ರಾಜೇಶ್ವರ (ತಾಲ್ಲೂಕು): ತಾಲೂಕಿನ ರಾಜೇಶ್ವರ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಬೆಳಿಗ್ಗೆ ಸಂಭವಿಸಿದ ಅಪಘಾತದಲ್ಲಿ ₹1.18 ಕೋಟಿ ಮೌಲ್ಯದ 118 ಕೆ.ಜಿ ಗಾಂಜಾ ಪತ್ತೆಯಾಗಿದೆ.

ತೆಲಂಗಾಣದಿಂದ ಮಹಾರಾಷ್ಟ್ರಕ್ಕೆ ಹೋಗುತ್ತಿದ್ದ ಕಾರು ಹೆದ್ದಾರಿಯಲ್ಲಿನ ಸೇತುವೆಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ, ಕಾರಿನೊಳಗಿನ ಗಾಂಜಾ ಪೊಟ್ಟಣಗಳು ರಸ್ತೆಯಲ್ಲಿ ಚದುರಿದವು. ಘಟನೆಯು ಸ್ಥಳೀಯರ ಗಮನ ಸೆಳೆಯಿತು, ಮತ್ತು ಗ್ರಾಮಸ್ಥರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದರು.

ಅಪಘಾತದ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಈ ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ಮುಂದುವರೆಯುತ್ತಿದೆ.

Related News

error: Content is protected !!