Latest

ವಾಟ್ಸಪ್ ಪರಿಚಯದ ಹೆಸರಿನಲ್ಲಿ ಮಹಿಳೆಗೆ ಬ್ಲಾಕ್‌ಮೇಲ್: ಗದಗ್‌ನಲ್ಲಿ ಆರೋಪಿ ವೀರೇಶ್ ಬಂಧನ

ಹುಣಸೂರು: ವಾಟ್ಸಪ್‌ನಲ್ಲಿ ಪರಿಚಯಿಸಿಕೊಂಡ ಮಹಿಳೆಯ ಮಕ್ಕಳ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್ ಮಾಡಿ, ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದ ಆರೋಪಿಯೊಬ್ಬನನ್ನು ಹುಣಸೂರು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತನು ವಿಜಯನಗರ ಜಿಲ್ಲೆಯ ವೀರೇಶ್ (28) ಎಂಬ ವ್ಯಕ್ತಿ. ನಿಲುವಾಗಿಲು ಗ್ರಾಮದ ಗೃಹಿಣಿಯೊಬ್ಬರೊಂದಿಗೆ ಆರು ತಿಂಗಳ ಹಿಂದೆ ವಾಟ್ಸಪ್ ಮೂಲಕ ಸಂಪರ್ಕ ಸಾಧಿಸಿದ್ದ ಆತನು, ಸ್ನೇಹಿತನೆಂದು ನಂಬಿಕೆ ಗಳಿಸಿ, ಮಹಿಳೆಯ ವೈಯಕ್ತಿಕ ಹಾಗೂ ಕುಟುಂಬದ ಮಾಹಿತಿ ಪಡೆದುಕೊಂಡಿದ್ದ. ಪತಿ ವಿಯೋಗ ಅನುಭವಿಸಿದ್ದ ಆ ಮಹಿಳೆ, ಆತನ ಸೌಮ್ಯ ಮಾತುಗಳಿಗೆ ಮಾರುಹೋಗಿ ವೈಯಕ್ತಿಕ ವಿವರಗಳನ್ನು ಹಂಚಿಕೊಂಡಿದ್ದರು.

ಅಂತರಂಗದ ನಂಬಿಕೆಯನ್ನು ದುರುಪಯೋಗಪಡಿಸಿಕೊಂಡ ವೀರೇಶ್, ಮಹಿಳೆಯ ಮಗಳ ಫೋಟೋಗಳನ್ನು ವಾಟ್ಸಪ್ ಸ್ಟೇಟಸ್‌ಗಳಿಂದ ಕಲೆಹಾಕಿ, ಅವುಗಳನ್ನು ಅಶ್ಲೀಲವಾಗಿ ಎಡಿಟ್ ಮಾಡಿದ್ದ. ಬಳಿಕ ಈ ಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಡುವುದಾಗಿ ಬೆದರಿಕೆ ಹಾಕಿ, ಸಂಬಂಧಿಕರ ಮೊಬೈಲ್ ನಂಬರ್‌ಗಳಿಗೂ ಇದನ್ನ ಕಳುಹಿಸುತ್ತೇನೆ ಎಂದು ಮಹಿಳೆಯನ್ನು ಬ್ಲಾಕ್‌ಮೇಲ್ ಮಾಡಿದ್ದ.

ಈ ಬೆದರಿಕೆಗಳಿಂದ ಮಾನಸಿಕ ತೊಂದರೆಗೆ ಒಳಗಾದ ಮಹಿಳೆ, ಕೊನೆಗೆ ಹುಣಸೂರು ಗ್ರಾಮಾಂತರ ಠಾಣೆ ಪೊಲೀಸರ ಶರಣಾಗಿದ್ದರು. ಪ್ರಕರಣದ ಗಂಭೀರತೆಯನ್ನು ಮನಗಂಡ ಪೊಲೀಸರು, ಎಸ್‌ಪಿ ವಿಷ್ಣುವರ್ಧನ್ ಮತ್ತು ಅಡಿಷನಲ್ ಎಸ್‌ಪಿ ಮಲ್ಲಿಕ್ ಮಾರ್ಗದರ್ಶನದಲ್ಲಿ, ಡಿವೈಎಸ್ಪಿ ಗೋಪಾಲಕೃಷ್ಣ ನೇತೃತ್ವದಲ್ಲಿ ಇನ್ಸ್ಪೆಕ್ಟರ್ ಮುನಿಯಪ್ಪ ಹಾಗೂ ಪಿಎಸ್ಸೈ ರಾಧಾ ಅವರ ತಲೆದಾರಿಯಲ್ಲಿ ವಿಶೇಷ ತಂಡವನ್ನು ರಚಿಸಿದರು.

ಆರೋಪಿಯ ಮೊಬೈಲ್ ಸಿಗ್ನಲ್ ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಗದಗ್‌ನಲ್ಲಿ ವೀರೇಶ್ ಅನ್ನು ಪತ್ತೆಹಚ್ಚಿ ಬಂಧಿಸಿದರು. ಆರೋಪಿಯನ್ನು ನ್ಯಾಯಾಂಗ ಕಸ್ಟಡಿಗೆ ಒಪ್ಪಿಸುವ ಕ್ರಮ ಜರಗಿದ್ದು, ಮುಂದೆ ಈ ಪ್ರಕರಣದ ತನಿಖೆ ವ್ಯಾಪಕವಾಗಿ ಮುಂದುವರಿಯಲಿದೆ.

nazeer ahamad

Recent Posts

ರೀಲ್ಸ್ ಹುಚ್ಚಾಟದ ದುರಂತ: ಹುಬ್ಬಳ್ಳಿಯಲ್ಲಿ ಬಾಲಕ ಸಾವು – ಇಬ್ಬರ ಬಂಧನ

ಹುಬ್ಬಳ್ಳಿಯಲ್ಲಿ ರೀಲ್ಸ್ ಮಾಡುವ ಹುಚ್ಚಾಟದಿಂದ ಸಂಭವಿಸಿದ ಭೀಕರ ಅಪಘಾತದಲ್ಲಿ 15 ವರ್ಷದ ಬಾಲಕ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು…

20 minutes ago

ಮೂಡಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಮತ್ತೊಂದು ಆರೋಪ: 2018 ರಿಂದ 2023 ರವರೆಗೆ ಮುಖ್ಯ ಶಿಕ್ಷಕಿಯ ಮೇಲೆ ಲೈಂಗಿಕ ದೌರ್ಜನ್ಯ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಸಂದೇಶ್…

13 hours ago

ರಾಜ್ಯದಲ್ಲಿ ಪಾರ್ಲೆ-ಜಿ ಉತ್ಪಾದನೆ ಸ್ಥಗಿತ, ಬಿಸ್ಕೆಟ್ ಅಭಾವದ ಆತಂಕ

Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್‌ಗಳ…

15 hours ago

ನವಲಗುಂದದಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಮುಖ್ಯಶಿಕ್ಷಕ ಬಂಧನ

ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…

1 day ago

ಮೇಲಾಧಿಕಾರಿ ಕಿರುಕುಳ ಆರೋಪ: ಪಾವಗಡದಲ್ಲಿ ಸಮಾಜ ಕಲ್ಯಾಣ ಅಧಿಕಾರಿ ಆತ್ಮಹತ್ಯೆ

ತುಮಕೂರು ಜಿಲ್ಲೆಯ Pavagada ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು…

1 day ago

14ರ ಬಾಲಕನಿಂದ ಇಬ್ಬರು ಅಪ್ರಾಪ್ತ ಬಾಲಕಿಯರು ಗರ್ಭಿಣಿ? ವೈರಲ್ ವಿಡಿಯೋಗೆ ಆಕ್ರೋಶ

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ವಿಡಿಯೋ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. X ನಲ್ಲಿ ವೈರಲ್ ಆಗಿರುವ ಈ ವಿಡಿಯೋ…

1 day ago