Latest

ಸಿ.ಸಿ.ಬಿ. ಪೊಲೀಸರಿಂದ ಗಾಂಜಾ ಹೊಂದಿದ್ದ ವ್ಯಕ್ತಿಯ ಬಂಧನ.

ದಿನಾಂಕ ೦೯-೦೯-೨೦೨೨ ರಂದು ಮೈಸೂರು ನಗರ ಸಿ.ಸಿ.ಬಿ. ಪೊಲೀಸರು ಮೈಸೂರು ನಗರ ವ್ಯಾಪ್ತಿಯಲ್ಲಿ ಗಸ್ತಿನಲ್ಲಿದ್ದಾಗ ಮೈಸೂರು ನಗರ ಮಂಡಿ ಮೊಹಲ್ಲಾದ ಸುನ್ನಿಚೌಕದಲ್ಲಿ ಆಕ್ಸಿಸ್ ದ್ವಿಚಕ್ರವಾಹನದಲ್ಲಿ ಇಬ್ಬರು ಕುಳಿತಿದ್ದು, ಪೊಲೀಸರನ್ನು ನೋಡಿ ಒಬ್ಬ ಆಸಾಮಿ ಓಡಿ ಹೋಗಿ ಪರಾರಿಯಾಗಿದ್ದು ಮತ್ತೊಬ್ಬ ಆಸಾಮಿಯನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದಾಗ ಆತನು ಕಾನೂನುಬಾಹಿರವಾಗಿ ದ್ವಿ ಚಕ್ರ ವಾಹನದಲ್ಲಿ ಗಾಂಜಾವನ್ನು ಇಟ್ಟುಕೊಂಡಿರುವುದು ಕಂಡು ಬಂದ ಮೇರೆಗೆ ಸುಮಾರು ೨,೦೬,೦೦೦/-ರೂ ಮೌಲ್ಯದ ೫ಕೆ.ಜಿ. ೧೫೦ ಗ್ರಾಂ ತೂಕದ ಗಾಂಜಾ ಹಾಗೂ ಇದನ್ನು ತೂಕ ಮಾಡಲು ಇಟ್ಟುಕೊಂಡಿದ್ದ ಯಂತ್ರ ಹಾಗೂ ಸಾಗಾಣಿಕೆಗೆ ಬಳಸಿದ್ದ ದ್ವಿಚಕ್ರವಾಹನವನ್ನು ಅಮಾನತ್ತುಪಡಿಸಿಕೊಂಡಿರುತ್ತಾರೆ. ಈ ಸಂಬಂಧ ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ. ಓಡಿ ಪರಾರಿಯಾದ ಆರೋಪಿಯ ಪತ್ತೆ ಕಾರ್ಯ ಮುಂದುವರೆದಿದೆ.
ಈ ದಾಳಿ ಕಾರ್ಯವನ್ನು ಮೈಸೂರು ನಗರದ ಡಿ.ಸಿ.ಪಿ., ಕೇಂದ್ರಸ್ಥಾನ, ಅಪರಾಧ ಮತ್ತು ಸಂಚಾರ ವಿಭಾಗರವರಾದ ಶ್ರೀಮತಿ ಗೀತ. ಎಂ.ಎಸ್., ಐ.ಪಿ.ಎಸ್.ರವರ ಮಾರ್ಗದರ್ಶನದಲ್ಲಿ ಸಿ.ಸಿ.ಬಿ ಘಟಕದ ಎ.ಸಿ.ಪಿ.ರವರಾದ ಶ್ರೀ ಸಿ.ಕೆ.ಅಶ್ವತ್ಥನಾರಾಯಣರವರ ನೇತೃತ್ವದಲ್ಲಿ ಸಿ.ಸಿ.ಬಿ. ಘಟಕದ ಹೆಚ್&ಬಿ ವಿಭಾಗದ ಪೊಲೀಸ್ ಇನ್ಸ್ಪೆಕ್ಟರ್‌ರವರಾದ ಶ್ರೀ ಜಿ.ಶೇಖರ್, ಸಿಬ್ಬಂದಿಗಳಾದ ಸಲೀಂಪಾಷ, ಉಮಾಮಹೇಶ ಮಧುಸೂದನ ರವರುಗಳು ನಡೆಸಿರುತ್ತಾರೆ.
ಈ ದಾಳಿ ಕಾರ್ಯವನ್ನು ಮೈಸೂರು ನಗರದ ಪೊಲೀಸ್ ಆಯುಕ್ತರವರಾದ ಡಾ: ಚಂದ್ರಗುಪ್ತ, ಐ.ಪಿ.ಎಸ್. ರವರು ಪ್ರಶಂಸಿಸಿರುತ್ತಾರೆ.

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

2 weeks ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago