ಬೀದರ್: ಭಾಲ್ಕಿ ತಾಲೂಕಿನ ಹಾಲಗೋಟಾ ಗ್ರಾಮದಲ್ಲಿ ಸ್ನಾನ ಮಾಡುತ್ತಿದ್ದ ಮಹಿಳೆಯನ್ನು ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದ ಬಳಿಕ ಬಂಧನಕ್ಕೊಳಗಾಗಿ, ನಂತರ ಪೊಲೀಸ್ ಠಾಣೆಯಿಂದಲೇ ಪರಾರಿಯಾಗಿದ್ದ ಆರೋಪಿ ಮತ್ತೆ ಪೊಲೀಸರ ಬಲೆಗೆ ಬಿದ್ದಿದ್ದಾನೆ.
ಜುಲೈ 11ರಂದು ಅನಿತಾ (32) ಎಂಬ ಮಹಿಳೆಯ ಮೇಲೆ ಕೈಲಾಶ್ ಎಂಬಾತ ಕೊಡಲಿಯಿಂದ ಮಾರಣಾಂತಿಕ ಹಲ್ಲೆ ನಡೆಸಿ ಸ್ಥಳದಲ್ಲೇ ಹತ್ಯೆಗೈದಿದ್ದ. ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಖಟಕ್‌ಚಿಂಚೋಳಿ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು. ಆದರೆ ಅದೇ ರಾತ್ರಿ ಆರೋಪಿ ಪೊಲೀಸ್ ಠಾಣೆಯಿಂದ ತಪ್ಪಿಸಿಕೊಂಡಿದ್ದು, ಈ ಘಟನೆ ಜಿಲ್ಲೆಯಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿತ್ತು.
ಆರೋಪಿಯನ್ನು ಪತ್ತೆಹಚ್ಚಲು ಬೀದರ್ ಜಿಲ್ಲಾ ಪೊಲೀಸರು ವಿಶೇಷ ಶೋಧ ಕಾರ್ಯಾಚರಣೆ ನಡೆಸಿದ್ದರು. ಕೊನೆಗೂ ಭಾಲ್ಕಿ ತಾಲೂಕಿನ ತಳವಾಡ ಗ್ರಾಮದ ಜಮೀನೊಂದರಲ್ಲಿ ಅಡಗಿ ಕುಳಿತಿದ್ದ ಕೈಲಾಶ್‌ನನ್ನು ಪೊಲೀಸರು ಮತ್ತೆ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿ ಪೊಲೀಸ್ ವಶದಿಂದ ಪರಾರಿಯಾಗಿದ್ದ ಹಿನ್ನೆಲೆಯಲ್ಲಿ ಮೃತ ಅನಿತಾ ಅವರ ಕುಟುಂಬಸ್ಥರು ವಿಡಿಯೊ ಬಿಡುಗಡೆ ಮಾಡಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಆರೋಪಿಯನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕೆಂದು ಅವರು ಆಗ್ರಹಿಸಿದ್ದರು. ಇದೀಗ ಆರೋಪಿಯ ಮರುಬಂಧನದಿಂದ ಪ್ರಕರಣದ ತನಿಖೆ ಮತ್ತಷ್ಟು ವೇಗ ಪಡೆದುಕೊಂಡಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.
ಬಾಗಲಕೋಟೆ: ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆಯೇ ಎಂಬ…
ನವದೆಹಲಿ: ಪಾಸ್‌ಪೋರ್ಟ್ ಅರ್ಜಿ ಶುಲ್ಕವನ್ನು ಹೆಚ್ಚಿಸುವುದರ ಜೊತೆಗೆ ಮಕ್ಕಳ ಪಾಸ್‌ಪೋರ್ಟ್‌ನ ಮಾನ್ಯತಾ ಅವಧಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆಗಳನ್ನು…
ತಾಯಿ-ತಂದೆಯಿಲ್ಲದ ವೇದಳನ್ನು ಕಳೆದುಕೊಂಡ ಅಜ್ಜಿ-ತಾತನ ಆಕ್ರಂದನ ಗೌರಿಬಿದನೂರು: ನಗರದಲ್ಲಿ ಅಪಘಾತಗಳ ಸರಣಿ ಮುಂದುವರಿದಿರುವ ನಡುವೆಯೇ ಮತ್ತೊಂದು ಮನಕಲಕುವ ರಸ್ತೆ ದುರಂತ…
ಕಳೆದ ವರ್ಷದ 265 ರೂ. ಬೆಲೆಯ ಶೂಗಳು ಇನ್ನೂ ಬಾಳಿಕೆ; ಪ್ರಸಕ್ತ ಸಾಲಿನಲ್ಲಿ ವಿತರಿಸಿದ ಶೂಗಳ ಗುಣಮಟ್ಟದ ಬಗ್ಗೆ ಅಸಮಾಧಾನ…
ಧಾರವಾಡ: ಕೋಟ್ಯಂತರ ರೂಪಾಯಿ ಮೌಲ್ಯದ ಖರಾಬು ಜಮೀನಿನ ದಾಖಲೆಗಳನ್ನು ತಿದ್ದುಪಡಿ ಮಾಡಿಕೊಡುವುದಾಗಿ ಹೇಳಿ 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ…
ಕಿತ್ತೂರು: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಣ್ಣ–ತಮ್ಮಂದಿರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ತಂದೆ–ಮಗಳನ್ನು ಕೊಚ್ಚಿ…