Crime

ಪೊದೆಯಲ್ಲಿ ಕರು ತಲೆ ಪತ್ತೆ..! ಏಳು ಆರೋಪಿಗಳು ಅರೆಸ್ಟ್.

ಲೂರು: ಜನವರಿ 14ರಂದು ಹೆದ್ದುರ್ಗ ಗ್ರಾಮದಲ್ಲಿ ಮಾಂಸದ ಆಸೆಗಾಗಿ ಕೊಟ್ಟಿಗೆಯಲ್ಲಿ ಕಟ್ಟಿದ್ದ ಹಸುವಿನ ಕರುವನ್ನು ಕದ್ದು, ಕೊಂದು ತಿಂದ ಪ್ರಕರಣದಲ್ಲಿ 7 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕೌಶಿಕ್, ಮೋಹನ್, ಮನೋಜ್, ಚಂದನ್, ಅಜ್ಗರ್, ಪವನ್, ಮತ್ತು ಅಜಿತ್ ಎಂದು ಗುರುತಿಸಲಾಗಿದೆ. ಕೋರ್ಟ್ ಇವರನ್ನು ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.
ಹೆದ್ದುರ್ಗ ಗ್ರಾಮದ ಹೂವಣ್ಣ ಎಂಬುವವರು 12 ಹಸುಗಳನ್ನು ಕೊಟ್ಟಿಗೆಯಲ್ಲಿ ಕಟ್ಟಿಟ್ಟುಕೊಂಡು ಮನೆಗೆ ತೆರಳಿದ್ದರು. ಜನವರಿ 15ರಂದು ಕರು ನಾಪತ್ತೆಯಾಗಿರುವುದನ್ನು ಗಮನಿಸಿದ ಅವರು ಹುಡುಕಾಟ ಆರಂಭಿಸಿದರು. ನಂತರ, ಜನವರಿ 16ರಂದು ಬೆಳಗ್ಗೆ ಮಡಬಲು ರೈಲ್ವೆ ಗೇಟ್ ಬಳಿ ಒಂದು ಪೊದೆಯಲ್ಲಿ ಪ್ರಾಣಿ ರುಂಡ ಕಂಡು, ಅದನ್ನು ತಮ್ಮ ಕರು ಎಂದು ಗುರುತಿಸಿದರು.
ಇದಾದ ನಂತರ ಹೂವಣ್ಣ ಪಟ್ಟಣ ಪೊಲೀಸ್ ಠಾಣೆಗೆ ದೂರು ನೀಡಿದರು. ತನಿಖೆಯ ಸಂದರ್ಭದಲ್ಲಿ, ಜನವರಿ 14ರಂದು ಮಧ್ಯರಾತ್ರಿ ದುಷ್ಕರ್ಮಿಗಳು ಕರುವನ್ನು ಕದ್ದು, ಕೊಂದು ಮಾಂಸ ಬೇಯಿಸಿ ಸೇವಿಸಿದ್ದಾರೇನೋ ಎಂಬ ಮಾಹಿತಿ ಬಯಲಾಯಿತು. ಪ್ರಾಣಿ ರುಂಡ, ಕರುಳು ಮತ್ತು ಚರ್ಮವನ್ನು ನದಿಗೆ ಎಸೆಯಲು ಪ್ರಯತ್ನಿಸಿದಾಗ, ಜನರ ಓಡಾಟವನ್ನು ಕಂಡು ಅವರು ರುಂಡವನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಪ್ರಕರಣ ಸ್ಥಳೀಯರಲ್ಲಿ ಆಕ್ರೋಶ ಹುಟ್ಟಿಸಿದ್ದು, ಕಾನೂನು ಕ್ರಮಗಳನ್ನು ಶೀಘ್ರ ಕೈಗೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

nazeer ahamad

Recent Posts

ಬಾಗಲಕೋಟೆ ನಗರದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ಬಾಗಲಕೋಟೆ: ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಚೀಫ್ ಇಂಜಿನಿಯರ್ ವಸಂತ ವಾಲಪ್ಪ ನಾಯಕ ಅವರ ಬೆಂಗಳೂರು ಸೇರಿದಂತೆ ಬಾಗಲಕೋಟೆಯಲ್ಲಿರುವ ಮನೆಯ…

5 days ago

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

2 weeks ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

3 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

4 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

1 month ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

2 months ago