Crime

ವಿವಾಹಿತ ಮಹಿಳೆಯೊಂದಿಗೆ ಮಾತನಾಡಿದ್ದಕ್ಕೆ ಹುಬ್ಬಳ್ಳಿಯಲ್ಲಿ ಕ್ರೂರ ಕೃತ್ಯ: ಯುವಕನಿಗೆ ಬೆತ್ತಲೆಗೊಳಿಸಿ ಮರಣಾಂತಿಕ ಹಲ್ಲೆ.

ಹುಬ್ಬಳ್ಳಿಯ ಟಿಪ್ಪು ನಗರದಲ್ಲಿ ಘಟನೆ ನಡೆದಿದ್ದು, ವಿವಾಹಿತ ಮಹಿಳೆಯೊಂದಿಗೆ ಮಾತನಾಡಿದ ಯುವಕನನ್ನು ಕೆಲವರು ಹಾಡಹಗಲೇ ಹಲ್ಲೆ ಮಾಡಿದ್ದಾರೆ. ಹಲ್ಲೆಗೊಳಗಾದ ಯುವಕನನ್ನು ಮುಜಾಫರ್ ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಮುಜಾಫರ್‌ನನ್ನು ಇದೀಗ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯ ವಿವರ:
ಕಸಬಾ ಪೇಟೆ ಪೊಲೀಸ್ ಠಾಣೆಯ ಪಕ್ಕದಲ್ಲಿರುವ ಟಿಪ್ಪು ನಗರದಲ್ಲಿ ಮುಜಾಫರ್ ತನ್ನ ಮೊಬೈಲ್ ಮೂಲಕ ವಿವಾಹಿತ ಮಹಿಳೆಯೊಂದಿಗೇ ಮಾತನಾಡುತ್ತಿದ್ದನು. ಈ ವಿಚಾರ ಮಹಿಳೆಯ ಕುಟುಂಬಸ್ಥರಿಗೆ ತಿಳಿದ ನಂತರ, ಅವರು ಮುಜಾಫರ್‌ನ್ನು ಕಿಡ್ನಾಪ್ ಮಾಡಿ ಹಿಗ್ಗಾಮುಗ್ಗ ಥಳಿಸಿದರು.

ಹಲ್ಲೆದಾರರು ಮುಜಾಫರ್‌ನ ಬಟ್ಟೆ ಬಿಚ್ಚಿಸಿ, ಬ್ಲೇಡ್ ಬಳಸಿ ಅವನ ದೇಹದಲ್ಲಿ ಗಾಯಗಳನ್ನು ಮಾಡಿದ್ದಾರೆ. ನಂತರ, ಬೆತ್ತಲೆಯಾಗಿ ಅವನನ್ನು ಮನೆಗೆ ಬಿಟ್ಟಿದ್ದಾರೆ.

ಹಲ್ಲೆಗೆ ಭಾಗಿಯಾದವರು:
ಈ ಹಲ್ಲೆಯಲ್ಲಿ ಸುಮಾರು 15 ಜನರು ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ಮೊಹಮ್ಮದ್, ಮಾಬುಲಿ, ಮಲೀಕ್, ಮೈನು ಶಗರಿ, ನದೀಮ್, ಸಮೀರ್ ಸೇರಿ ಇತರ ಹಲವರನ್ನು ಪೊಲೀಸರು ಗುರುತಿಸಿದ್ದಾರೆ.

ಈ ಘಟನೆ ಹುಬ್ಬಳ್ಳಿಯ ಕಸಬಾ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಮುಂದುವರಿಸಿದೆ.

nazeer ahamad

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago