Latest

ವ್ಯಾಪಾರ ನಷ್ಟದಿಂದ ಮಾನಸಿಕ ಒತ್ತಡ – ಉದ್ಯಮಿ ಕಾರಿನಲ್ಲಿ ಆತ್ಮಹತ್ಯೆಗೆ ಶರಣು

ಕಾರ್ಕಳ, ಉಡುಪಿ ಜಿಲ್ಲೆ: ಕಾರಿನಲ್ಲಿ ಕುಳಿತುಕೊಂಡೇ ತಲೆಗೆ ಗುಂಡು ಹೊಡೆದು ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳದ ಸಮೀಪದ ನಿಟ್ಟೆ ಬಳಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರು ಮಂಗಳೂರಿನ ಉದ್ಯಮಿ ಎನ್.ಆರ್. ದಿಲೀಪ್ ಎಂದು ಗುರುತಿಸಲಾಗಿದೆ.

ಈ ದಾರುಣ ಘಟನೆ ನಿಟ್ಟೆಯ ದೂಪದ ಕಟ್ಟೆಯ ಹೆದ್ದಾರಿಯಲ್ಲಿ ನಡೆದಿದೆ. ದಿಲೀಪ್ ಅವರು ತಮ್ಮ ಕಾರಿನೊಳಗೆ ಮೂಲಕ ತಲೆಗೆ ಗುಂಡು ಹೊಡೆದಿದ್ದಾರೆ. ಘಟನೆಯ ಮಾಹಿತಿ ಲಭುತ್ತಿದ್ದಂತೆ ಕಾರ್ಕಳ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಧಾವಿಸಿ, ಘಟನಾ ಸ್ಥಳವನ್ನು ಪರಿಶೀಲಿಸಿದ್ದಾರೆ. ಕಾರಿನಲ್ಲಿದ್ದ ರಿವಾಲ್ವರ್‌ ಹಾಗೂ ಒಂದು ಗುಂಡನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಂಗಳೂರಿನಲ್ಲಿ ವ್ಯಾಪಾರ ನಡೆಸುತ್ತಿದ್ದ ದಿಲೀಪ್ ಅವರು ಇತ್ತೀಚೆಗೆ ವ್ಯಾಪಾರದಲ್ಲಿ ಭಾರಿ ನಷ್ಟ ಅನುಭವಿಸುತ್ತಿದ್ದು, ಸಾಲಗಾರರ ಒತ್ತಡದಿಂದ ಮಾನಸಿಕ ತೊಂದರೆಗೆ ಒಳಗಾಗಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲೇ ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಶಂಕಿಸಲಾಗಿದೆ.

ದಿಲೀಪ್ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಕಳಿಸಲಾಗಿದ್ದು, ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ.

nazeer ahamad

Recent Posts

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

21 hours ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

1 day ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

2 days ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

2 days ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

2 days ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

2 days ago