Categories: CrimeLatest

‘ನೀಲಿ ಡ್ರಮ್’ ಭೀತಿ: ಪತ್ನಿಯ ಬೆದರಿಕೆಗೆ ಹೆದರಿ ಆಕೆಯನ್ನು ಪ್ರಿಯಕರನ ಜೊತೆ ಕಳುಹಿಸಿದ ಪತಿ

ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ‘ನೀಲಿ ಡ್ರಮ್’ ಎಂಬ ಪದ ಕ್ರೌರ್ಯದ ಸಂಕೇತವಾಗಿ ಹರಿದಾಡುತ್ತಿದೆ. ಇದೇ ಭೀತಿಯ ನಡುವೆ, ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ವಿಚಿತ್ರ ಘಟನೆೊಂದು ಬೆಳಕಿಗೆ ಬಂದಿದೆ. ಪತ್ನಿಯ ಬೆದರಿಕೆಗೆ ಹೆದರಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಆಕೆಯ ಪ್ರಿಯಕರನ ಜೊತೆಗೇ ಕಳುಹಿಸಿಕೊಟ್ಟಿರುವುದು ಗಮನ ಸೆಳೆದಿದೆ.

ದೌಲತ್‌ಪುರ ಗ್ರಾಮದ ದಿನಗೂಲಿ ಕಾರ್ಮಿಕ ರಾಜಕುಮಾರ್ ಕಳೆದ ಏಳು ವರ್ಷಗಳಿಂದ ವೈವಾಹಿಕ ಜೀವನ ನಡೆಸುತ್ತಿದ್ದರು. ದಂಪತಿಗೆ ಆರು ತಿಂಗಳ ಮಗು ಕೂಡ ಇದೆ. ಆದರೆ, ಅವರ ಪತ್ನಿ ಸಾಮಾಜಿಕ ಜಾಲತಾಣದ ಮೂಲಕ ಪರಿಚಯವಾದ ವ್ಯಕ್ತಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾಳೆ ಎನ್ನಲಾಗಿದೆ.

ಪತ್ನಿಯ ಮೊಬೈಲ್‌ನಲ್ಲಿ ಪ್ರಿಯಕರನೊಂದಿಗೆ ತೆಗೆದ ಆಕ್ಷೇಪಾರ್ಹ ಫೋಟೋಗಳು ಮತ್ತು ಫೇಸ್‌ಬುಕ್‌ನಲ್ಲಿ “ಸಿಮೆಂಟ್ ಮತ್ತು ನೀಲಿ ಡ್ರಮ್” ಎಂಬ ಶೀರ್ಷಿಕೆಯ ಪೋಸ್ಟ್ ಕಂಡು ರಾಜಕುಮಾರ್ ಆತಂಕಗೊಂಡಿದ್ದಾರೆ. ಈ ಪೋಸ್ಟ್ ಹಿಂದಿನ ಮೀರತ್‌ನಲ್ಲಿ ನಡೆದ ಭೀಕರ ಕೊಲೆ ಪ್ರಕರಣವನ್ನು ನೆನಪಿಸುವಂತಿತ್ತು.

ಆ ಪ್ರಕರಣದಲ್ಲಿ ಮುಸ್ಕಾನ್ ಎಂಬ ಮಹಿಳೆ ತನ್ನ ಪ್ರಿಯಕರ ಸಾಹಿಲ್ ಜೊತೆ ಸೇರಿ ಪತಿಯನ್ನು ಕೊಂದು, ಶವವನ್ನು ನೀಲಿ ಡ್ರಮ್‌ನಲ್ಲಿ ಇಟ್ಟು ಸಿಮೆಂಟ್‌ನಿಂದ ಮುಚ್ಚಿದ್ದಳು. ಇದೇ ಘಟನೆಯನ್ನು ಉದಾಹರಣೆಯಾಗಿ ಉಲ್ಲೇಖಿಸಿ, “ನೀನು ಅಡ್ಡ ಬಂದರೆ ನಿನ್ನನ್ನೂ ಇದೇ ರೀತಿಯಲ್ಲಿ ಕೊಲ್ಲುತ್ತೇನೆ” ಎಂದು ಪತ್ನಿ ಬೆದರಿಕೆ ಹಾಕಿದ್ದಾಳೆ ಎಂದು ತಿಳಿದುಬಂದಿದೆ.

ಜೀವ ಭಯದಿಂದ ಕಂಗೆಟ್ಟ ರಾಜಕುಮಾರ್ ಪೊಲೀಸರನ್ನು ಸಂಪರ್ಕಿಸಿದ್ದರು. ಬಳಿಕ ಮಹಿಳಾ ಮಧ್ಯಸ್ಥಿಕೆ ಕೇಂದ್ರದಲ್ಲಿ ಕೌನ್ಸೆಲಿಂಗ್ ನಡೆಸಲಾಯಿತು. ಈ ವೇಳೆ ಪತ್ನಿ ಪ್ರಿಯಕರನೊಂದಿಗೆ ಬದುಕುವುದಾಗಿ ಹಠ ಹಿಡಿದಿದ್ದಾಳೆ.

ಕೊನೆಗೆ, ತನ್ನ ಜೀವದ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ರಾಜಕುಮಾರ್ ಪತ್ನಿಯನ್ನು ಆಕೆಯ ಪ್ರಿಯಕರನ ಜೊತೆ ಕಳುಹಿಸಲು ಒಪ್ಪಿಕೊಂಡಿದ್ದಾರೆ. “ಆಕೆ ನನಗೆ ಅಡುಗೆ ಮಾಡುತ್ತಿರಲಿಲ್ಲ, ಮಗುವಿನ ಜವಾಬ್ದಾರಿಯನ್ನೂ ಸರಿಯಾಗಿ ನಿಭಾಯಿಸುತ್ತಿರಲಿಲ್ಲ” ಎಂದು ರಾಜಕುಮಾರ್ ತಮ್ಮ ನೋವನ್ನು ವ್ಯಕ್ತಪಡಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

12 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

16 hours ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago

ಬಿಹಾರದಲ್ಲಿ ಬೆಚ್ಚಿಬೀಳಿಸುವ ಕೃತ್ಯ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ಬಂಧನ, ಪೋಕ್ಸೊ ಕೇಸ್ ದಾಖಲು

ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…

2 days ago

ಕಲಬುರಗಿಯಲ್ಲಿ ಜೆಸ್ಕಾಂ AEE ರಾಜೇಶ್ವರಿ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಕಲಬುರಗಿ: ನಿಗದಿತ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ರಾಜೇಶ್ವರಿ ಅವರ…

2 days ago