Latest

ಜಾತ್ರೆಗೆ ಹೋಗುತ್ತಿದ್ದ ಬಸ್ ಪಲ್ಟಿ: ಕನಕಪುರದಲ್ಲಿ ಭೀಕರ ಅಪಘಾತ, 50ಕ್ಕೂ ಹೆಚ್ಚು ಜನರಿಗೆ ಗಾಯ”

ರಮಣೀಯ ಸ್ಥಳಗಳೆಂದು ಖ್ಯಾತಿ ಪಡೆದಿರುವ ಕನಕಪುರದ ಸಂಗಮ ಮಾರ್ಗದಲ್ಲಿ ಭೀಕರ ಬಸ್ ಅಪಘಾತವೊಂದು ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್‌ವೊಂದು ತಿರುವಿನಲ್ಲಿ ಪಲ್ಟಿಯಾಗಿ 50ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.

ಕನಕಪುರ ತಾಲ್ಲೂಕಿನ ಕೋಡಿಹಳ್ಳಿ ಹತ್ತಿರದ ಹಲಸೂರು ಬಳಿ ಕ್ರಿಶ್ಚಿಯನ್ ಜಾತ್ರೆ ನಡೆಯುತ್ತಿದ್ದು, ಈ ಜಾತ್ರೆಯಲ್ಲಿ ಪಾಲ್ಗೊಳ್ಳಲು ಬೆಂಗಳೂರಿನಿಂದ ಪ್ರವಾಸಿಗರು ವಿಶೇಷ ಬಸ್‌ನಲ್ಲಿ ಆಗಮಿಸುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ.

ತಿರುವಿನಲ್ಲಿ ವೇಗವರ್ಧಿತ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ, ಪ್ರಯಾಣಿಕರಲ್ಲಿ ಹಲವರಿಗೆ ತೀವ್ರ ಗಾಯಗಳಾಗಿದ್ದು, ಸುಮಾರು 10 ಜನರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಅಪಘಾತದ ನಂತರ ಸ್ಥಳೀಯರು ಮತ್ತು ಪೊಲೀಸರು ಕೂಡಲೇ ರಕ್ಷಣಾ ಕಾರ್ಯಾಚರಣೆಗೆ ಧಾವಿಸಿ ಗಾಯಾಳುಗಳನ್ನು ಕನಕಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಘಟನಾ ಸ್ಥಳಕ್ಕೆ ಸಾತನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ಸಂಬಂಧ ತನಿಖೆ ಮುಂದುವರಿಸಿದ್ದಾರೆ. ಹೆಚ್ಚಿನ ಪ್ರಯಾಣಿಕರು ಬೆಂಗಳೂರಿನ ಮೂಲದವರಾಗಿದ್ದು, ಕುಟುಂಬದ ಸದಸ್ಯರೊಂದಿಗೆ ಜಾತ್ರೆಗೆ ತೆರಳುತ್ತಿದ್ದ ಸಂದರ್ಭದಲ್ಲಿಯೇ ಈ ಅವಘಡ ಸಂಭವಿಸಿದೆ.

ಸ್ಥಳೀಯರು ಮತ್ತು ದುರಂತದ ದೃಶ್ಯ ನೋಡಿ ಬೆಚ್ಚಿಬಿದ್ದಿದ್ದ ಪೊಲೀಸರು, ವಾಹನಗಳ ಸಂಚಾರಕ್ಕೂ ತಾತ್ಕಾಲಿಕ ತಡೆ ನೀಡಿದ್ದರು. ಬಸ್‌ ಚಾಲಕನ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

nazeer ahamad

Recent Posts

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

18 hours ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

1 day ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

1 day ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

2 days ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

2 days ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

2 days ago