Categories: CinemaLatest

‘ಲೀಲಮ್ಮ… ನಿನ್ನ ಗಂಡ ಯಾರಮ್ಮ?’ ಪುಸ್ತಕ ಲೋಕಾರ್ಪಣೆ: ಲೀಲಾವತಿ–ರಾಜ್‌ಕುಮಾರ್‌ ಕುರಿತ ವಿವಾದಗಳಿಗೆ ದಾಖಲೆಗಳ ಸಮೇತ ಉತ್ತರ ಎಂದ ಎನ್‌.ಆರ್‌. ರಮೇಶ್

ಕನ್ನಡದ ಹಿರಿಯ ನಟಿ ದಿವಂಗತ ಲೀಲಾವತಿ ಅವರ ಜೀವನ, ಅವರ ಪತಿ ಮಹಾಲಿಂಗ ಭಾಗವತರ್‌ ಅವರ ಹಿನ್ನೆಲೆ ಹಾಗೂ ಈ ಇಬ್ಬರ ಜೀವನಕ್ಕೆ ಸಂಬಂಧಿಸಿದ ಹಲವು ಅಂಶಗಳನ್ನು ದಾಖಲಾತಿಗಳ ಆಧಾರದಲ್ಲಿ ಬೆಳಕಿಗೆ ತರುವ ಉದ್ದೇಶದಿಂದ ರಚಿತವಾಗಿರುವ ‘ಲೀಲಮ್ಮ… ನಿನ್ನ ಗಂಡ ಯಾರಮ್ಮ?’ ಕೃತಿಯನ್ನು ಬೆಂಗಳೂರಿನಲ್ಲಿ ಲೋಕಾರ್ಪಣೆಗೊಳಿಸಲಾಯಿತು.

ಯಡಿಯೂರು ಕೆರೆ ಮುಂಭಾಗದಲ್ಲಿರುವ ಕರ್ನಾಟಕ ರತ್ನ ಡಾ. ಪುನೀತ್‌ ರಾಜ್‌ಕುಮಾರ್‌ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಪುಸ್ತಕವನ್ನು ಅಧಿಕೃತವಾಗಿ ಬಿಡುಗಡೆ ಮಾಡಲಾಯಿತು. ಈ ಕೃತಿಯನ್ನು ಅಖಿಲ ಕರ್ನಾಟಕ ಡಾ. ರಾಜ್‌ಕುಮಾರ್‌ ಅಭಿಮಾನಿ ಸಂಘಗಳ ಒಕ್ಕೂಟದ ರಾಜ್ಯ ಗೌರವಾಧ್ಯಕ್ಷ ಎನ್‌.ಆರ್‌. ರಮೇಶ್‌ ರಚಿಸಿದ್ದಾರೆ.

ಪುಸ್ತಕದ ಕುರಿತು ಮಾತನಾಡಿದ ಎನ್‌.ಆರ್‌. ರಮೇಶ್‌, ಕಳೆದ ಹಲವು ದಶಕಗಳಿಂದ ಡಾ. ರಾಜ್‌ಕುಮಾರ್‌ ಹಾಗೂ ನಟಿ ಲೀಲಾವತಿ ಅವರ ವೈಯಕ್ತಿಕ ಬದುಕಿನ ಕುರಿತು ನಿರಾಧಾರ ಆರೋಪಗಳು ಮತ್ತು ಅಪಪ್ರಚಾರಗಳು ನಡೆಯುತ್ತಿವೆ ಎಂದು ಹೇಳಿದರು. ಆ ಆರೋಪಗಳ ಸತ್ಯಾಸತ್ಯತೆಯನ್ನು ಪರಿಶೀಲಿಸಿ, ದಾಖಲೆಗಳ ಆಧಾರದ ಮೇಲೆ ನೈಜ ಮಾಹಿತಿ ಜನರ ಮುಂದಿಡುವ ಉದ್ದೇಶದಿಂದ ಈ ಕೃತಿಯನ್ನು ರಚಿಸಿರುವುದಾಗಿ ತಿಳಿಸಿದರು.

ಲೀಲಾವತಿ ಅವರ ಪತಿ ಯಾರು, ನಟ ವಿನೋದ್‌ ರಾಜ್‌ ಅವರ ತಂದೆ ಯಾರು ಹಾಗೂ ಮಹಾಲಿಂಗ ಭಾಗವತರ್‌ ಮತ್ತು ಲೀಲಾವತಿ ಅವರ ನಡುವಿನ ಸಂಬಂಧದ ಕುರಿತು ಕಳೆದ ನಾಲ್ಕು ವರ್ಷಗಳಿಂದ ಸಮಗ್ರ ದಾಖಲೆಗಳನ್ನು ಸಂಗ್ರಹಿಸಲಾಗಿದೆ ಎಂದು ಅವರು ಹೇಳಿದರು.

ಈ ಸಂಬಂಧ ತಮಿಳುನಾಡಿನ ಚೆನ್ನೈ ಹಾಗೂ ಚಂಗಲ್ಪಟ್ಟು ಜಿಲ್ಲೆಗಳಲ್ಲಿ ಲಭ್ಯವಿದ್ದ ಸ್ವತ್ತುಗಳಿಗೆ ಸಂಬಂಧಿಸಿದ ತೀರುವಳಿ ಪತ್ರ, ಕ್ರಯಪತ್ರ, ದಾನಪತ್ರ, ಪಹಣಿ, ಪಟ್ಟಾ ಸೇರಿದಂತೆ ವಿವಿಧ ಅಧಿಕೃತ ದಾಖಲೆಗಳು ಮತ್ತು ಗುರುತಿನ ದಾಖಲೆಗಳನ್ನು ಕಾನೂನುಬದ್ಧವಾಗಿ ಪಡೆದು ಪರಿಶೀಲಿಸಲಾಗಿದೆ. ಇದೇ ದಾಖಲೆಗಳನ್ನು ಆಧರಿಸಿ ಪುಸ್ತಕವನ್ನು ಸಿದ್ಧಪಡಿಸಲಾಗಿದೆ ಎಂದು ರಮೇಶ್‌ ವಿವರಿಸಿದರು.

ಕಾರ್ಯಕ್ರಮದಲ್ಲಿ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಸಿ. ಸೋಮಶೇಖರ್‌, ಪತ್ರಕರ್ತ ಬಿ. ಗಣಪತಿ, ಲೇಖಕರಾದ ದೊಡ್ಡ ಹುಲ್ಲೂರು ರುಕ್ಕೋಜಿ, ಜಗನ್ನಾಥ್‌ ಬಹುಳೆ ಹಾಗೂ ಕನ್ನಡ ಚಲನಚಿತ್ರ ನಿರ್ದೇಶಕ ಪ್ರವೀಣ್‌ ನಾಯಕ್‌ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಭ್ರಷ್ಟರ ಬೇಟೆ

Recent Posts

ಬಾಗಲಕೋಟೆಯಲ್ಲಿ ರಾತ್ರಿ 11 ಗಂಟೆಯ ಬಳಿಕ ನಿಯಮ ಉಲ್ಲಂಘಿಸಿ ಮರಳು ಸಾಗಾಟ: ನಂಬರ್ ಪ್ಲೇಟ್ ಇಲ್ಲದ ಟಿಪ್ಪರ್‌ಗಳ ಸಂಚಾರ, ಅಧಿಕಾರಿಗಳು ಮೌನ!?

ಬಾಗಲಕೋಟೆ: ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆಯೇ ಎಂಬ…

17 hours ago

ಪಾಸ್‌ಪೋರ್ಟ್ ಶುಲ್ಕ ಹೆಚ್ಚಳ: ಮಕ್ಕಳ ಮಾನ್ಯತಾ ಅವಧಿಯಲ್ಲೂ ಬದಲಾವಣೆ, ಹೊಸ ನಿಯಮ ಜಾರಿ

ನವದೆಹಲಿ: ಪಾಸ್‌ಪೋರ್ಟ್ ಅರ್ಜಿ ಶುಲ್ಕವನ್ನು ಹೆಚ್ಚಿಸುವುದರ ಜೊತೆಗೆ ಮಕ್ಕಳ ಪಾಸ್‌ಪೋರ್ಟ್‌ನ ಮಾನ್ಯತಾ ಅವಧಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆಗಳನ್ನು…

17 hours ago

ಗೌರಿಬಿದನೂರಿನಲ್ಲಿ ಅಪಘಾತಕ್ಕೆ ನಾಲ್ಕು ವರ್ಷದ ಬಾಲಕಿ ಬಲಿ

ತಾಯಿ-ತಂದೆಯಿಲ್ಲದ ವೇದಳನ್ನು ಕಳೆದುಕೊಂಡ ಅಜ್ಜಿ-ತಾತನ ಆಕ್ರಂದನ ಗೌರಿಬಿದನೂರು: ನಗರದಲ್ಲಿ ಅಪಘಾತಗಳ ಸರಣಿ ಮುಂದುವರಿದಿರುವ ನಡುವೆಯೇ ಮತ್ತೊಂದು ಮನಕಲಕುವ ರಸ್ತೆ ದುರಂತ…

4 days ago

ಸರ್ಕಾರಿ ಶಾಲಾ ಮಕ್ಕಳಿಗೆ ಅನ್ಯಾಯ: ನೂರು ರೂಪಾಯಿಗೂ ಬೆಲೆಬಾಳದ ಶೂಗಳನ್ನು ವಿತರಿಸಿರುವ ಸರ್ಕಾರ, ಒಂದೇ ತಿಂಗಳಿಗೆ ಹಾಳದ ಶೂಗಳು..!

ಕಳೆದ ವರ್ಷದ 265 ರೂ. ಬೆಲೆಯ ಶೂಗಳು ಇನ್ನೂ ಬಾಳಿಕೆ; ಪ್ರಸಕ್ತ ಸಾಲಿನಲ್ಲಿ ವಿತರಿಸಿದ ಶೂಗಳ ಗುಣಮಟ್ಟದ ಬಗ್ಗೆ ಅಸಮಾಧಾನ…

4 days ago

50 ಲಕ್ಷ ರೂ. ಲಂಚ ಸ್ವೀಕರಿಸುವಾಗ ಧಾರವಾಡ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ: ಖರಾಬು ಜಮೀನು ದಾಖಲೆ ತಿದ್ದುಪಡಿಗೆ ಬೇಡಿಕೆ..!

ಧಾರವಾಡ: ಕೋಟ್ಯಂತರ ರೂಪಾಯಿ ಮೌಲ್ಯದ ಖರಾಬು ಜಮೀನಿನ ದಾಖಲೆಗಳನ್ನು ತಿದ್ದುಪಡಿ ಮಾಡಿಕೊಡುವುದಾಗಿ ಹೇಳಿ 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ…

4 days ago

ಪಂಚಾಯಿತಿ ಕಚೇರಿಯಲ್ಲೇ ಆಸ್ತಿ ವಿವಾದಕ್ಕೆ ರಕ್ತದೊಕುಳಿ: ಅಣ್ಣ–ತಮ್ಮಂದಿರ ಜಗಳದಲ್ಲಿ ತಂದೆ–ಮಗಳು ಕೊಲೆ, ಮತ್ತೊಬ್ಬನಿಗೆ ಗಂಭೀರ ಗಾಯ

ಕಿತ್ತೂರು: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಣ್ಣ–ತಮ್ಮಂದಿರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ತಂದೆ–ಮಗಳನ್ನು ಕೊಚ್ಚಿ…

5 days ago