ಬೆಂಗಳೂರು ಹೊರವಲಯದ ನೆಲಮಂಗಲದಲ್ಲಿ ವಾಹನ ಚಾಲಕರಿಂದ ಲಂಚ ಸ್ವೀಕರಿಸುತ್ತಿದ್ದ ಇಬ್ಬರು ಆರ್‌ಟಿಓ ಅಧಿಕಾರಿಗಳು ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದ ಘಟನೆ ಬೆಳಕಿಗೆ ಬಂದಿದೆ.
ಬೆಂಗಳೂರು ಗ್ರಾಮಾಂತರ ಲೋಕಾಯುಕ್ತ ಎಸ್‌ಪಿ ಡಾ. ಕೋನ ವಂಶಿ ಕೃಷ್ಣ ಅವರ ನೇತೃತ್ವದಲ್ಲಿ ನಡೆಸಿದ ಟ್ರ್ಯಾಪ್ ಕಾರ್ಯಾಚರಣೆಯಲ್ಲಿ ನೆಲಮಂಗಲ ಆರ್‌ಟಿಓ ಇನ್ಸ್ಪೆಕ್ಟರ್‌ಗಳಾದ ದಿನೇಶ್ ಮತ್ತು ಕಿರಣ್ ಅವರನ್ನು ವಶಕ್ಕೆ ಪಡೆಯಲಾಗಿದೆ.
ಪ್ರತಿದಿನ ವಾಹನ ತಪಾಸಣೆ ನಡೆಸುತ್ತಿದ್ದ ಈ ಅಧಿಕಾರಿಗಳು, ಚಾಲಕರಿಂದ ಹಣ ಪಡೆದು ಬಿಡುತ್ತಿದ್ದರು ಎಂಬ ದೂರಿನ ಆಧಾರದಲ್ಲಿ ಲೋಕಾಯುಕ್ತ ಅಧಿಕಾರಿಗಳು ಸೂಕ್ತ ಯೋಜನೆ ರೂಪಿಸಿ ಇಬ್ಬರನ್ನೂ ಬಲೆಗೆ ಸೆಳೆದಿದ್ದಾರೆ.
ಸದ್ಯ ಆರೋಪಿಗಳನ್ನು ವಿಚಾರಣೆ ನಡೆಸಲಾಗುತ್ತಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ಮುಂದುವರಿದಿದೆ.
ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…
ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…
ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…
ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…
ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…