ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ ಕಾರಣವಾಗಿದೆ. ಈ ಘಟನೆ ನಟಿ ಕೃಷಿ ತಾಪಾಂಡ ಅವರ ನಿವಾಸದಲ್ಲಿ ನಡೆದಿರುವುದರಿಂದ ಪ್ರಕರಣಕ್ಕೆ ಹೆಚ್ಚಿನ ಮಹತ್ವ ದೊರೆತಿದೆ.
ವೈಶಾಕ್ ಅವರು ಕಾರು, ಆಟೋಮೊಬೈಲ್ ಹಾಗೂ ಗ್ಯಾರೇಜ್ ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದ ಉದ್ಯಮಿಯಾಗಿದ್ದರು. ಅವರಿಗೆ ಮದುವೆಯಾಗಿ 15 ವರ್ಷಗಳಾಗಿದ್ದು, 14 ವರ್ಷದ ಪುತ್ರನಿದ್ದಾನೆ. ಆದರೆ ಇತ್ತೀಚಿನ ಕೆಲವು ಬೆಳವಣಿಗೆಗಳು ಅವರ ವೈಯಕ್ತಿಕ ಜೀವನದಲ್ಲಿ ಅಶಾಂತಿಗೆ ಕಾರಣವಾಗಿದ್ದವು ಎನ್ನಲಾಗಿದೆ.
ಮಾಹಿತಿಗಳ ಪ್ರಕಾರ, ಎವಿಆರ್ ಗ್ರೂಪ್ ಮಾಲೀಕ ಅರವಿಂದ್ ರೆಡ್ಡಿಗೆ ಬೆದರಿಕೆ ಹಾಕಿದ ಆರೋಪದಡಿ ಎಚ್‌ಎಎಲ್ ಪೊಲೀಸ್ ಠಾಣೆಯಲ್ಲಿ ವೈಶಾಕ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಅವರು ಬಂಧನಕ್ಕೊಳಗಾಗಿ ವಿಚಾರಣೆಯನ್ನೂ ಎದುರಿಸಿದ್ದರು. ಈ ಪ್ರಕರಣದ ಬಳಿಕ ಅವರ ಕುಟುಂಬ ಜೀವನದಲ್ಲೂ ಮನಸ್ತಾಪಗಳು ಹೆಚ್ಚಾಗಿದ್ದವು ಎಂದು ಹೇಳಲಾಗುತ್ತಿದೆ.
ಕೌಟುಂಬಿಕ ಸಮಸ್ಯೆಗಳಿಂದ ಮಾನಸಿಕ ಒತ್ತಡದಲ್ಲಿದ್ದ ವೈಶಾಕ್, ನಟಿ ಕೃಷಿ ತಾಪಾಂಡ ಅವರೊಂದಿಗೆ ಸ್ನೇಹ ಹೊಂದಿದ್ದು, ಆಗಾಗ ಅವರ ನಿವಾಸಕ್ಕೆ ಭೇಟಿ ನೀಡುತ್ತಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಘಟನೆ ನಡೆದ ದಿನವೂ ವೈಶಾಕ್ ಅವರು ರಾಜರಾಜೇಶ್ವರಿನಗರದ ಬಂಗಾರಪ್ಪ ಗುಡ್ಡೆ ಸಮೀಪದ ಅಪಾರ್ಟ್‌ಮೆಂಟ್‌ನಲ್ಲಿರುವ ಕೃಷಿ ತಾಪಾಂಡ ಅವರ ನಿವಾಸಕ್ಕೆ ತೆರಳಿದ್ದರು. ಬಳಿಕ ಇಂದು ಬೆಳಿಗ್ಗೆ ಅವರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಆರ್‌ಆರ್ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ವರದಿ ಬಳಿಕ ಸಾವಿನ ನಿಖರ ಕಾರಣ ತಿಳಿಯಲಿದೆ.
ಪೊಲೀಸರು ವೈಶಾಕ್ ಅವರ ಮೊಬೈಲ್ ಫೋನ್ ವಶಕ್ಕೆ ಪಡೆದು ಕೊನೆಯ ಕರೆಗಳು, ಸಂದೇಶಗಳು ಹಾಗೂ ಇತ್ತೀಚಿನ ಚಟುವಟಿಕೆಗಳ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಸಾವಿಗೆ ಕಾರಣವಾದ ಪರಿಸ್ಥಿತಿಗಳು, ವೈಯಕ್ತಿಕ ಮತ್ತು ಕೌಟುಂಬಿಕ ಹಿನ್ನೆಲೆ ಸೇರಿದಂತೆ ಎಲ್ಲ ಆಯಾಮಗಳಲ್ಲೂ ತನಿಖೆ ಮುಂದುವರಿದಿದೆ.
ಪ್ರಕರಣದ ಸತ್ಯಾಸತ್ಯತೆ ಹಾಗೂ ಸಾವಿನ ಹಿಂದಿನ ನಿಖರ ಕಾರಣಗಳು ತನಿಖೆಯ ಬಳಿಕವೇ ಸ್ಪಷ್ಟವಾಗಲಿವೆ.
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…
ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…
ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…
ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…
ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…
ಕಲಬುರಗಿ: ನಿಗದಿತ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ರಾಜೇಶ್ವರಿ ಅವರ…