ಉಡುಪಿ ಜಿಲ್ಲೆಯ ಮಲ್ಪೆ ಬಳಿ ಶಾಕ್‌ಗುಡುಸುವ ಘಟನೆ ನಡೆದಿದೆ . ಇಲ್ಲಿನ ಜಂಕ್ಷನ್ ಸಮೀಪದಲ್ಲಿರುವ ಜಾಮೀಯಾ ಮಸೀದಿಗೆ ಸಂಬಂಧಪಟ್ಟ ಎರಡು ಮಹಡಿ ಕಟ್ಟಡದ ಶೌಚಾಲಯದಲ್ಲಿ ನವಜಾತ ಶಿಶುವೊಬ್ಬರ ಶವ ಪತ್ತೆಯಾಗಿದೆ ಎಂದು ಮಲ್ಪೆ ಪೊಲೀಸರು ತಿಳಿಸಿದ್ದಾರೆ.
ಮಸೀದಿಗೆ ಹೊಂದಿಕೊಂಡಿರುವ ಈ ಕಟ್ಟಡದಲ್ಲಿ ಕೆಲಸಗಾರರ ವಾಸಸ್ಥಳವಿದ್ದು, ಅವರ ಅನುಕೂಲಕ್ಕಾಗಿ ಕಟ್ಟಡದ ಪಕ್ಕದಲ್ಲಿ ಶೌಚಾಲಯವನ್ನು ನಿರ್ಮಿಸಲಾಗಿತ್ತು. ಮಸೀದಿಯ ವ್ಯವಸ್ಥಾಪಕ ಸುಹೇಲ್ ಅವರು ಶೌಚಾಲಯ ಉಪಯೋಗಿಸಲು ಹೋಗಿದ್ದ ವೇಳೆ ಶಿಶುವಿನ ಮೃತದೇಹವನ್ನು ಪತ್ತೆ ಹಚ್ಚಿದರು. ತಕ್ಷಣವೇ ಅವರು ಮಲ್ಪೆ ಪೊಲೀಸರಿಗೆ ವಿಷಯವನ್ನು ತಿಳಿಸಿದ್ದಾರೆ.
ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದು, ಶೌಚಾಲಯದ ಒಳಗಡೆ ರಕ್ತದ ಗುರುತುಗಳು ಕಂಡು ಬಂದಿರುವುದಾಗಿ ತಿಳಿಸಿದ್ದಾರೆ. ಶಿಶು ಹುಟ್ಟಿದ ತಕ್ಷಣವೇ ಅಥವಾ ಹುಟ್ಟುವ ಮೊದಲೇ ಮೃತಪಟ್ಟಿರುವ ಸಾಧ್ಯತೆ ಇದ್ದು, ಪ್ರಕರಣ ಅನುಮಾನಾಸ್ಪದವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಯಾರೋ ಅಪರಿಚಿತ ವ್ಯಕ್ತಿಗಳು ಶಿಶುವನ್ನು ಇಲ್ಲಿಗೆ ರಹಸ್ಯವಾಗಿ ತರಿಸಿ, ಜನನದ ಅಳಿವು ಮರೆಮಾಚಲು ಶವವನ್ನು ಈ ರೀತಿ ವಿಲೇವಾರಿ ಮಾಡಿದ ಶಂಕೆ ವ್ಯಕ್ತವಾಗಿದೆ. ಈ ಕುರಿತು ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…
ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…
ಬೆಂಗಳೂರು: ಜಿಬಿಎ ನೋಟಿಸ್ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…
ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…
ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…