧ ಬೆಳೆಸಿ, ಅದನ್ನು ಗುಪ್ತವಾಗಿ ವಿಡಿಯೋ ಮಾಡಿ ನಂತರ ಅದನ್ನೇ ಆಧಾರವನ್ನಾಗಿ ಮಾಡಿಕೊಂಡು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದನು. ಬೆದರಿಕೆ ಒಡ್ಡಿ ಸುಮಾರು ₹5 ಲಕ್ಷ ಹಣವನ್ನೂ ವಸೂಲಿ ಮಾಡಿದ ಆರೋಪವೂ ಕೇಳಿಬಂದಿದೆ.

ದೂರು ನೀಡಿದ ಮಹಿಳೆಯ ಆಧಾರದ ಮೇಲೆ ಪೊಲೀಸರು ತನಿಖೆ ಕೈಗೊಂಡು ಆರೋಪಿಯನ್ನು ಬಂಧಿಸಿದ್ದಾರೆ. ಚಂದ್ರೇಗೌಡನ ಮೊಬೈಲ್ ಪರಿಶೀಲನೆ ವೇಳೆ ಸುಮಾರು 20ಕ್ಕೂ ಹೆಚ್ಚು ಮಹಿಳೆಯರ ಜೊತೆಗಿನ ವಿಡಿಯೋಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಪ್ರಕರಣವು ಮಹಿಳೆಯರ ಸುರಕ್ಷತೆ ಹಾಗೂ ವಿಶ್ವಾಸವನ್ನು ದುರುಪಯೋಗಪಡಿಸಿಕೊಳ್ಳುವ ಅಪರಾಧಗಳ ಗಂಭೀರತೆಯನ್ನು ಮತ್ತೆ ಹೊರಹಾಕಿದೆ.

Related News

error: Content is protected !!