ಮಲ್ಪೆ ಬಂದರಿಯಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಹಲ್ಲೆಗೈದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಮತ್ತಷ್ಟು ಕ್ರಮ ಕೈಗೊಂಡಿದ್ದಾರೆ. ಈ ಪ್ರಕರಣದಲ್ಲಿ ಈಗಾಗಲೇ ಹಲವಾರು ಆರೋಪಿಗಳನ್ನು ಬಂಧಿಸಿರುವ ಪೊಲೀಸರ ತಂಡ, ಇದೀಗ ಮಲ್ಪೆಯ ನಿವಾಸಿಗಳಾದ ಲೀಲಾ ಮತ್ತು ಪಾರ್ವತಿಯನ್ನು ಬಂಧಿಸಿದೆ.
ಇದರ ಜತೆಗೇ, ಪ್ರಕರಣದ ಪ್ರಾಥಮಿಕ ತನಿಖೆಯಲ್ಲಿ ನಿರ್ಲಕ್ಷ್ಯ ತೋರಿದ ಕಾರಣ ಮಲ್ಪೆ ಪೊಲೀಸ್ ಠಾಣೆಯ ಇಬ್ಬರು ಬೀಟ್ ಕಾನ್‌ಸ್ಟೆಬಲ್‌ಗಳನ್ನು ಅಮಾನತು ಮಾಡಲಾಗಿದೆ. ಇತ್ತೀಚೆಗೆ ಕಾಪು ಠಾಣೆಯಿಂದ ಮಲ್ಪೆಗೆ ವರ್ಗಾವಣೆಯಾದ ಹೆಡ್ ಕಾನ್‌ಸ್ಟೆಬಲ್ ಸುರೇಶ್ ಮತ್ತು ಪೊಲೀಸ್ ಕಾನ್‌ಸ್ಟೆಬಲ್ ನಾಗರಾಜ್ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಉಡುಪಿ ಎಸ್‌ಪಿ ಈ ಸಂಬಂಧ ಅಧಿಕೃತ ಆದೇಶ ಹೊರಡಿಸಿದ್ದಾರೆ.
ಈ ಘಟನೆಗೆ ರಾಜ್ಯ ಮಹಿಳಾ ಆಯೋಗ ತೀವ್ರ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದು, ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಒತ್ತಾಯಿಸಿದೆ. ಅಲ್ಲದೇ, ಘಟನೆಗೆ ಸಂಬಂಧಿಸಿದ ಸಂಪೂರ್ಣ ವರದಿಯನ್ನು ತಕ್ಷಣ ಆಯೋಗಕ್ಕೆ ಸಲ್ಲಿಸುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಿದೆ.
ಪ್ರಕರಣ ಸಂಬಂಧ ಹೋರಾಟ ಮುಂದುವರೆದಿದ್ದು, ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಮತ್ತು ಮಹಿಳಾ ಹಕ್ಕೊತ್ತಾಯ ಸಂಘಟನೆಗಳು ಒತ್ತಾಯಿಸುತ್ತಿವೆ.
ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…
ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…
ಹುಬ್ಬಳ್ಳಿಯಲ್ಲಿ ರೀಲ್ಸ್ ಮಾಡುವ ಹುಚ್ಚಾಟದಿಂದ ಸಂಭವಿಸಿದ ಭೀಕರ ಅಪಘಾತದಲ್ಲಿ 15 ವರ್ಷದ ಬಾಲಕ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು…
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಸಂದೇಶ್…
Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್‌ಗಳ…
ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…