ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನಡೆದ ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ಕಂಡುಬಂದಿದ್ದು, ಅವರ ಪತ್ನಿ ಸೌಮ್ಯ ಶೆಟ್ಟಿ (28) ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಮೂಲತಃ ಪುತ್ತೂರು ತಾಲೂಕಿನ ನೆಲ್ಯಾಡಿ ನಿವಾಸಿಯಾಗಿದ್ದ ಸುದೀಪ್ ರೈ ಅವರು ಬೆಳ್ತಂಗಡಿಯಲ್ಲಿ ಉದ್ಯಮ ನಡೆಸುತ್ತಿದ್ದರು. ಕಾರ್ಕಳದ ಕಜೆ ನಿವಾಸಿ ಹಾಗೂ ಪುತ್ತೂರು ಸಬ್-ರಿಜಿಸ್ಟ್ರಾರ್ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಸೌಮ್ಯ ಶೆಟ್ಟಿಯವರೊಂದಿಗೆ ಫೆಬ್ರವರಿ 17ರಂದು ರಿಜಿಸ್ಟರ್ ಮದುವೆಯಾಗಿದ್ದರು.
ಆದರೆ ಮದುವೆಯಾದ ಕೇವಲ ಒಂದು ತಿಂಗಳಲ್ಲೇ, ಮಾರ್ಚ್ 17ರಂದು ಸುದೀಪ್ ರೈ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಗಂಭೀರ ಸ್ಥಿತಿಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮಾರ್ಚ್ 30ರಂದು ಅವರು ಮೃತಪಟ್ಟಿದ್ದರು.
ಮಗನ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿದ ಸುದೀಪ್ ಅವರ ತಂದೆ ದಾಮೋದರ ರೈ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದರು.
ತನಿಖೆ ವೇಳೆ ಲಭ್ಯವಾದ ಪ್ರಾಥಮಿಕ ಸಾಕ್ಷ್ಯಾಧಾರಗಳ ಆಧಾರದ ಮೇಲೆ ಸೌಮ್ಯ ಶೆಟ್ಟಿಯನ್ನು ಬಂಧಿಸಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ತಿಳಿಸಿದ್ದಾರೆ.
ಬೆಂಗಳೂರು: ಜಿಬಿಎ ನೋಟಿಸ್ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…
ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…
ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…
ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…
ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…