Latest

ಬಸ್ ಹತ್ತುವ ವಿಚಾರಕ್ಕೆ ಗಲಾಟೆ: ಗದಗ ಜಿಲ್ಲೆಯ ಮುಂಡರಗಿಯಲ್ಲಿ ಕಂಡಕ್ಟರ್ ಮೇಲೆ ಮೂವರಿಂದ ಹಲ್ಲೆ!

ಗದಗ ಜಿಲ್ಲೆ ಮುಂಡರಗಿಯಲ್ಲಿ ಬಸ್ ಹತ್ತುವ ಕುರಿತಂತೆ ನಡೆದ ಮಾತಿನ ಚಕಮಕಿ ಮಾರಾಮಾರಿಗೆ ಕಾರಣವಾಗಿ, ಮೂವರು ಯುವಕರು ಬಸ್ ಕಂಡಕ್ಟರ್ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ.

ಈ ಘಟನೆ ಮುಂಡರಗಿ ಬಸ್ ನಿಲ್ದಾಣದಲ್ಲಿ ಮಂಗಳವಾರ ನಡೆದಿದೆ. ಮುಂಡರಗಿಯಿಂದ ಹಿರೇವಡ್ಡಟ್ಟಿಗೆ ತೆರಳಬೇಕಿದ್ದ ಬಸ್ ನಲ್ಲಿ, ಪ್ರಯಾಣಿಕರಿಬ್ಬರು ಬಸ್ ಹತ್ತುವ ಸಂದರ್ಭದಲ್ಲಿ ಎದುರಾದ ಜಗಳವು ತೀವ್ರ ಸ್ವರೂಪ ಪಡೆದಿತು.

ಬಸ್ ಕಂಡಕ್ಟರ್ ಶರಣಪ್ಪ ಬಿದರಹಳ್ಳಿ ಅವರು, “ಮುಂದಕ್ಕೆ ಬನ್ನಿ” ಎಂದು ಸೂಚನೆ ನೀಡಿದ ವೇಳೆ, ಆಕ್ಷೇಪ ವ್ಯಕ್ತಪಡಿಸಿದ ಮೂವರು ವ್ಯಕ್ತಿಗಳು ಗಲಾಟೆ ಆರಂಭಿಸಿದರು. ಮಾತಿನ ಏರುಪೇರಾದ ಬಳಿಕ, ಅವರು ಥಳಿಸಿ ಕೈ ಹಾಗೂ ಕಾಲಿಗೆ ಗಂಭೀರ ಗಾಯಗೊಳಿಸಿದ್ದಾರೆ.

ಘಟನೆಯಲ್ಲಿ ಗಾಯಗೊಂಡ ಶರಣಪ್ಪ ಅವರನ್ನು ತಕ್ಷಣವೇ ಮುಂಡರಗಿ ತಾಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಸಂಬಂಧ ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.

 

nazeer ahamad

Recent Posts

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

5 hours ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

9 hours ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

12 hours ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

17 hours ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

1 day ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

2 days ago