ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಪೇಟೆಯಲ್ಲಿ ಗೋವು ಕಳವು ಮಾಡಿದ ಇಬ್ಬರನ್ನು ಪೊಲೀಸರು ಬಂಧಿಸಿ ಮಹತ್ವದ ವಿಜಯ ಸಾಧಿಸಿದ್ದಾರೆ. ಮಂಜುನಾಥ ಹೊಟೇಲ್ ಎದುರು ಖಾಲಿ ಜಾಗದಲ್ಲಿ ಮಲಗಿದ್ದ ಗೋವುಗಳನ್ನು ಕದ್ದ ಪ್ರಕರಣಕ್ಕೆ ಸಂಬಂಧಿಸಿ ಶ್ರೀಧರ ಬಿಜೂರು ಎಂಬುವವರು ನೀಡಿದ ದೂರಿನ ಅನ್ವಯ ಪೊಲೀಸರು ತನಿಖೆ ಆರಂಭಿಸಿದ್ದರು.
ಈ ಪ್ರಕರಣದಲ್ಲಿ ಕುಂದಾಪುರದ ಕೋಡಿ ಕಸಬಾ ನಿವಾಸಿಗಳಾದ ಅಬ್ದುಲ್ ಸಮಾದ್ (27) ಮತ್ತು ಅಬ್ದುಲ್ ರೆಹಮಾನ್ (25) ಎಂಬವರನ್ನು ಬಂಧಿಸಲಾಗಿದೆ. ಆರೋಪಿಗಳನ್ನು ಹಾಲಾಡಿ ರಸ್ತೆಯ ಕೊಟೇಶ್ವರದಲ್ಲಿರುವ ಸನ್‌ರೈಸ್ ಫ್ಯಾಕ್ಟರಿಯ ಬಳಿ ಕಾರ್ಯಾಚರಣೆ ನಡೆಸಿ ಬೈಂದೂರು ಪೊಲೀಸರು ವಶಕ್ಕೆ ಪಡೆದರು.
ಜಿಲ್ಲಾ ಪೊಲೀಸ್ ಅಧೀಕ್ಷಕ ಅರುಣ್ ಕೆ. ಅವರ ಮಾರ್ಗದರ್ಶನದಲ್ಲಿ ಹೆಚ್ಚುವರಿ ಎಸ್‌ಪಿ ಎಸ್.ಟಿ. ಸಿದ್ದಲಿಂಗಪ್ಪ, ಕುಂದಾಪುರ ಉಪವಿಭಾಗದ ಡಿವೈಎಸ್‌ಪಿ ಬೆಳ್ಳಿಯಪ್ಪ ಕೆ.ಯು., ಬೈಂದೂರು ವೃತ್ತ ನಿರೀಕ್ಷಕ ಸವೀತ್ರ ತೇಜ್, ಪಿಎಸ್‌ಐ ತಿಮ್ಮೇಶ್ ಬಿ.ಎನ್., ಎಎಸ್‌ಐ ಸೂರ ನಾಯ್ಕ ಹಾಗೂ ಪೊಲೀಸ್ ಸಿಬ್ಬಂದಿ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಆರೋಪಿಗಳಿಂದ ಕೃತ್ಯದಲ್ಲಿ ಬಳಸಿದ ಎರಡು ಕಾರುಗಳು, ಮೊಬೈಲ್‌ಗಳು ಹಾಗೂ ಚೂರಿ ವಶಪಡಿಸಿಕೊಳ್ಳಲಾಗಿದೆ. ಘಟನೆಯ ಕುರಿತಾಗಿ ಹೆಚ್ಚಿನ ತನಿಖೆ ನಡೆಯುತ್ತಿದೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…