Latest

“ಮೇಘನಾ ರಾಜ್ – ವಿಜಯ ರಾಘವೇಂದ್ರ ಮದುವೆ ವದಂತಿಗೆ ಬ್ರೇಕ್: ಇಬ್ಬರಿಬ್ಬರಿಂದ ಖಡಕ್ ಸ್ಪಷ್ಟನೆ”

ಇತ್ತೀಚೆಗಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಮೇಘನಾ ರಾಜ್ ಮತ್ತು ವಿಜಯ ರಾಘವೇಂದ್ರ ಇಬ್ಬರೂ ಮದುವೆಯಾಗಲಿದ್ದಾರೆ ಎಂಬ ವದಂತಿ ಭಾರೀ ವೈರಲ್ ಆಗಿತ್ತು. ಈ ಬಗ್ಗೆ ಹಲವು ಊಹಾಪೋಹಗಳು ಹರಿದಾಡುತ್ತಿದ್ದರೆ, ಇದೀಗ ಇವರೆಗೆ ಮೌನ ವಹಿಸಿದ್ದ ಇಬ್ಬರು ಕಲಾವಿದರು ಸ್ಪಷ್ಟನೆ ನೀಡಿರುವ ಮೂಲಕ ವದಂತಿಗಳಿಗೆ ತೆರೆ ಹಾಕಿದ್ದಾರೆ.

ವಿಜಯ ರಾಘವೇಂದ್ರ ತಮ್ಮ ಪ್ರತಿಕ್ರಿಯೆಯಲ್ಲಿ, “ಮೇಘನಾ ನನ್ನ ಗೆಳತಿ ಮಾತ್ರ. ನಾವು ಒಟ್ಟಾಗಿ ಕೆಲ ಸಿನಿಮಾ ಯೋಜನೆಗಳಲ್ಲಿ ಭಾಗವಹಿಸಿದ್ದೇವೆ ಅಷ್ಟೆ. ಮದುವೆ ವಿಚಾರದ ಸುದ್ದಿ ಸಂಪೂರ್ಣ ಸುಳ್ಳು. ನಾನು ಇಂತಹ ಯೋಚನೆ ಕೂಡಾ ಮಾಡಿಲ್ಲ,” ಎಂದು ಖಂಡಿತವಾಗಿ ಹೇಳಿಕೊಂಡಿದ್ದಾರೆ.

ಇದೇ ಹಾದಿಯಲ್ಲಿ ಮೇಘನಾ ರಾಜ್ ಕೂಡಾ ಪ್ರತಿಕ್ರಿಯೆ ನೀಡಿದ್ದು, “ಈ ಸುದ್ದಿ ಶುದ್ಧ ಸುಳ್ಳು. ನಾನು ವಿಜಯರಾಘವೇಂದ್ರ ಅವರನ್ನು ಮದುವೆಯಾಗುವ ಬಗ್ಗೆ ಯಾವುದೇ ರೀತಿಯ ಯೋಚನೆಯೂ ಮಾಡಿಲ್ಲ. ನಾವು ಸ್ನೇಹಿತರು ಅಷ್ಟೆ. ನಮ್ಮ ನಡುವೆ ವೈಯಕ್ತಿಕ ಸಂಬಂಧವಿಲ್ಲ,” ಎಂದು ಸ್ಪಷ್ಟಪಡಿಸಿದ್ದಾರೆ.

ಇಂತಹ ತಾರ್ಕಿಕರ ನಿರಾಧಾರ ಫೇಕ್  ಸುದ್ದಿಗಳಿಂದ ಬೇಸತ್ತಿರುವ ಮೇಘನಾ ಮತ್ತು ವಿಜಯ, ಇಂತಹ ವದಂತಿಗಳನ್ನು ಹರಡುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ ಚಿಂತನೆ ನಡೆಸುತ್ತಿದ್ದಾರೆ. ಪ್ರೆಸ್ ಮೀಟ್ ಮೂಲಕ ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಬಹಿರಂಗಪಡಿಸುವ ಸಾಧ್ಯತೆಯೂ ಇದೆ.

 

nazeer ahamad

Recent Posts

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

20 hours ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

1 day ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

1 day ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

2 days ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

2 days ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

2 days ago