ಬೆಂಗಳೂರು ನಗರದಲ್ಲಿ ಮಹಿಳೆಯರ ಖಾಸಗಿ ವಿಡಿಯೋಗಳನ್ನು ಬಳಸಿಕೊಂಡು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ವ್ಯಕ್ತಿಯನ್ನು ಆರ್‌ಆರ್ ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಚಂದ್ರೇಗೌಡ ಎಂದು ಗುರುತಿಸಲಾಗಿದ್ದು, ಆತ ರಾಮನಗರ ಮಕ್ಕಳ ಆಯೋಗ ಸಮಿತಿ ಸದಸ್ಯನಾಗಿದ್ದನು.
ಆರೋಪಿಯು ತಾನು ಪೊಲೀಸ್, ವರದಿಗಾರ ಹಾಗೂ ವಕೀಲ ಎಂದು ಸುಳ್ಳು ಹೇಳಿ ಹಲವಾರು ಮಹಿಳೆಯರನ್ನು ಮೋಸಗೊಳಿಸುತ್ತಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ವಿಶೇಷವಾಗಿ ಗಂಡನಿಂದ ದೂರವಾಗಿದ್ದ ಮಹಿಳೆಯರನ್ನು ಗುರಿಯಾಗಿಸಿಕೊಂಡು ಪರಿಚಯ ಬೆಳೆಸಿ, ತಾನು ವಿಚ್ಛೇದಿತನಾಗಿದ್ದು ಮದುವೆಯಾಗುವುದಾಗಿ ನಂಬಿಸುತ್ತಿದ್ದನು.
ಈ ನಂಬಿಕೆಯನ್ನು ದುರುಪಯೋಗಪಡಿಸಿಕೊಂಡು ಮಹಿಳೆಯರೊಂದಿಗೆ ಆಪ್ತ ಸಂಬಂಧ ಬೆಳೆಸಿ, ಅದನ್ನು ಗುಪ್ತವಾಗಿ ವಿಡಿಯೋ ಮಾಡಿ ನಂತರ ಅದನ್ನೇ ಆಧಾರವನ್ನಾಗಿ ಮಾಡಿಕೊಂಡು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದನು. ಬೆದರಿಕೆ ಒಡ್ಡಿ ಸುಮಾರು ₹5 ಲಕ್ಷ ಹಣವನ್ನೂ ವಸೂಲಿ ಮಾಡಿದ ಆರೋಪವೂ ಕೇಳಿಬಂದಿದೆ.
ದೂರು ನೀಡಿದ ಮಹಿಳೆಯ ಆಧಾರದ ಮೇಲೆ ಪೊಲೀಸರು ತನಿಖೆ ಕೈಗೊಂಡು ಆರೋಪಿಯನ್ನು ಬಂಧಿಸಿದ್ದಾರೆ. ಚಂದ್ರೇಗೌಡನ ಮೊಬೈಲ್ ಪರಿಶೀಲನೆ ವೇಳೆ ಸುಮಾರು 20ಕ್ಕೂ ಹೆಚ್ಚು ಮಹಿಳೆಯರ ಜೊತೆಗಿನ ವಿಡಿಯೋಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಪ್ರಕರಣವು ಮಹಿಳೆಯರ ಸುರಕ್ಷತೆ ಹಾಗೂ ವಿಶ್ವಾಸವನ್ನು ದುರುಪಯೋಗಪಡಿಸಿಕೊಳ್ಳುವ ಅಪರಾಧಗಳ ಗಂಭೀರತೆಯನ್ನು ಮತ್ತೆ ಹೊರಹಾಕಿದೆ.
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…
ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…
ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…
ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…
ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…
ಕಲಬುರಗಿ: ನಿಗದಿತ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ರಾಜೇಶ್ವರಿ ಅವರ…