Categories: CrimeLatest

12 ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣ ಖಂಡಿಸಿ ನಾಳೆ ಮುಂಡಗೋಡ ಬಂದ್‌ಗೆ ಕರೆ!

ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ

ಮುಂಡಗೋಡ: 12 ವರ್ಷದ ಬಾಲಕಿಯ ಮೇಲೆ ನಡೆದಿರುವ ಅಮಾನವೀಯ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ತೀವ್ರವಾಗಿ ಖಂಡಿಸಿರುವ ವಿವಿಧ ಹಿಂದೂಪರ ಸಂಘಟನೆಗಳು, ಪ್ರಕರಣದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಿ ಸಂತ್ರಸ್ತ ಬಾಲಕಿಗೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿ ನವೆಂಬರ್ 12ರಂದು ಮುಂಡಗೋಡ ಪಟ್ಟಣ ಬಂದ್‌ಗೆ ಕರೆ ನೀಡಿವೆ.

ಅಪ್ರಾಪ್ತ ಬಾಲಕಿಯ ಮೇಲೆ ನಡೆದಿರುವ ಅತ್ಯಾಚಾರ ಪ್ರಕರಣ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ಮತ್ತು ಆತಂಕಕ್ಕೆ ಕಾರಣವಾಗಿದೆ. ಇಂತಹ ಹೀನ ಕೃತ್ಯ ಎಸಗಿರುವ ಆರೋಪಿಗೆ ಕಾನೂನಿನಡಿ ಅತ್ಯಂತ ಕಠಿಣ ಶಿಕ್ಷೆಯಾಗಬೇಕು. ಬಾಲಕಿಗೆ ನ್ಯಾಯ ದೊರೆಯುವುದರ ಜೊತೆಗೆ ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ಹಾಗೂ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಸಂಘಟನೆಗಳ ಮುಖಂಡರು ಒತ್ತಾಯಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ನವೆಂಬರ್ 12ರಂದು ಬೆಳಿಗ್ಗೆ 10 ಗಂಟೆಗೆ ಮುಂಡಗೋಡ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಪ್ರತಿಭಟನೆಯಲ್ಲಿ ಹಿಂದೂಪರ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಂತ್ರಸ್ತ ಬಾಲಕಿಗೆ ನ್ಯಾಯ ದೊರಕಿಸುವ ಹೋರಾಟಕ್ಕೆ ಬೆಂಬಲ ನೀಡುವಂತೆ ಸಂಘಟಕರು ಮನವಿ ಮಾಡಿದ್ದಾರೆ.

ಬಾಲಕಿಯರು ಮತ್ತು ಮಹಿಳೆಯರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಅಪ್ರಾಪ್ತರ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ತ್ವರಿತ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂಬುದು ಪ್ರತಿಭಟನೆಯ ಪ್ರಮುಖ ಬೇಡಿಕೆಯಾಗಿದೆ.

ಬಂದ್‌ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಪಟ್ಟಣದ ವ್ಯಾಪಾರಸ್ಥರು, ಸಾರ್ವಜನಿಕರು ಹಾಗೂ ವಿವಿಧ ಸಂಘ-ಸಂಸ್ಥೆಗಳವರು ಸ್ವಯಂಪ್ರೇರಿತವಾಗಿ ಸಹಕರಿಸುವಂತೆ ಹಿಂದೂಪರ ಸಂಘಟನೆಗಳು ಮನವಿ ಮಾಡಿವೆ.

ಭ್ರಷ್ಟರ ಬೇಟೆ

Recent Posts

82ರ ಉದ್ಯಮಿಗೆ ಜಿಮ್ ಬಾಡಿ ತೋರಿಸಿ ಗಾಳ ಹಾಕಿದ ಸುಂದರಿ; ₹2 ಲಕ್ಷ ಸುಲಿಗೆ, 10 ಲಕ್ಷಕ್ಕೆ ಬೇಡಿಕೆ!

ರಾಜಸ್ಥಾನ: ಜಿಮ್‌ನಲ್ಲಿ ಕಟ್ಟುಮಸ್ತಾದ ದೇಹದಂಡನೆ ಪ್ರದರ್ಶಿಸುವ ವಿಡಿಯೋ ಹಾಗೂ ಫೋಟೋಗಳನ್ನು ತೋರಿಸಿ 82 ವರ್ಷದ ಉದ್ಯಮಿಯೊಬ್ಬರನ್ನು ಹನಿಟ್ರ್ಯಾಪ್ ಬಲೆಗೆ ಬೀಳಿಸಿ…

21 hours ago

ಪ್ರೇಯಸಿಯ ಮನೆಯಲ್ಲಿ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದ ಎಎಸ್‌ಐ; ಗ್ರಾಮಸ್ಥರ ಮೇಲೆ ಫೈರಿಂಗ್!

ಈ ವೇಳೆ ಆಕ್ರೋಶಗೊಂಡ ಗ್ರಾಮಸ್ಥರು ಮನೆಯ ಬಾಗಿಲು ಮುರಿದು ಒಳನುಗ್ಗಿದ್ದಾರೆ. ಎಎಸ್‌ಐ ಅವರನ್ನು ಮಹಿಳೆಯೊಂದಿಗೆ ಆಕ್ಷೇಪಾರ್ಹ ಸ್ಥಿತಿಯಲ್ಲಿ ಕಂಡ ಹಿನ್ನೆಲೆಯಲ್ಲಿ…

21 hours ago

ಚಾಕು ತೋರಿಸಿ ಒಂಟಿಮನೆ ದರೋಡೆ: ನಾಲ್ವರು ಆರೋಪಿಗಳ ಬಂಧನ; ಯಲ್ಲಾಪುರ ಪೊಲೀಸರ ಕಾರ್ಯಾಚರಣೆ ಯಶಸ್ವಿ!

ಯಲ್ಲಾಪುರ: ತಾಲೂಕಿನ ಹುಟ್ಕಮನ ಗ್ರಾಮದಲ್ಲಿ ಚಾಕು ತೋರಿಸಿ ಮನೆಯವರನ್ನು ಬೆದರಿಸಿ ಒಂಟಿಮನೆ ದರೋಡೆ ನಡೆಸಿದ್ದ ಪ್ರಕರಣವನ್ನು ಯಲ್ಲಾಪುರ ಪೊಲೀಸರು ಭೇದಿಸುವಲ್ಲಿ…

21 hours ago

ಮಾದನಬಾವಿ ಗೋಶಾಲೆಯ ದುಸ್ಥಿತಿಗೆ ಆಕ್ರೋಶ: ಗೋವುಗಳಿಗೆ ಮೇವು, ನೀರು ಹಾಗೂ ಚಿಕಿತ್ಸೆ ಒದಗಿಸಲು ಆಗ್ರಹ

ಧಾರವಾಡ: ತಾಲೂಕಿನ ಮಾದನಬಾವಿ ಗ್ರಾಮದ ಗೋಶಾಲೆಯಲ್ಲಿ ಗೋವುಗಳ ನಿರ್ವಹಣೆ ಸಮರ್ಪಕವಾಗಿ ನಡೆಯುತ್ತಿಲ್ಲ ಎಂಬ ಆರೋಪ ಕೇಳಿಬಂದಿದ್ದು, ಗೋಶಾಲೆಯ ಅವ್ಯವಸ್ಥೆ ಸರಿಪಡಿಸಿ…

3 days ago

ಮುಂಡಗೋಡದ ರಾಜಲಕ್ಷ್ಮಿ ಜ್ಯುವೆಲ್ಲರ್ಸ್‌ನಲ್ಲಿ ಬೆಳ್ಳಿ ಆಭರಣ ಕಳವು ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಮಹಿಳೆಯರ ಬಂಧನ

ಮುಂಡಗೋಡ: ಪಟ್ಟಣದ ಬಸ್ ನಿಲ್ದಾಣದ ಎದುರಿನ ರಾಜಲಕ್ಷ್ಮಿ ಜ್ಯುವೆಲ್ಲರ್ಸ್ ಅಂಗಡಿಯಲ್ಲಿ ನಡೆದಿದ್ದ ಬೆಳ್ಳಿ ಆಭರಣ ಕಳವು ಪ್ರಕರಣವನ್ನು ಮುಂಡಗೋಡ ಪೊಲೀಸರು…

3 days ago

ಫೋನ್‌ಪೇ ಹಣ ಪಾವತಿ ನಕಲಿ ಸಂದೇಶ ತೋರಿಸಿ ಮೊಬೈಲ್ ವಂಚನೆ: ಬೆಂಗಳೂರಿನಲ್ಲಿ ಆರೋಪಿಯ ಬಂಧನ

ಕುಮಟಾ: ಮೊಬೈಲ್ ಖರೀದಿಸಿ ಫೋನ್‌ಪೇ ಮೂಲಕ ಹಣ ಪಾವತಿಸಿರುವುದಾಗಿ ನಕಲಿ ಸಂದೇಶ ತೋರಿಸಿ ಅಂಗಡಿ ಮಾಲೀಕರಿಗೆ ವಂಚಿಸಿ ಪರಾರಿಯಾಗಿದ್ದ ಆರೋಪಿಯನ್ನು…

3 days ago