ಕಲಬುರಗಿ: ಸರ್ಕಾರದ ವಸತಿ ಯೋಜನೆಯ ಅನುದಾನ ಬಿಡುಗಡೆ ಮಾಡಲು ಫಲಾನುಭವಿಯಿಂದ ಫೋನ್‌ಪೇ ಮೂಲಕ ಲಂಚ ಪಡೆಯುತ್ತಿದ್ದ ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್‌ನನ್ನು ಕಲಬುರಗಿ ಲೋಕಾಯುಕ್ತ ಪೊಲೀಸರು ಬಲೆಗೆ ಬೀಳಿಸಿದ್ದಾರೆ.
ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ಹನಿಕೇರಾ ಗ್ರಾಮದ ರಾಮನಾಯಕ ತಾಂಡಾದ ನಿವಾಸಿ ಸಿಖಂದರ್ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಅವರ ಅಕ್ಕ ಸವಿತಾ ಅವರಿಗೆ ಡಾ. ಬಿ.ಆರ್. ಅಂಬೇಡ್ಕರ್ ನಿವಾಸ ಯೋಜನೆ ಅಡಿಯಲ್ಲಿ ಮನೆ ಮಂಜೂರಾಗಿದ್ದು, ಯೋಜನೆಯ 3ನೇ ಹಾಗೂ 4ನೇ ಕಂತಿನ ಅನುದಾನ ಬಿಡುಗಡೆ ಮಾಡಲು ಕರದಾಳ ಗ್ರಾಮ ಪಂಚಾಯಿತಿಯ ಬಿಲ್ ಕಲೆಕ್ಟರ್ ಸಂತೋಷ ರಾಠೋಡ ₹22 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.
ನಂತರ ಮಾತುಕತೆಯ ವೇಳೆ ₹15 ಸಾವಿರವನ್ನು ತನ್ನ ಫೋನ್‌ಪೇ ಖಾತೆಗೆ ವರ್ಗಾಯಿಸುವಂತೆ ಆರೋಪಿ ಸೂಚಿಸಿದ್ದಾನೆ. ಅದರಂತೆ ದೂರುದಾರರು ಡಿಜಿಟಲ್ ಪಾವತಿ ಮಾಡಿದ ವೇಳೆ, ಪೂರ್ವಸಿದ್ಧತೆಯೊಂದಿಗೆ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಸಂತೋಷ ರಾಠೋಡನನ್ನು ಲಂಚದ ಹಣ ಸ್ವೀಕರಿಸುತ್ತಿದ್ದಾಗಲೇ ಬಂಧಿಸಿದ್ದಾರೆ.
ಈ ದಾಳಿ ಕಲಬುರಗಿ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಸಿದ್ದರಾಜು ಸಿ. ಅವರ ಮಾರ್ಗದರ್ಶನದಲ್ಲಿ, ಪೊಲೀಸ್ ಇನ್ಸ್‌ಪೆಕ್ಟರ್ ರಾಜಶೇಖರ ಬಡದೇಸಾರ ಅವರ ನೇತೃತ್ವದಲ್ಲಿ ಯಶಸ್ವಿಯಾಗಿ ನಡೆಯಿತು.
ಬಂಧಿತ ಆರೋಪಿಯನ್ನು ವಶಕ್ಕೆ ಪಡೆದಿರುವ ಲೋಕಾಯುಕ್ತ ಅಧಿಕಾರಿಗಳು, ಮುಂದಿನ ತನಿಖೆ ಪೂರ್ಣಗೊಳಿಸಿದ ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ 21 ವರ್ಷದ ಯುವತಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ…
ಹಾಸನ: ಹಾಸನದಿಂದ ಬೆಂಗಳೂರಿನತ್ತ ತೆರಳುತ್ತಿದ್ದ KSRTC ಬಸ್‌ನಲ್ಲಿ ಯುವತಿಯೊಬ್ಬರಿಗೆ ಸಹ ಪ್ರಯಾಣಿಕನೊಬ್ಬ ಅನುಚಿತವಾಗಿ ವರ್ತಿಸಿದ ಆರೋಪ ಕೇಳಿಬಂದಿದ್ದು, ಇದರಿಂದ ಬಸ್‌ನಲ್ಲಿ…
ಉನ್ನತ ವ್ಯಾಸಂಗದ ಕನಸು ಹೊತ್ತು ವಿದೇಶಕ್ಕೆ ತೆರಳಿದ್ದ ಉತ್ತರ ಪ್ರದೇಶದ ಯುವಕನ ಜೀವನ ಇದೀಗ ಸಂಪೂರ್ಣ ಬದಲಾಗಿದೆ. ಎಂಬಿಬಿಎಸ್ ಓದಲು…
ದೆಹಲಿಯ ಉತ್ತಮ್ ನಗರದಲ್ಲಿ 24 ವರ್ಷದ ಯುವಕನೊಬ್ಬನನ್ನು ಸ್ಥಳೀಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಳಿಕ, ಆತನ ಮೊಬೈಲ್‌ನಲ್ಲಿ ಪತ್ತೆಯಾದ…
ಕಿತ್ತೂರು: ಚನ್ನಮ್ಮನ ಕಿತ್ತೂರಿನಲ್ಲಿ ನಡೆದ ಆಭರಣ ಅಂಗಡಿ ಕಳ್ಳತನ ಪ್ರಕರಣವನ್ನು ಕಿತ್ತೂರು ಪೊಲೀಸರು ಭೇದಿಸಿದ್ದು, ರಾಜಸ್ಥಾನ ಮೂಲದ ನಾಲ್ವರು ಹಾಗೂ…
ಬೆಳಗಾವಿ:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಅನುಷ್ಠಾನದ ಕುರಿತು ನೈರುತ್ಯ ಆರ್ಟ ಮೀಡಿಯಾ ಸಂಸ್ಥೆ (ಬೆಂಗಳೂರು)…