Latest

ಮಧುಗಿರಿಯಲ್ಲಿ ಬಾಲಕನ ಆತ್ಮಹತ್ಯೆ: ಅನಾರೋಗ್ಯ, ಪರೀಕ್ಷಾ ಫಲಿತಾಂಶದಿಂದ ಖಿನ್ನತೆ ಹಿನ್ನೆಲೆಯಲ್ಲಿ ದಾರುಣ ಘಟನೆ

ತುಮಕೂರು: ಅನಾರೋಗ್ಯ ಹಾಗೂ ಪರೀಕ್ಷಾ ಫಲಿತಾಂಶದಿಂದ ಖಿನ್ನತೆಗೆ ಒಳಗಾಗಿದ್ದ 19 ವರ್ಷದ ಬಾಲಕನು ಆತ್ಮಹತ್ಯೆಗೆ ಶರಣಾದ ಮರುಮನಸ್ಸು ಮಾಡಬಲ್ಲ ದುರ್ಘಟನೆ ಮಧುಗಿರಿಯಲ್ಲಿ ನಡೆದಿದೆ. ಮೃತ ಬಾಲಕನನ್ನು ಅಕ್ಷಯ್ ಎಂದು ಗುರುತಿಸಲಾಗಿದೆ.

ಮಧುಗಿರಿ ಪಟ್ಟಣದ ಕಪ್ಪಣ್ಣನ ಬೀದಿಯಲ್ಲಿ ವಾಸವಿದ್ದ ಅಕ್ಷಯ್, ಸ್ಥಳೀಯ ಖಾಸಗಿ ಶಾಲೆಯಲ್ಲಿ 10ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿದ್ದು, ಇತ್ತೀಚೆಗಿನ ಪರೀಕ್ಷೆಯಲ್ಲಿ ನಾಲ್ಕು ವಿಷಯಗಳಲ್ಲಿ ಅನುತ್ತೀರ್ಣನಾಗಿದ್ದ. ನಂತರ ನಡೆದ ಮರುಪರೀಕ್ಷೆಯಲ್ಲಿ ಕೇವಲ ಎರಡು ವಿಷಯಗಳಲ್ಲಿ ಮಾತ್ರ ಪಾಸಾಗಿದ್ದು, ಉಳಿದ ವಿಷಯಗಳಲ್ಲಿ ಪುನಃ ಅನುತ್ತೀರ್ಣನಾಗಿದ್ದ.

ಶಾರೀರಿಕವಾಗಿ ಮೂರ್ಛೆ ರೋಗದಿಂದ ಬಳಲುತ್ತಿದ್ದ ಅಕ್ಷಯ್, ಈ ಎಲ್ಲ ಕಾರಣಗಳಿಂದಾಗಿ ಮಾನಸಿಕವಾಗಿ ತೀವ್ರ ಖಿನ್ನತೆಯಲ್ಲಿದ್ದ. ಸೋಮವಾರದಂದು ತಂದೆ ಜಮೀನಿಗೆ ಹೋಗಿದ್ದರೆ, ತಾಯಿ ಗ್ರಾಮ ಪಂಚಾಯತ್‌ನಲ್ಲಿ ಕಂಪ್ಯೂಟರ್ ಆಪರೇಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಅಕ್ಷಯ್ ನೇಣು ಹಾಕಿಕೊಂಡು ಜೀವ ತೆತ್ತಿದ್ದಾನೆ.

ಪರಸ್ಥಿತಿಯನ್ನು ಗಮನಿಸಿದ ನೆರೆಹೊರೆಯವರು ತಕ್ಷಣವೇ ಪೊಲೀಸರು ಹಾಗೂ ಪೋಷಕರಿಗೆ ಮಾಹಿತಿ ನೀಡಿದ್ದು, ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ.

ಈ ದುರ್ಘಟನೆ ವಿದ್ಯಾರ್ಥಿಗಳ ಮೇಲೆ ಪರೀಕ್ಷಾ ಒತ್ತಡ ಹಾಗೂ ಆರೋಗ್ಯ ಸಮಸ್ಯೆಗಳ ಪರಿಣಾಮ ಎಷ್ಟು ದುರ್ಘಟನೆಯಾಗಬಹುದು ಎಂಬುದಕ್ಕೆ ಸ್ಪಷ್ಟ ಉದಾಹರಣೆಯಾಗಿದೆ.

nazeer ahamad

Recent Posts

ಬಸವನ ಬಾಗೇವಾಡಿಯಲ್ಲಿ ಅಕ್ರಮ LPG ರೀಫಿಲ್ಲಿಂಗ್ ಆರೋಪ: ಅಧಿಕಾರಿಗಳ ಮೌನಕ್ಕೆ ಸಾರ್ವಜನಿಕರ ಆಕ್ರೋಶ

ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ನಗರದಲ್ಲಿ ಗೃಹಬಳಕೆಯ LPG ಸಿಲಿಂಡರ್‌ಗಳಿಂದ ಆಟೋಗಳಿಗೆ ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡಲಾಗುತ್ತಿದೆ ಎಂಬ ಆರೋಪ…

6 hours ago

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

1 day ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

2 days ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

2 days ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

2 days ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

2 days ago