Latest

ಕೋಲಾರದಲ್ಲಿ ಲಂಚದ ಜಾಲ ಬಯಲು: ಜಿಲ್ಲಾಧಿಕಾರಿ ಕಚೇರಿಯಲ್ಲಿ ಮೂವರು ಸಿಬ್ಬಂದಿ ಲೋಕಾಯುಕ್ತ ಬಲೆಗೆ

ಕೋಲಾರ: ಭೂಪರಿವರ್ತನೆ ಸಂಬಂಧ ಲಂಚವಹಿಸುತ್ತಿದ್ದ ತ್ರಿವರ್ಣ ದಂಧೆ ಬಯಲಾಗಿದ್ದು, ಜಿಲ್ಲಾಧಿಕಾರಿ ಕಚೇರಿ ಮೂವರು ಸಿಬ್ಬಂದಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಮಂಗಳವಾರ ಸಂಜೆ ನಡೆದ ಈ ಆಪರೇಷನ್‌ನಲ್ಲಿ ಶಿರಸ್ತೇದಾರ್ ಚಂದ್ರಪ್ಪ, ಪ್ರಥಮ ದರ್ಜೆ ಸಹಾಯಕ (ಎಫ್‌ಡಿಎ) ಅಜಯ್ ಹಾಗೂ ದ್ವಿತೀಯ ದರ್ಜೆ ನೌಕರ ಮುನಿರಾಜು ವಿರುದ್ಧ ಕಾರ್ಯಾಚರಣೆ ನಡೆದಿದೆ. ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿಯಲ್ಲಿ ಮೂವರ ಮೇಲೂ ಪ್ರಕರಣ ದಾಖಲಾಗಿದೆ. ಈ ವೇಳೆ ಚಂದ್ರಪ್ಪ ಹಾಗೂ ಮುನಿರಾಜುವನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದು, ಅಜಯ್ ಕೋರ್ಟ್ ಕೆಲಸಕ್ಕೆಂದು ಹೊರ ಹೋದಿದ್ದರಿಂದ ಬಂಧನ ತಪ್ಪಿಸಿದ್ದಾರೆ.

ಈ ಪ್ರಕರಣದಲ್ಲಿ ಬೆಂಗಳೂರಿನ ಮಂಜುನಾಥ್ ಎಂಬುವವರು ಮುಖ್ಯ ಅರ್ಜಿದಾರ. ಅವರು ಕೋಲಾರದ ತಮ್ಮ ಜಮೀನಿಗೆ ಸಂಬಂಧಿಸಿದ ಭೂಪರಿವರ್ತನೆ ಹಾಗೂ ಖಾತೆ ಸೇರಿಸುವ ಕಾರ್ಯಕ್ಕಾಗಿ ಹಲವು ತಿಂಗಳುಗಳ ಹಿಂದೆ ಅರ್ಜಿ ಸಲ್ಲಿಸಿದ್ದರು. ಕೆಲಸ ಮುಗಿಸಲು ₹25 ಸಾವಿರ ಲಂಚ ಕೇಳಲಾಗಿತ್ತೆಂದು ಆರೋಪಿಸಲಾಗಿದೆ. ಇದೇ ಹಿನ್ನೆಲೆ ಮೊದಲಿಗೆ ₹5 ಸಾವಿರ, ನಂತರ ₹10 ಸಾವಿರವನ್ನು ಅವರು ನೀಡಿದ್ದರು. ಉಳಿದ ಹಣಕ್ಕಾಗಿ ಅಧಿಕಾರಿಗಳು ಒತ್ತಾಯಿಸುತ್ತಿದ್ದರು ಎನ್ನಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಹಸ್ತಾಂತರದ ಆಡಿಯೋ ದಾಖಲೆ ಸಹ ಮಂಜುನಾಥ್ ಬಳಿ ಇದೆ ಎಂದು ತಿಳಿದು ಬಂದಿದೆ.

ಹಣಕ್ಕಾಗಿ ನಿರಂತರ ಒತ್ತಡದೊಂದಿಗೆ ಮನನೊಂದ ಅರ್ಜಿದಾರ, ಲೋಕಾಯುಕ್ತ ಪೊಲೀಸರ ಮೊರೆ ಹೋಗಿದ್ದಾನೆ. ಈ ದೂರಿನ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯುತ್ತಿರುವ ಲಂಚದ ಜಾಲವನ್ನು ಭೇದಿಸಲು ಲೋಕಾಯುಕ್ತರು ಸಜ್ಜಾಗಿದ್ದು, ಸೂಚನೆಯಂತೆ ಪ್ಲ್ಯಾನ್ ಮಾಡಿದಂತೆ ₹22 ಸಾವಿರ ಹಣವನ್ನು ನೀಡುವ ವೇಳೆ ಟ್ರ್ಯಾಪ್‌ ಅಡಿಯಲ್ಲಿ ಮೂವರು ಬಿದ್ದಿದ್ದಾರೆ.

₹22 ಸಾವಿರದ ಲಂಚ ಮೊತ್ತದಲ್ಲಿ ಒಂದು ಭಾಗವನ್ನು ‘ಡಿ’ ದರ್ಜೆ ನೌಕರ ಮುನಿರಾಜು ಇಟ್ಟುಕೊಂಡು ಉಳಿದ ಹಣವನ್ನು ಶಿರಸ್ತೇದಾರ್ ಚಂದ್ರಪ್ಪನಿಗೆ ನೀಡಲು ಹೋಗುತ್ತಿದ್ದ ಸಂದರ್ಭದಲ್ಲೇ ಇವರಿಬ್ಬರೂ ಬಂಧನಕ್ಕೊಳಗಾದರು. ಪ್ರಕರಣ ಸಂಬಂಧ ತನಿಖೆ ನಡೆಯುತ್ತಿದ್ದು, ಇನ್ನಷ್ಟು ಮಾಹಿತಿಗಾಗಿ ಅಧಿಕಾರಿಗಳು ಮುಂದಿನ ಹಂತದ ಪರಿಶೀಲನೆ ನಡೆಸುತ್ತಿದ್ದಾರೆ.

nazeer ahamad

Recent Posts

ಮನೆ ಬಳಕೆಗೆ ಸಿಗದ ಗೃಹಬಳಕೆಯ ಸಿಲಿಂಡರ್‌ಗಳು ಹೋಟೆಲ್‌ಗಳಲ್ಲಿ , ಅಧಿಕಾರಿಗಳ ನಿರ್ಲಕ್ಷ್ಯ

ಮುಂಡಗೋಡ: ಪ್ರಸ್ತುತ ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಇರಾನ್–ಅಮೇರಿಕಾ ಉದ್ವಿಗ್ನತೆ (ಯುದ್ಧ) ಪರಿಣಾಮವಾಗಿ ಇಂಧನ ಕ್ಷೇತ್ರದಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ. ಈ ಪರಿಸ್ಥಿತಿಯ…

12 minutes ago

ಕರ್ನಾಟಕ ಹೈಕೋರ್ಟ್‌ನಲ್ಲಿ 70 ಹುದ್ದೆಗಳು: ಆಸಕ್ತರಿಗೆ ಉದ್ಯೋಗದ ಸುವರ್ಣಾವಕಾಶ

ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…

6 hours ago

ಕೋರ್ಟ್ ಉದ್ಯೋಗದ ಹೆಸರಿನಲ್ಲಿ ಕೋಟಿ ಕೋಟಿ ಮೋಸ: ಬೆಂಗಳೂರಿನಲ್ಲಿ ಫ್ರಾಡ್ ದಂಪತಿ ಬಂಧನ

ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…

6 hours ago

ಗಂಡ ಬಿಟ್ಟ ಮಹಿಳೆಯರೇ ಇವನ ಟಾರ್ಗೆಟ್; 5 ಮಹಿಳೆಯರ ಜೊತೆ ದೈಹಿಕ ಸಂಪರ್ಕ ಬೆಳೆಸಿ ವಂಚನೆ..!

ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…

6 hours ago

ಗಂಡನಿಲ್ಲದ ವೇಳೆ ಬಾಡಿಗೆಗೆ ಇದ್ದ ಯುವಕನ ಜೊತೆ ಸರಸ; ಅಡ್ಡಿಯಾದ ಅತ್ತೆಯನ್ನು ಕೊಂದ ಸೊಸೆ

ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…

6 hours ago

ಗೌರಿಬಿದನೂರಿನಲ್ಲಿ ಭೀಕರ ರಸ್ತೆ ಅಪಘಾತ – ಮಹಿಳೆ ಸಾವು, ಪುತ್ರನಿಗೆ ಗಾಯ

ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…

7 hours ago