Latest

ಲಂಚದ ಪ್ರಕರಣ: 6 ಲಕ್ಷ ರೂ. ಕೇಸ್‌ನಲ್ಲಿ ಇನ್ಸ್‌ಪೆಕ್ಟರ್ ಹಾಗೂ ಸಬ್ ಇನ್‌ಸ್ಪೆಕ್ಟರ್ ಬಂಧನ”

ಬೆಂಗಳೂರು: ಲಂಚ ತೆಗೆದುಕೊಳ್ಳುತ್ತಿದ್ದ ಪ್ರಕರಣದಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳು ಲೋಕಾಯುಕ್ತದ ಬಲೆಗೆ ಬಿದ್ದಿರುವ ಗಂಭೀರ ಘಟನೆ ನಡೆದಿದೆ. ಪ್ರಕರಣದ ಇತ್ಯರ್ಥಕ್ಕಾಗಿ 6 ಲಕ್ಷ ರೂಪಾಯಿ ಲಂಚ ಬೇಡಿಕೆಯಿಟ್ಟಿದ್ದನ್ನು ಪರಿಶೀಲಿಸಿದ ಲೋಕಾಯುಕ್ತ ಅಧಿಕಾರಿಗಳು, ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಲಂಚಕ್ಕಾಗಿ ಆರೋಪಿಯಾದವರು ಕೆಂಪೇಗೌಡ ನಗರ ಠಾಣೆಯ ಇನ್ಸ್‌ಪೆಕ್ಟರ್ ಶಿವಾಜಿರಾವ್ ಹಾಗೂ ಸಬ್ ಇನ್‌ಸ್ಪೆಕ್ಟರ್ ಶಿವಾನಂದ್. ಇವರ ವಿರುದ್ಧ ಕೇಶವಮೂರ್ತಿ ಎಂಬುವವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ದೂರು ಸ್ವೀಕರಿಸಿದ ಲೋಕಾಯುಕ್ತ ಎಸ್‌ಪಿ ಶ್ರೀನಾಥ್ ಅವರ ನೇತೃತ್ವದಲ್ಲಿ ವಿಶೇಷ ತಂಡದೊಂದು ಕಾರ್ಯಾಚರಣೆ ನಡೆಸಿತು.

ದಾಳಿಯ ವೇಳೆ ಆರೋಪಿಗಳು ಲಂಚದ ಮೊತ್ತವನ್ನೂ ತೆಗೆದುಕೊಳ್ಳುತ್ತಿದ್ದ ಸಂದರ್ಭದಲ್ಲಿ ಹಿಡಿದಿಕೊಳ್ಳಲಾಗಿದ್ದು, ಸ್ಥಳದಲ್ಲಿ 1 ಲಕ್ಷ ರೂ. ನಗದುವನ್ನು ಜಪ್ತಿ ಮಾಡಲಾಗಿದೆ. ಉಳಿದ ಹಣವನ್ನು ನಂತರ ನೀಡಲು ನಿರ್ಧರಿಸಿದ್ದೆಂದು ತಿಳಿದು ಬಂದಿದೆ.

ಪ್ರಸ್ತುತ ಇಬ್ಬರು ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ. ಲಂಚ ಬೇಡಿಕೆ ಇಟ್ಟಿರುವ ಬಗ್ಗೆ ಸತ್ಯಾಂಶ ಹೊರಬಿದ್ದ ಹಿನ್ನೆಲೆಯಲ್ಲಿ ಬೃಹತ್ ಪೊಲೀಸ್ ಇಲಾಖೆಯೇ ಹಿಗ್ಗುಮುಖವಾಗಿದ್ದು, ಈ ಪ್ರಕರಣವೇ ಮತ್ತಷ್ಟು ದಿಕ್ಕು ತೋರಿಸುವ ಸಾಧ್ಯತೆ ಇದೆ.

nazeer ahamad

Recent Posts

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

15 hours ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

1 day ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

1 day ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

1 day ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

2 days ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

2 days ago