ನೆಲ್ಯಾಡಿ: ದಕ್ಷಿಣ ಕನ್ನಡದ ನೆಲ್ಯಾಡಿ ಸಮೀಪದ ವಾಲ್ತಾಜೆ ಎಂಬಲ್ಲಿ ಕಾರು ಮತ್ತು ಆಟೋ ರಿಕ್ಷಾ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ರಿಕ್ಷಾ ಚಾಲಕ ದಾರುಣ ಅಂತ್ಯ ಕಂಡಿದ್ದಾನೆ.
ಮೃತ ವ್ಯಕ್ತಿಯನ್ನು ಗುಂಡ್ಯ ನಿವಾಸಿ ಪ್ರಭಾಕರ್ ಎಂದು ಗುರುತಿಸಲಾಗಿದೆ. ಅಪಘಾತ ಸಂಭವಿಸಿದ ಸಂದರ್ಭ ಪ್ರಭಾಕರ್ ಆಟೋ ರಿಕ್ಷಾ ಮೂಲಕ ಗುಂಡ್ಯದಿಂದ ನೆಲ್ಯಾಡಿ ಕಡೆಗೆ ಪ್ರಯಾಣಿಸುತ್ತಿದ್ದಾಗ, ವಿರುದ್ಧ ದಿಕ್ಕಿನಿಂದ ವೇಗವಾಗಿ ಬಂದ ಕಾರು ರಿಕ್ಷಾಗೆ ಡಿಕ್ಕಿಯಾಗಿದೆ ಎಂದು ಪ್ರಾಥಮಿಕ ಮಾಹಿತಿಯಲ್ಲಿ ತಿಳಿದುಬಂದಿದೆ.
ಡಿಕ್ಕಿಯ ತೀವ್ರತೆಗೆ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿ, ಚಾಲಕ ಪ್ರಭಾಕರ್ ತೀವ್ರ ಗಾಯಗೊಂಡು ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದು, ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಶೀಘ್ರದಲ್ಲೇ ಲಭ್ಯವಾಗುವ ನಿರೀಕ್ಷೆಯಿದೆ.
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…
ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…
ಬೆಂಗಳೂರು: ಜಿಬಿಎ ನೋಟಿಸ್ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…
ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…