ಮಂಡ್ಯ: ಮದ್ದೂರು ತಾಲೂಕಿನ ಬೆಸಗರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕೋಣಸಾಲೆ ಗ್ರಾಮದಲ್ಲಿ ಯುವಕನೊಬ್ಬ ಅನುಮಾನಾಸ್ಪದ ಪರಿಸ್ಥಿತಿಯಲ್ಲಿ ಮೃತಪಟ್ಟಿರುವ ಪ್ರಕರಣ ಬೆಳಕಿಗೆ ಬಂದಿದೆ.
ಮೃತನನ್ನು ಕೋಣಸಾಲೆ ಗ್ರಾಮದ ಪ್ರೀತಮ್ (26) ಎಂದು ಗುರುತಿಸಲಾಗಿದೆ. ಮೂರು ದಿನಗಳ ಹಿಂದೆ ಆತ ಕಾಣೆಯಾಗಿದ್ದಾನೆಂದು ಪೋಷಕರು ಬೆಸಗರಹಳ್ಳಿ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡು ಪೊಲೀಸರು ಶೋಧ ಕಾರ್ಯ ಕೈಗೊಂಡಿದ್ದರು.
ಭಾನುವಾರ, ಕೋಣಸಾಲೆ – ಮರಳಿಗ ಗ್ರಾಮಗಳ ನಡುವೆ ಹರಿಯುವ ವಿಶ್ವೇಶ್ವರಯ್ಯ ನಾಲೆಯಲ್ಲಿ ಪ್ರೀತಮ್‌ನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಯಿತು. ಸ್ಥಳೀಯರು ಶವ ಕಂಡು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದರು.
ಘಟನಾ ಸ್ಥಳಕ್ಕೆ ಮದ್ದೂರು ಗ್ರಾಮಾಂತರ ಠಾಣೆಯ ಇನ್ಸ್‌ಪೆಕ್ಟರ್ ವೆಂಕಟೇಗೌಡ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು. ಬಳಿಕ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿ, ನಂತರ ಪೋಷಕರಿಗೆ ಹಸ್ತಾಂತರ ಮಾಡಲಾಯಿತು.
ಈ ಸಂಬಂಧ ಬೆಸಗರಹಳ್ಳಿ ಪೊಲೀಸ್ ಠಾಣೆಯಲ್ಲಿ ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.
ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…
ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…
ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…
ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…
ತಮಿಳುನಾಡಿನ ಧರ್ಮಪುರಿ ಜಿಲ್ಲೆ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ. ಹರೂರು ತಾಲೂಕಿನ ಮಾವೇರಿಪಟ್ಟಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ…
ಪ್ರೇಯಸಿ ಫೋನ್ ಕರೆ ಸ್ವೀಕರಿಸದೇ, ಆಕೆ ಮೊಬೈಲ್‌ನಲ್ಲಿ ಬ್ಯುಸಿಯಾಗಿದ್ದಾಳೆ ಎಂಬ ಅಸಹನೆಯಿಂದ ಯುವಕನೊಬ್ಬ ಅಚ್ಚರಿಯ ಕೆಲಸ ಮಾಡಿದ ಘಟನೆ ವೈರಲ್…