ಕಲಬುರಗಿ: ಪತ್ನಿಯನ್ನು ಮನೆಗೆ ಬರಲು ಕೇಳಿದ್ದಕ್ಕೆ ಆಕೆಯ ಸಹೋದರ ಗಲಾಟೆ ಮಾಡಿ ಭಾವನಿಗೆ ಚಾಕು ಇರಿದ ಘಟನೆ ಕಲಬುರಗಿ ಜಿಲ್ಲೆಯ ಗಾಜಿಪುರ ಗ್ರಾಮದಲ್ಲಿ ನಡೆದಿದೆ. ಗಾಯಗೊಂಡ ಭಾವನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಆನಂದ್ ಎಂಬ ಯುವಕ ತನ್ನ ಪತ್ನಿ ಸ್ನೇಹಾ ಅವರನ್ನು ಎರಡು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ. ಆದರೆ ಮದುವೆಯ ನಂತರ ದಾಂಪತ್ಯದಲ್ಲಿ ಬಿರುಕು ಬಿದ್ದು ಸ್ನೇಹಾ ತಾಯಿ ಮನೆಗೆ ಮರಳಿದ್ದಳು. ಇತ್ತೀಚೆಗೆ ಆನಂದ್ ತಮ್ಮ ಅಣ್ಣನ ಮದುವೆ ನಿಮಿತ್ತ ಪತ್ನಿಯನ್ನು ಮನೆಗೆ ಆಹ್ವಾನಿಸಿದ್ದ.
ಈ ಬಗ್ಗೆ ಸ್ನೇಹಾ ಸಹೋದರ ಟೋನಿ ಆಕ್ರೋಶ ವ್ಯಕ್ತಪಡಿಸಿ, ತನ್ನ ಸ್ನೇಹಿತರೊಂದಿಗೆ ಸೇರಿ ಆನಂದ್ ಮೇಲಗೆ ಹಲ್ಲೆ ನಡೆಸಿದ್ದಾನೆ. ಚಾಕುವಿನಿಂದ ಇರಿತದಿಂದ ಆನಂದ್ ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣವೇ ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸಂಬಂಧ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ವಿರುದ್ಧ ತನಿಖೆ ಆರಂಭಿಸಲಾಗಿದೆ.
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…
ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…
ಬೆಂಗಳೂರು: ಜಿಬಿಎ ನೋಟಿಸ್ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…
ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…