ಶಹಜಹಾನ್‌ಪುರ: ಉತ್ತರ ಪ್ರದೇಶದ ಶಹಜಹಾನ್‌ಪುರ ಮಹಾನಗರ ಪಾಲಿಕೆಯ ಹಲವು ಕಾರ್ಪೊರೇಟರ್‌ಗಳು ಗಂಗಾಜಲವನ್ನು ಕೈಯಲ್ಲಿ ಹಿಡಿದು ಲಂಚದ ಹಣವನ್ನು ತಮ್ಮ ನಡುವೆ ಸಮಾನವಾಗಿ ಹಂಚಿಕೊಳ್ಳುವುದಾಗಿ ಪ್ರಮಾಣ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಭಾರೀ ಚರ್ಚೆಗೆ ಕಾರಣವಾಗಿದೆ.
ವೈರಲ್ ವಿಡಿಯೋದಲ್ಲಿ, ಓರ್ವ ಕಾರ್ಪೊರೇಟರ್ ಗಂಗಾಜಲವಿರುವ ಪಾತ್ರೆಯನ್ನು ಹಿಡಿದು ಪ್ರಮಾಣ ಮಾಡುತ್ತಿರುವುದು ಕಂಡುಬಂದಿದೆ. ಪಾಲಿಕೆಗೆ ಬರುವ ಲಂಚದ ಹಣವನ್ನು ಎಲ್ಲಾ 60 ಕಾರ್ಪೊರೇಟರ್‌ಗಳು ಸಮಾನವಾಗಿ ಹಂಚಿಕೊಳ್ಳಬೇಕು. ಯಾರಾದರೂ ಸಂಕಷ್ಟಕ್ಕೆ ಸಿಲುಕಿದರೆ ಎಲ್ಲರೂ ಒಗ್ಗಟ್ಟಿನಿಂದ ಅವರ ಬೆಂಬಲಕ್ಕೆ ನಿಲ್ಲಬೇಕು ಎಂದು ಅವರು ಹೇಳುತ್ತಿರುವುದು ವಿಡಿಯೋದಲ್ಲಿದೆ.
ಈ ವೇಳೆ ಇತರ ಕಾರ್ಪೊರೇಟರ್‌ಗಳು ಕೂಡ ಇದೇ ಮಾತುಗಳನ್ನು ಪುನರುಚ್ಚರಿಸಿದ್ದಾರೆ. ಅಲ್ಲದೆ, ಈ ಪ್ರಮಾಣವನ್ನು ಯಾರಾದರೂ ಉಲ್ಲಂಘಿಸಿದರೆ ಅವರನ್ನು ದ್ರೋಹಿ ಎಂದು ಪರಿಗಣಿಸುವುದಾಗಿ ಹೇಳಿರುವುದು ಕೂಡ ವಿಡಿಯೋದಲ್ಲಿ ದಾಖಲಾಗಿದೆ.
ವಿಡಿಯೋ ವೈರಲ್ ಆದ ಬೆನ್ನಲ್ಲೇ ಶಹಜಹಾನ್‌ಪುರ ಮಹಾನಗರ ಪಾಲಿಕೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ಆರೋಪಗಳ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆ ಆರಂಭವಾಗಿದೆ. ಕೆಲವರು ಕಾರ್ಪೊರೇಟರ್‌ಗಳ ಆಸ್ತಿ ಮತ್ತು ಜೀವನಶೈಲಿಯ ಬಗ್ಗೆಯೂ ಪ್ರಶ್ನೆಗಳನ್ನು ಎತ್ತಿದ್ದಾರೆ.
Yogi Adityanath ji should take immediate action against councillors who are openly talking about corruption, rising above party politics and acting against such conduct regardless of which party holds the majority.
— The Frustrated Indian (@FrustIndian) August 25, 2026
In Shahjahanpur, Uttar Pradesh, municipal councillors reportedly… pic.twitter.com/MQd9V4zJi1
ಈ ನಡುವೆ, ವಿಡಿಯೋ ಕುರಿತು ಪ್ರತಿಕ್ರಿಯಿಸಿರುವ ಮಹಾನಗರ ಪಾಲಿಕೆ ಆಯುಕ್ತೆ ಸೌಮ್ಯಾ ಗುರುರಾಣಿ, ವೈರಲ್ ಆಗಿರುವ ವಿಡಿಯೋ 2025ರ ನವೆಂಬರ್ ತಿಂಗಳದ್ದು ಎಂದು ತಿಳಿಸಿದ್ದಾರೆ. ಆ ಸಂದರ್ಭದಲ್ಲಿ ಪಾಲಿಕೆಗೆ ಬೇರೆ ಆಯುಕ್ತರು ಕಾರ್ಯನಿರ್ವಹಿಸುತ್ತಿದ್ದರು ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಆದಾಗ್ಯೂ, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವುದಾಗಿ ತಿಳಿಸಿರುವ ಆಯುಕ್ತೆ, ಈ ಕುರಿತು ತನಿಖೆಗೆ ಆದೇಶಿಸಲಾಗಿದೆ. ತನಿಖಾ ವರದಿ ಆಧರಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ವಿಡಿಯೋ ನಿಜವಾಗಿಯೂ ಲಂಚ ಹಂಚಿಕೆ ಕುರಿತ ಪ್ರಮಾಣವೇ ಅಥವಾ ಬೇರೆ ಸಂದರ್ಭದಲ್ಲಿನ ದೃಶ್ಯವೇ ಎಂಬುದರ ಬಗ್ಗೆ ತನಿಖೆಯಿಂದ ಸ್ಪಷ್ಟತೆ ಸಿಗಬೇಕಿದೆ.
ಬೆಂಗಳೂರು: ಈದ್ ಮಿಲಾದ್ ಮೆರವಣಿಗೆ ವೇಳೆ ಬಸವನಗುಡಿಯ ಎನ್.ಆರ್. ರಸ್ತೆಯಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ…
ಕೊಲ್ಲಂ: ನಾಗರಿಕ ಸಮಾಜವೇ ಬೆಚ್ಚಿಬೀಳುವಂತಹ ಪ್ರಕರಣವೊಂದು ಕೇರಳದ ಕೊಲ್ಲಂನಲ್ಲಿ ಬೆಳಕಿಗೆ ಬಂದಿದೆ. ಪತ್ನಿಯ ಖಾಸಗಿ ವಿಡಿಯೋಗಳನ್ನು ಅಶ್ಲೀಲ ವೆಬ್‌ಸೈಟ್‌ಗಳಿಗೆ ಅಪ್‌ಲೋಡ್…
ಯಲ್ಲಾಪುರ: 2001ರಲ್ಲಿ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 25 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು…
ಬೆಂಗಳೂರು–ಮೈಸೂರು ಸಂಪರ್ಕವನ್ನು ಸುಧಾರಿಸುವುದು ಹಾಗೂ ಬೆಂಗಳೂರಿನ ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ರೂಪುಗೊಂಡಿದ್ದ ಬೆಂಗಳೂರು–ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ (BMICP)…
ಬೆಂಗಳೂರು: ಹುಳಿಮಾವು ಸಮೀಪದ ಬಸವನಪುರದಲ್ಲಿ ಲೀಲಾ-ಮಂಜ-ಸಂತು ನಡುವಿನ ತ್ರಿಕೋನ ಪ್ರೇಮಕಥೆ ಮತ್ತೆ ಸದ್ದು ಮಾಡಿದೆ. ಪತ್ನಿ ಲೀಲಾ ದೂರವಾಗಿದ್ದಾಳೆ ಎಂಬ…
ಮೀರತ್: ರಕ್ಷಣೆ ನೀಡಬೇಕಾದ ಪೊಲೀಸನೇ ಯುವತಿಯೊಬ್ಬಳಿಗೆ ವಂಚನೆ ಎಸಗಿದ ಆರೋಪ ಉತ್ತರ ಪ್ರದೇಶದ ಮೀರತ್‌ನಲ್ಲಿ ಕೇಳಿಬಂದಿದೆ. ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ…