Categories: Latest

ಕಾರವಾರದಲ್ಲಿ 100 ಕೋಟಿ ವೆಚ್ಚದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಸಂಪುಟ ಅಸ್ತು!

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಜನತೆಯ ಬಹುದಿನಗಳ ಕನಸಿಗೆ ಕೊನೆಗೂ ಜಯ ಸಿಕ್ಕಿದೆ. ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ 200 ಹಾಸಿಗೆಗಳ ಸಾಮರ್ಥ್ಯದ ನೂತನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಅಧಿಕೃತವಾಗಿ ಆಡಳಿತಾತ್ಮಕ ಅನುಮೋದನೆ ನೀಡಿದೆ.

ಬೆಂಗಳೂರಿನ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಮಹತ್ವದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವಾಕಾಂಕ್ಷಿ ಯೋಜನೆಗೆ ಹಸಿರು ನಿಶಾನೆ ತೋರಲಾಗಿದ್ದು, ಒಟ್ಟು 100 ಕೋಟಿ ರೂಪಾಯಿಗಳ ಅಂದಾಜು ಮೊತ್ತದ ಅನುದಾನವನ್ನು ಮೀಸಲಿಡಲಾಗಿದೆ.

ಬಜೆಟ್ ಘೋಷಣೆ ಈಗ ಅನುಷ್ಠಾನದತ್ತ:
ರಾಜ್ಯ ಸರ್ಕಾರವು ತನ್ನ ಬಜೆಟ್‌ನಲ್ಲಿ ಕಾರವಾರದಲ್ಲಿ ಸುಸಜ್ಜಿತ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸಲು 100 ಕೋಟಿ ರೂಪಾಯಿ ಅನುದಾನವನ್ನು ಪ್ರಕಟಿಸಿತ್ತು. ಇದೀಗ ಸಚಿವ ಸಂಪುಟ ಸಭೆಯಲ್ಲಿ ಇದಕ್ಕೆ ಆಡಳಿತಾತ್ಮಕ ಒಪ್ಪಿಗೆ ಸಿಕ್ಕಿರುವುದರಿಂದ ಕಟ್ಟಡ ನಿರ್ಮಾಣ ಕಾರ್ಯ ಶೀಘ್ರದಲ್ಲೇ ಆರಂಭವಾಗಲಿದ್ದು, ಕರಾವಳಿ ಹಾಗೂ ಮಲೆನಾಡು ಭಾಗದ ಜನರಿಗೆ ಅತ್ಯಾಧುನಿಕ ವೈದ್ಯಕೀಯ ಸೌಲಭ್ಯಗಳು ಸ್ಥಳೀಯವಾಗಿಯೇ ದೊರೆಯಲಿವೆ.

ಇಲ್ಲಿಯವರೆಗೆ ಜಿಲ್ಲೆಯಲ್ಲಿ ತುರ್ತು ಮತ್ತು ಗಂಭೀರ ಆರೋಗ್ಯ ಸಮಸ್ಯೆಗಳು ಎದುರಾದಾಗ ಉಡುಪಿ, ಮಂಗಳೂರು, ಹುಬ್ಬಳ್ಳಿ ಅಥವಾ ಗೋವಾ ರಾಜ್ಯದ ಆಸ್ಪತ್ರೆಗಳಿಗೆ ರೋಗಿಗಳನ್ನು ಸಾಗಿಸಬೇಕಾಗಿತ್ತು. ಸಕಾಲಕ್ಕೆ ಚಿಕಿತ್ಸೆ ಸಿಗದೆ ದಾರಿಯಲ್ಲೇ ಪ್ರಾಣ ಕಳೆದುಕೊಂಡ ಅನೇಕ ಘಟನೆಗಳು ಜಿಲ್ಲೆಯಲ್ಲಿ ಸಂಭವಿಸಿದ್ದವು. ಈ ನೂತನ 200 ಹಾಸಿಗೆಗಳ ಹೈಟೆಕ್ ಆಸ್ಪತ್ರೆ ನಿರ್ಮಾಣದಿಂದಾಗಿ ಇನ್ಮುಂದೆ ಕರಾವಳಿ ಭಾಗದ ಜನರಿಗೆ ಗುಣಮಟ್ಟದ ಚಿಕಿತ್ಸೆ ಸಕಾಲದಲ್ಲಿ ಸಿಗುವಂತಾಗಲಿ.

ಭ್ರಷ್ಟರ ಬೇಟೆ

Recent Posts

ಬಾಗಲಕೋಟೆಯಲ್ಲಿ ರಾತ್ರಿ 11 ಗಂಟೆಯ ಬಳಿಕ ನಿಯಮ ಉಲ್ಲಂಘಿಸಿ ಮರಳು ಸಾಗಾಟ: ನಂಬರ್ ಪ್ಲೇಟ್ ಇಲ್ಲದ ಟಿಪ್ಪರ್‌ಗಳ ಸಂಚಾರ, ಅಧಿಕಾರಿಗಳು ಮೌನ!?

ಬಾಗಲಕೋಟೆ: ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆಯೇ ಎಂಬ…

2 days ago

ಪಾಸ್‌ಪೋರ್ಟ್ ಶುಲ್ಕ ಹೆಚ್ಚಳ: ಮಕ್ಕಳ ಮಾನ್ಯತಾ ಅವಧಿಯಲ್ಲೂ ಬದಲಾವಣೆ, ಹೊಸ ನಿಯಮ ಜಾರಿ

ನವದೆಹಲಿ: ಪಾಸ್‌ಪೋರ್ಟ್ ಅರ್ಜಿ ಶುಲ್ಕವನ್ನು ಹೆಚ್ಚಿಸುವುದರ ಜೊತೆಗೆ ಮಕ್ಕಳ ಪಾಸ್‌ಪೋರ್ಟ್‌ನ ಮಾನ್ಯತಾ ಅವಧಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆಗಳನ್ನು…

2 days ago

ಗೌರಿಬಿದನೂರಿನಲ್ಲಿ ಅಪಘಾತಕ್ಕೆ ನಾಲ್ಕು ವರ್ಷದ ಬಾಲಕಿ ಬಲಿ

ತಾಯಿ-ತಂದೆಯಿಲ್ಲದ ವೇದಳನ್ನು ಕಳೆದುಕೊಂಡ ಅಜ್ಜಿ-ತಾತನ ಆಕ್ರಂದನ ಗೌರಿಬಿದನೂರು: ನಗರದಲ್ಲಿ ಅಪಘಾತಗಳ ಸರಣಿ ಮುಂದುವರಿದಿರುವ ನಡುವೆಯೇ ಮತ್ತೊಂದು ಮನಕಲಕುವ ರಸ್ತೆ ದುರಂತ…

5 days ago

ಸರ್ಕಾರಿ ಶಾಲಾ ಮಕ್ಕಳಿಗೆ ಅನ್ಯಾಯ: ನೂರು ರೂಪಾಯಿಗೂ ಬೆಲೆಬಾಳದ ಶೂಗಳನ್ನು ವಿತರಿಸಿರುವ ಸರ್ಕಾರ, ಒಂದೇ ತಿಂಗಳಿಗೆ ಹಾಳದ ಶೂಗಳು..!

ಕಳೆದ ವರ್ಷದ 265 ರೂ. ಬೆಲೆಯ ಶೂಗಳು ಇನ್ನೂ ಬಾಳಿಕೆ; ಪ್ರಸಕ್ತ ಸಾಲಿನಲ್ಲಿ ವಿತರಿಸಿದ ಶೂಗಳ ಗುಣಮಟ್ಟದ ಬಗ್ಗೆ ಅಸಮಾಧಾನ…

5 days ago

50 ಲಕ್ಷ ರೂ. ಲಂಚ ಸ್ವೀಕರಿಸುವಾಗ ಧಾರವಾಡ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ: ಖರಾಬು ಜಮೀನು ದಾಖಲೆ ತಿದ್ದುಪಡಿಗೆ ಬೇಡಿಕೆ..!

ಧಾರವಾಡ: ಕೋಟ್ಯಂತರ ರೂಪಾಯಿ ಮೌಲ್ಯದ ಖರಾಬು ಜಮೀನಿನ ದಾಖಲೆಗಳನ್ನು ತಿದ್ದುಪಡಿ ಮಾಡಿಕೊಡುವುದಾಗಿ ಹೇಳಿ 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ…

5 days ago

ಪಂಚಾಯಿತಿ ಕಚೇರಿಯಲ್ಲೇ ಆಸ್ತಿ ವಿವಾದಕ್ಕೆ ರಕ್ತದೊಕುಳಿ: ಅಣ್ಣ–ತಮ್ಮಂದಿರ ಜಗಳದಲ್ಲಿ ತಂದೆ–ಮಗಳು ಕೊಲೆ, ಮತ್ತೊಬ್ಬನಿಗೆ ಗಂಭೀರ ಗಾಯ

ಕಿತ್ತೂರು: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಣ್ಣ–ತಮ್ಮಂದಿರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ತಂದೆ–ಮಗಳನ್ನು ಕೊಚ್ಚಿ…

5 days ago