ಇತ್ತೀಚೆಗಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಮೇಘನಾ ರಾಜ್ ಮತ್ತು ವಿಜಯ ರಾಘವೇಂದ್ರ ಇಬ್ಬರೂ ಮದುವೆಯಾಗಲಿದ್ದಾರೆ ಎಂಬ ವದಂತಿ ಭಾರೀ ವೈರಲ್ ಆಗಿತ್ತು. ಈ ಬಗ್ಗೆ ಹಲವು ಊಹಾಪೋಹಗಳು ಹರಿದಾಡುತ್ತಿದ್ದರೆ, ಇದೀಗ ಇವರೆಗೆ ಮೌನ ವಹಿಸಿದ್ದ ಇಬ್ಬರು ಕಲಾವಿದರು ಸ್ಪಷ್ಟನೆ ನೀಡಿರುವ ಮೂಲಕ ವದಂತಿಗಳಿಗೆ ತೆರೆ ಹಾಕಿದ್ದಾರೆ.
ವಿಜಯ ರಾಘವೇಂದ್ರ ತಮ್ಮ ಪ್ರತಿಕ್ರಿಯೆಯಲ್ಲಿ, “ಮೇಘನಾ ನನ್ನ ಗೆಳತಿ ಮಾತ್ರ. ನಾವು ಒಟ್ಟಾಗಿ ಕೆಲ ಸಿನಿಮಾ ಯೋಜನೆಗಳಲ್ಲಿ ಭಾಗವಹಿಸಿದ್ದೇವೆ ಅಷ್ಟೆ. ಮದುವೆ ವಿಚಾರದ ಸುದ್ದಿ ಸಂಪೂರ್ಣ ಸುಳ್ಳು. ನಾನು ಇಂತಹ ಯೋಚನೆ ಕೂಡಾ ಮಾಡಿಲ್ಲ,” ಎಂದು ಖಂಡಿತವಾಗಿ ಹೇಳಿಕೊಂಡಿದ್ದಾರೆ.
ಇದೇ ಹಾದಿಯಲ್ಲಿ ಮೇಘನಾ ರಾಜ್ ಕೂಡಾ ಪ್ರತಿಕ್ರಿಯೆ ನೀಡಿದ್ದು, “ಈ ಸುದ್ದಿ ಶುದ್ಧ ಸುಳ್ಳು. ನಾನು ವಿಜಯರಾಘವೇಂದ್ರ ಅವರನ್ನು ಮದುವೆಯಾಗುವ ಬಗ್ಗೆ ಯಾವುದೇ ರೀತಿಯ ಯೋಚನೆಯೂ ಮಾಡಿಲ್ಲ. ನಾವು ಸ್ನೇಹಿತರು ಅಷ್ಟೆ. ನಮ್ಮ ನಡುವೆ ವೈಯಕ್ತಿಕ ಸಂಬಂಧವಿಲ್ಲ,” ಎಂದು ಸ್ಪಷ್ಟಪಡಿಸಿದ್ದಾರೆ.
ಇಂತಹ ತಾರ್ಕಿಕರ ನಿರಾಧಾರ ಫೇಕ್ ಸುದ್ದಿಗಳಿಂದ ಬೇಸತ್ತಿರುವ ಮೇಘನಾ ಮತ್ತು ವಿಜಯ, ಇಂತಹ ವದಂತಿಗಳನ್ನು ಹರಡುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ ಚಿಂತನೆ ನಡೆಸುತ್ತಿದ್ದಾರೆ. ಪ್ರೆಸ್ ಮೀಟ್ ಮೂಲಕ ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಬಹಿರಂಗಪಡಿಸುವ ಸಾಧ್ಯತೆಯೂ ಇದೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…