ಜೈಪುರ: ರಾಜಸ್ಥಾನದ ಭರತ್‌ಪುರ ಜಿಲ್ಲೆಯ ರೂಪವಾಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 15 ವರ್ಷದ ಬಾಲಕಿಯೊಬ್ಬಳ ಮೇಲೆ ನಡೆದ ಅತ್ಯಾಚಾರ ಪ್ರಕರಣ ಸಂಬಂಧ ನಾಲ್ವರು ಯುವಕರ ವಿರುದ್ಧ ದೂರು ದಾಖಲಾಗಿದ್ದು, ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ.
ಘಟನೆ ಜೂನ್ 9ರಂದು ನಡೆದಿದೆ. ಬಾಲಕಿ ಸ್ಥಳೀಯ ಮಾರುಕಟ್ಟೆ ಕಡೆ ತೆರಳುತ್ತಿದ್ದ ವೇಳೆ, ಆರೋಪಿತ ರೋಹಿತ್ ಹಾಗೂ ಆತನ ಸ್ನೇಹಿತರು ರಿಂಕು, ಬಬ್ಬಲ್ ಮತ್ತು ಬಬ್ಲು ಎಂಬುವವರು ಆಕೆಯನ್ನು ಬಲವಂತವಾಗಿ ಒಬ್ಬನ ಬಾಡಿಗೆ ಮನೆಗೆ ಕರೆದುಕೊಂಡು ಹೋಗಿದ್ದಾರೆ ಎಂದು ಪೊಲೀಸರಿಗೆ ನೀಡಲಾದ ದೂರಿನಲ್ಲಿ ಹೇಳಲಾಗಿದೆ.
ಬಾಲಕಿಯ ಬಾಯಿಗೆ ಆಕೆಯ ಸ್ಕಾರ್ಫ್ ಅನ್ನು ಕಟ್ಟಿದ ರೋಹಿತ್, ಆಕೆಯ ಮೇಲೆ ಅತ್ಯಾಚಾರ ಎಸಗಿದ ಎನ್ನಲಾಗಿದೆ. ಈ ವೇಳೆ ಉಳಿದ ಮೂವರು ಮನೆಯ ಬಾಗಿಲಿಗೆ ಬೀಗ ಹಾಕಿ ಹೊರಗಿನಿಂದ ಕಾವಲು ಕಾಯುತ್ತಿದ್ದರು. ಘಟನೆ ಬಗ್ಗೆ ಬಾಲಕಿಯ ತಂದೆ ಜೂನ್ 13ರಂದು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ಬಳಿಕ ಪ್ರಕರಣ ದಾಖಲಿಸಲಾಗಿದೆ.
ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಪ್ರಾರಂಭಿಸಿದ್ದು, ಆರೋಪಿ ಬಂಧನಕ್ಕೆ ಬಲೆ ಬೀಸಲಾಗಿದೆ. ಪ್ರಕರಣ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.
ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…
ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…
ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…
ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…
ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…
ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…