Latest

ಉಡುಪಿಯಲ್ಲಿ ಗಾಂಜಾ ಜಾಲ ಭೇದನೆ: ಬಿಹಾರ ಮೂಲದ ವ್ಯಕ್ತಿ ಸೆರೆ

ಉಡುಪಿ: ಗಾಂಜಾ ಸಾಗಾಟ ಮತ್ತು ಮಾರಾಟದಲ್ಲಿ ತೊಡಗಿದ್ದ ವ್ಯಕ್ತಿಯನ್ನು ಸೆನ್ ಠಾಣೆ ಪೊಲೀಸರು ಬಂಧಿಸಿ, ದೊಡ್ಡ ಪ್ರಮಾಣದ ಮಾದಕ ದ್ರವ್ಯ ವಶಪಡಿಸಿಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ.

ಮಣಿಪಾಲ ರೈಲ್ವೆ ನಿಲ್ದಾಣದ ಬಳಿ ಇರುವ ಡಯಾನಾ ಟಾಕೀಸ್ ರಸ್ತೆ ಕ್ರಾಸ್ ಬಳಿ ಶುಂಕಾಸ್ಪದ ಚಟುವಟಿಕೆ ನಡೆಯುತ್ತಿತ್ತಾದ ಮಾಹಿತಿ ಆಧಾರವಾಗಿ ಪೊಲೀಸರು ದಾಳಿ ನಡೆಸಿದ್ದು, ಆರೋಪಿಯನ್ನು ಸ್ಥಳದಲ್ಲೇ ಹಿಡಿದಿದ್ದಾರೆ.

ಬಂಧಿತನನ್ನು ಬಿಹಾರ ಮೂಲದ ಬ್ರಹಂದೇವ್ ಯಾದವ್ (37) ಎಂದು ಗುರುತಿಸಲಾಗಿದೆ. ಈತನಿಂದ 690 ಗ್ರಾಂ ಗಾಂಜಾ, ಮೊಬೈಲ್ ಫೋನ್, 680 ರೂಪಾಯಿ ನಗದು ಹಾಗೂ ಇತರೆ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಇವುಗಳ ಒಟ್ಟು ಮೌಲ್ಯವನ್ನು ಸುಮಾರು 68,680 ರೂ. ಎಂದು ಅಂದಾಜಿಸಲಾಗಿದೆ.

ಕಾರ್ಯಾಚರಣೆಯಲ್ಲಿ ಸೆನ್ ಠಾಣೆಯ ಡಿವೈಎಸ್ಪಿ ಎ.ಸಿ. ಲೋಕೇಶ್ ಅವರ ನೇತೃತ್ವದ ತಂಡ, ಪೊಲೀಸ್ ಇನ್ಸ್‌ಪೆಕ್ಟರ್ ರಾಮಚಂದ್ರ ನಾಯಕ್ ಮತ್ತು ಸಿಬ್ಬಂದಿಯಾದ ಉಮೇಶ್, ಪ್ರವೀಣ್ ಕುಮಾರ್, ರಾಜೇಶ್, ರಾಘವೇಂದ್ರ, ವೆಂಕಟೇಶ್, ಸಂತೋಷ, ಧರ್ಮಪ್ಪ, ಅರುಣ್ ಕುಮಾರ್, ದೀಕ್ಷಿತ್, ಪವನ್, ನಿಲೇಶ್, ಪರಶುರಾಮ್, ಮುತ್ತಪ್ಪ, ಮಾಯ್ಯಪ್ಪ ಹಾಗೂ ಚರಣ್ ಅವರು ಭಾಗವಹಿಸಿದ್ದರು.

ಈ ಕುರಿತು ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

nazeer ahamad

Recent Posts

ಕರ್ನಾಟಕ ಹೈಕೋರ್ಟ್‌ನಲ್ಲಿ 70 ಹುದ್ದೆಗಳು: ಆಸಕ್ತರಿಗೆ ಉದ್ಯೋಗದ ಸುವರ್ಣಾವಕಾಶ

ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…

2 hours ago

ಕೋರ್ಟ್ ಉದ್ಯೋಗದ ಹೆಸರಿನಲ್ಲಿ ಕೋಟಿ ಕೋಟಿ ಮೋಸ: ಬೆಂಗಳೂರಿನಲ್ಲಿ ಫ್ರಾಡ್ ದಂಪತಿ ಬಂಧನ

ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…

2 hours ago

ಗಂಡ ಬಿಟ್ಟ ಮಹಿಳೆಯರೇ ಇವನ ಟಾರ್ಗೆಟ್; 5 ಮಹಿಳೆಯರ ಜೊತೆ ದೈಹಿಕ ಸಂಪರ್ಕ ಬೆಳೆಸಿ ವಂಚನೆ..!

ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…

2 hours ago

ಗಂಡನಿಲ್ಲದ ವೇಳೆ ಬಾಡಿಗೆಗೆ ಇದ್ದ ಯುವಕನ ಜೊತೆ ಸರಸ; ಅಡ್ಡಿಯಾದ ಅತ್ತೆಯನ್ನು ಕೊಂದ ಸೊಸೆ

ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…

2 hours ago

ಗೌರಿಬಿದನೂರಿನಲ್ಲಿ ಭೀಕರ ರಸ್ತೆ ಅಪಘಾತ – ಮಹಿಳೆ ಸಾವು, ಪುತ್ರನಿಗೆ ಗಾಯ

ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…

3 hours ago

ಗೌರಿಬಿದನೂರಿನಲ್ಲಿ ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳ ಅಕ್ರಮ ಬಳಕೆ ವಿರುದ್ಧ ದಾಳಿ – 36 ಸಿಲಿಂಡರ್‌ಗಳು ಜಪ್ತಿ

ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…

3 hours ago