ಉಡುಪಿ: ಗಾಂಜಾ ಸಾಗಾಟ ಮತ್ತು ಮಾರಾಟದಲ್ಲಿ ತೊಡಗಿದ್ದ ವ್ಯಕ್ತಿಯನ್ನು ಸೆನ್ ಠಾಣೆ ಪೊಲೀಸರು ಬಂಧಿಸಿ, ದೊಡ್ಡ ಪ್ರಮಾಣದ ಮಾದಕ ದ್ರವ್ಯ ವಶಪಡಿಸಿಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ.
ಮಣಿಪಾಲ ರೈಲ್ವೆ ನಿಲ್ದಾಣದ ಬಳಿ ಇರುವ ಡಯಾನಾ ಟಾಕೀಸ್ ರಸ್ತೆ ಕ್ರಾಸ್ ಬಳಿ ಶುಂಕಾಸ್ಪದ ಚಟುವಟಿಕೆ ನಡೆಯುತ್ತಿತ್ತಾದ ಮಾಹಿತಿ ಆಧಾರವಾಗಿ ಪೊಲೀಸರು ದಾಳಿ ನಡೆಸಿದ್ದು, ಆರೋಪಿಯನ್ನು ಸ್ಥಳದಲ್ಲೇ ಹಿಡಿದಿದ್ದಾರೆ.
ಬಂಧಿತನನ್ನು ಬಿಹಾರ ಮೂಲದ ಬ್ರಹಂದೇವ್ ಯಾದವ್ (37) ಎಂದು ಗುರುತಿಸಲಾಗಿದೆ. ಈತನಿಂದ 690 ಗ್ರಾಂ ಗಾಂಜಾ, ಮೊಬೈಲ್ ಫೋನ್, 680 ರೂಪಾಯಿ ನಗದು ಹಾಗೂ ಇತರೆ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಇವುಗಳ ಒಟ್ಟು ಮೌಲ್ಯವನ್ನು ಸುಮಾರು 68,680 ರೂ. ಎಂದು ಅಂದಾಜಿಸಲಾಗಿದೆ.
ಕಾರ್ಯಾಚರಣೆಯಲ್ಲಿ ಸೆನ್ ಠಾಣೆಯ ಡಿವೈಎಸ್ಪಿ ಎ.ಸಿ. ಲೋಕೇಶ್ ಅವರ ನೇತೃತ್ವದ ತಂಡ, ಪೊಲೀಸ್ ಇನ್ಸ್‌ಪೆಕ್ಟರ್ ರಾಮಚಂದ್ರ ನಾಯಕ್ ಮತ್ತು ಸಿಬ್ಬಂದಿಯಾದ ಉಮೇಶ್, ಪ್ರವೀಣ್ ಕುಮಾರ್, ರಾಜೇಶ್, ರಾಘವೇಂದ್ರ, ವೆಂಕಟೇಶ್, ಸಂತೋಷ, ಧರ್ಮಪ್ಪ, ಅರುಣ್ ಕುಮಾರ್, ದೀಕ್ಷಿತ್, ಪವನ್, ನಿಲೇಶ್, ಪರಶುರಾಮ್, ಮುತ್ತಪ್ಪ, ಮಾಯ್ಯಪ್ಪ ಹಾಗೂ ಚರಣ್ ಅವರು ಭಾಗವಹಿಸಿದ್ದರು.
ಈ ಕುರಿತು ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…
ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…
ಬೆಂಗಳೂರು: ಜಿಬಿಎ ನೋಟಿಸ್ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…
ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…