Latest

ಚಿಗರಿ ಮಾರ್ಗದಲ್ಲಿ ಕಾರುಗಳ ಅಪಘಾತ: ಓರ್ವನ ಸಾವು ಮೂರಿಗೆ ಗಂಭೀರ ಗಾಯ..

ಧಾರವಾಡ: ಹುಬ್ಬಳ್ಳಿ-ಧಾರವಾಡ ಬಿ ಆರ್ ಟಿ ಎಸ್ ಕಾರಿಡಾರ್‌ನ ಪಿಬಿ ರಸ್ತೆ ಮೇಲೆ ಭಾನುವಾರ ಸಂಜೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವಿಗೀಡಾಗಿದ್ದು, ಮೂವರು ಗಂಭೀರ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ.

ಕಲಘೇರಿ ನಿವಾಸಿಯಾಗಿರುವ 34 ವರ್ಷದ ಶಿವಾನಂದ್ ಅಡಿಯಪ್ಪ ಮಾಳಗಿ ಅಪಘಾತದಲ್ಲಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರ ಸಂಬಂಧಿಯಾಗಿರುವ 28 ವರ್ಷದ ಮಂಜುನಾಥ್ ತಿಪ್ಪಣ್ಣ ಮಾಳಗಿ ಕಾರು ಚಲಾಯಿಸುತ್ತಿದ್ದು, ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರಿಬ್ಬರೂ ಹುಬ್ಬಳಿಯಿಂದ ಧಾರವಾಡದತ್ತ ತಮ್ಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು.

ಘಟನೆ ಸ್ಥಳವಾದ ಧಾರವಾಡದ ವಾರ್ಡನ್ ಹಾಲ್ ಬಳಿ ಬರುತ್ತಿದ್ದ ವೇಳೆ, ಗದಗ್ ಕಡೆಗೆ ಸಾಗುತ್ತಿದ್ದ ಇನ್ನೋವಾ ಕಾರು ಎದುರುಗಡೆಯಿಂದ ಬಂದಿಗೆ ವೇಗವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿ, ಶಿವಾನಂದ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರ ಗಾಯಗೊಂಡ ಮಂಜುನಾಥ್ ಅವರನ್ನು ತುರ್ತು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ.

ಇನ್ನೋವಾ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಗದಗ್ ಮೂಲದ ಮನೀಶ್ ರೆಡ್ಡಿ ಬಸವರೆಡ್ಡಿ ಹುಚ್ಚಣ್ಣವರು ಮತ್ತು ಮಂಜುನಾಥ್ ರೆಡ್ಡಿ ಸಾಸಿವೆಹಳ್ಳಿ ಎಂಬವರಿಗೂ ಗಾಯಗಳಾಗಿದ್ದು, ಅವರನ್ನು ಕೂಡ ಚಿಕಿತ್ಸೆಗೆ ಒಳಪಡಿಸಲಾಗಿದೆ.

ಘಟನೆಯ ಮಾಹಿತಿ ತಿಳಿದ ಕೂಡಲೇ ಧಾರವಾಡ ಸಂಚಾರಿ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೊಳಗಾದ ಎರಡೂ ವಾಹನಗಳನ್ನು ಕ್ರೇನ್‌ನ ಸಹಾಯದಿಂದ ಸ್ಥಳಾಂತರಿಸಲಾಗಿದ್ದು, ಸಂಬಂಧಿತ ಪ್ರಕರಣವನ್ನು ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ.

ವರದಿ: ಶಿವರಾಜ್ ಪಿ.ಆರ್.

nazeer ahamad

Recent Posts

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

15 hours ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

1 day ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

1 day ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

1 day ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

2 days ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

2 days ago