Latest

ಮಂಡ್ಯದಲ್ಲಿ ಕ್ರೂರ ಕೃತ್ಯ : ಮಗಳ ಕೊಲೆಗೆ ಪ್ರತಿಕಾರವಾಗಿ ಆರೋಪಿ ತಂದೆಯ ಹತ್ಯೆ

ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಮಾಣಿಕ್ಯನಹಳ್ಳಿಯಲ್ಲಿ ಇಂದು ಬೆಳಿಗ್ಗೆ ದಾರುಣ ಘಟನೆ ನಡೆದಿದೆ. ಕಳೆದ ವರ್ಷ ಹತ್ಯೆಯಾಗಿದ್ದ ಶಿಕ್ಷಕಿ ದೀಪಿಕಾ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಆಕೆಯ ತಂದೆ ವೆಂಕಟೇಶ್ ಇಂದು ಪ್ರತೀಕಾರದ ರೂಪದಲ್ಲಿ ಆರೋಪಿ ನಿತೀಶ್‌ನ ತಂದೆ ನರಸಿಂಹೇಗೌಡನನ್ನು ಹತ್ಯೆ ಮಾಡಿರುವ ಘಟನೆ ಅಕ್ಕಪಕ್ಕದ ಜನರಲ್ಲಿ ಆತಂಕ ಸೃಷ್ಟಿಸಿದೆ.

ಮಾಹಿತಿಯ ಪ್ರಕಾರ, ಒಂದು ವರ್ಷದ ಹಿಂದೆ ಟೀಚರ್‌ ದೀಪಿಕಾಳನ್ನು ಸ್ಥಳೀಯ ಯುವಕ ನಿತೀಶ್ ಹತ್ಯೆ ಮಾಡಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಿತೀಶ್ ಕಾರಾಗೃಹಕ್ಕೆ ಹೋಗಿದ್ದರೂ, ಬಳಿಕ ಜಾಮೀನಿನಲ್ಲಿ ಹೊರಬಂದಿದ್ದನು. ಈ ವೇಳೆ ದೀಪಿಕಾಳ ತಂದೆ ವೆಂಕಟೇಶ್ ತಮ್ಮ ಮಗಳ ಹತ್ಯೆಗೆ ನ್ಯಾಯ ದೊರೆಯದೆ ಹೋಗಿರುವ ದುಗುಡದಲ್ಲಿದ್ದು, ಮನಸ್ಸಿನಲ್ಲಿ ಪ್ರತೀಕಾರವನ್ನು ಹೊತ್ತಿದ್ದರು.

ಇಂದು ಬೆಳಿಗ್ಗೆ ಸುಮಾರು 8.30ರ ಸುಮಾರಿಗೆ ನರಸಿಂಹೇಗೌಡ ಮಾಣಿಕ್ಯನಹಳ್ಳಿಯ ರಸ್ತೆಯಲ್ಲಿ ಸಂಚರಿಸುತ್ತಿದ್ದಾಗ ವೆಂಕಟೇಶ್ ಅವರನ್ನು ಹಿಡಿದು ಹೊಟ್ಟೆ ಭಾಗಕ್ಕೆ ಚಾಕು ಇರಿದಿದ್ದಾರೆ. ತೀವ್ರ ಗಾಯಗಳಿಂದ ನರಸಿಂಹೇಗೌಡ ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಹತ್ಯೆಯ ನಂತರ ವೆಂಕಟೇಶ್ ಸ್ಥಳದಿಂದ ಪರಾರಿಯಾಗಿದ್ದಾರೆ.

ಈ ಕುರಿತು ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಈ ಹತ್ಯೆ ಪ್ರಕರಣ ಪಾಂಡವಪುರ ತಾಲೂಕಿನಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಸ್ಥಳೀಯರ ಮಾತುಗಳ ಪ್ರಕಾರ, ಎರಡು ಕುಟುಂಬಗಳ ನಡುವೆ ಭೀಕರ ವೈಷಮ್ಯವಿದ್ದು, ಇದು ಇನ್ನಷ್ಟು ದುರ್ಘಟನೆಯೂ ಸಂಭವಿಸಬಹುದೆಂಬ ಆತಂಕವನ್ನು ಹುಟ್ಟಿಸಿದೆ.

nazeer ahamad

Recent Posts

ಕರ್ನಾಟಕ ಹೈಕೋರ್ಟ್‌ನಲ್ಲಿ 70 ಹುದ್ದೆಗಳು: ಆಸಕ್ತರಿಗೆ ಉದ್ಯೋಗದ ಸುವರ್ಣಾವಕಾಶ

ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…

2 hours ago

ಕೋರ್ಟ್ ಉದ್ಯೋಗದ ಹೆಸರಿನಲ್ಲಿ ಕೋಟಿ ಕೋಟಿ ಮೋಸ: ಬೆಂಗಳೂರಿನಲ್ಲಿ ಫ್ರಾಡ್ ದಂಪತಿ ಬಂಧನ

ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…

2 hours ago

ಗಂಡ ಬಿಟ್ಟ ಮಹಿಳೆಯರೇ ಇವನ ಟಾರ್ಗೆಟ್; 5 ಮಹಿಳೆಯರ ಜೊತೆ ದೈಹಿಕ ಸಂಪರ್ಕ ಬೆಳೆಸಿ ವಂಚನೆ..!

ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…

2 hours ago

ಗಂಡನಿಲ್ಲದ ವೇಳೆ ಬಾಡಿಗೆಗೆ ಇದ್ದ ಯುವಕನ ಜೊತೆ ಸರಸ; ಅಡ್ಡಿಯಾದ ಅತ್ತೆಯನ್ನು ಕೊಂದ ಸೊಸೆ

ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…

2 hours ago

ಗೌರಿಬಿದನೂರಿನಲ್ಲಿ ಭೀಕರ ರಸ್ತೆ ಅಪಘಾತ – ಮಹಿಳೆ ಸಾವು, ಪುತ್ರನಿಗೆ ಗಾಯ

ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…

3 hours ago

ಗೌರಿಬಿದನೂರಿನಲ್ಲಿ ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳ ಅಕ್ರಮ ಬಳಕೆ ವಿರುದ್ಧ ದಾಳಿ – 36 ಸಿಲಿಂಡರ್‌ಗಳು ಜಪ್ತಿ

ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…

3 hours ago