Latest

ಲಂಚ ಆರೋಪ: ಮಹಾನಗರ ಪಾಲಿಕೆಯ ಅಧಿಕಾರಿಗೆ 1 ಕೋಟಿ ರೂ. ದಂಡ; 4 ವರ್ಷ ಸಜೆ

ಮಂಗಳೂರು: ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಲಂಚ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿ ಶಿವಲಿಂಗ ಕೊಂಡಗುಳಿ ಅವರಿಗೆ 1 ಕೋಟಿ ರೂ. ದಂಡ, ನಾಲ್ಕು ವರ್ಷಗಳ ಸಾದಾ ಶಿಕ್ಷೆ ವಿಧಿಸಿ 3ನೆ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.

ಆರೋಪಿ ಶಿವಲಿಂಗ ಕೊಂಡಗುಳಿ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿದ್ದಾರೆಂಬ ಮಾಹಿತಿ ಮೇರೆಗೆ 2013ರ ಫೆಬ್ರವರಿ 15ರಂದು ಮಂಗಳೂರು ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದರು.

ಜಿಲ್ಲಾ ಸತ್ರ ನ್ಯಾಯಾಲಯ ಈ ಪ್ರಕರಣದ ವಿಚಾರಣೆ ನಡೆಸಿದ್ದು, ನ್ಯಾಯಾಧೀಶ ಬಿ.ಬಿ. ಜಕಾತಿ ಇಂದು ಅಂತಿಮ ತೀರ್ಪು ನೀಡಿದ್ದಾರೆ. ಆರೋಪಿ ವಿರುದ್ಧ ಕಲಂ 13(1) (ಇ) ಜತೆಗೆ 13(2) ಲಂಚ ನಿರೋಧ ಕಾಯ್ದೆ 1988ರಂತೆ ಶಿಕ್ಷೆ ವಿಧಿಸಿ ತೀರ್ಪು ನೀಡಲಾಗಿದೆ. ಆರೋಪಿ ದಂಡ ಕಟ್ಟಲು ವಿಫಲನಾದಲ್ಲಿ ಮತ್ತೆ 1 ವರ್ಷ ಸಾದಾ ಸಜೆಗೆ ಆದೇಶಿಸಿ ಅಂತಿಮ ತೀರ್ಪು ನೀಡಲಾಗಿದೆ.

ಹಾಲಿ ಶಿವಾನಂದ ಕುಂಡಗುಳಿ ಹಿರಿಯ ನೈರ್ಮಲ್ಯ ನಿರೀಕ್ಷರಾಗಿ ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಕರ್ತವ್ಯದಲ್ಲಿದ್ದಾರೆ.

ಪ್ರಕರಣದಲ್ಲಿ ಲೋಕಾಯುಕ್ತ ಮಂಗಳೂರು ಪೊಲೀಸ್ ಉಪಾಧೀಕ್ಷಕರಾದ ಉಮೇಶ್ ಜಿ. ಶೇಟ್ ಸಮಗ್ರ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಮಂಗಳೂರು ಲೋಕಾಯುಕ್ತದ ವಿಶೇಷ ಸಾರ್ವಜನಿಕ ಅಭಿಯೋಜಕ ರವೀಂದ್ರ ಮುನ್ನಿಪಾಡಿ ಸರಕಾರದ ಪರವಾಗಿ ವಾದ ಮಂಡಿಸಿದ್ದರು.

ಭ್ರಷ್ಟರ ಬೇಟೆ

Recent Posts

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

40 minutes ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

6 hours ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

21 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

1 day ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago