ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದ್ದು, ಆರೋಪಿ ಶುಭಮ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಇದೇ ವೇಳೆ ಮೃತಳ ಪತಿ ಅಮಿತ್‌ನನ್ನೂ ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.
ಸೆಪ್ಟೆಂಬರ್ 19ರಂದು ಸಿಂಧನೂರಿನ ಆರ್‌ಎಚ್. ಕ್ಯಾಂಪ್ 5ರ ಗ್ರಾಮದ ಹೊರವಲಯದ ಜಮೀನಿನಲ್ಲಿ ಸ್ನೇಹಾ ಅವರ ಮೃತದೇಹ ಪತ್ತೆಯಾಗಿತ್ತು. ದುಷ್ಕರ್ಮಿಗಳು ಆಕೆಯ ತಲೆಗೆ ಬಲವಾದ ವಸ್ತುವಿನಿಂದ ಹಲ್ಲೆ ನಡೆಸಿ ಹತ್ಯೆಗೈದಿದ್ದು, ಬಳಿಕ ಆಕೆಯ ಒಂದೂವರೆ ವರ್ಷದ ಪುಟ್ಟ ಮಗುವನ್ನು ಶವದ ಪಕ್ಕದಲ್ಲೇ ಅನಾಥವಾಗಿ ಬಿಟ್ಟು ಪರಾರಿಯಾಗಿದ್ದರು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಶ್ಯುಗಿರಿ ತಿಳಿಸಿದ್ದಾರೆ.
ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಹತ್ಯೆಗೆ ಸಂಬಂಧಿಸಿದ ಹಲವು ಆಘಾತಕಾರಿ ಅಂಶಗಳು ಬಯಲಿಗೆ ಬಂದಿವೆ. ಆರೋಪಿ ಶುಭಮ್, ಮೃತ ಸ್ನೇಹಾಳ ಪತಿ ಅಮಿತ್‌ನ ಸ್ನೇಹಿತನಾಗಿದ್ದು, ಸ್ನೇಹಾ ಹಾಗೂ ಶುಭಮ್ ನಡುವೆ ಆತ್ಮೀಯ ಸಂಪರ್ಕ ಬೆಳೆದಿತ್ತು. ಈ ವಿಚಾರವಾಗಿ ದಂಪತಿ ನಡುವೆ ನಿರಂತರ ಗಲಾಟೆ ನಡೆಯುತ್ತಿದ್ದುದರಿಂದ ಸ್ನೇಹಾ ಪತಿಯನ್ನು ತೊರೆದು ಅಜ್ಜಿ ಮನೆಯಲ್ಲಿ ವಾಸವಿದ್ದರು. ಅಲ್ಲದೆ, ಬೇರೆಡೆಗೆ ಹೋಗುವಂತೆ ಆಕೆ ಶುಭಮ್‌ಗೆ ಒತ್ತಾಯಿಸುತ್ತಿದ್ದಳು ಎನ್ನಲಾಗಿದೆ.
ಘಟನೆ ನಡೆದ ದಿನ ಜಮೀನಿನಲ್ಲಿ ಸ್ನೇಹಾ ಮತ್ತು ಶುಭಮ್ ನಡುವೆ ತೀವ್ರ ವಾಗ್ವಾದ ನಡೆದಿದ್ದು, ಸಿಟ್ಟಿಗೆದ್ದ ಶುಭಮ್ ಆಕೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.
ಬಂಧಿತ ಆರೋಪಿ ಶುಭಮ್‌ನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಕೊಲೆಯಲ್ಲಿ ಪತಿ ಅಮಿತ್ ಅಥವಾ ಬೇರೆ ವ್ಯಕ್ತಿಗಳ ಪಾತ್ರವಿದೆಯೇ ಎಂಬ ಕೋನದಲ್ಲೂ ಸಿಂಧನೂರು ಗ್ರಾಮಾಂತರ ಠಾಣೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…
ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…
ಕಲಬುರಗಿ: ನಿಗದಿತ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ರಾಜೇಶ್ವರಿ ಅವರ…
ಜಮುಯಿ: ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದ 10ನೇ ತರಗತಿ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯನ್ನು ರಸ್ತೆಯಲ್ಲಿ ಅಡ್ಡಗಟ್ಟಿ, ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ…
ಹೈದರಾಬಾದ್: ನಗರದ ಪ್ರಮುಖ ಐಟಿ ಹಬ್ ಮಾದಾಪುರದಲ್ಲಿ ಯುವತಿಯೊಬ್ಬಳು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ಪ್ರಿಯಕರನೊಂದಿಗೆ OYO…
ಬಾಗಲಕೋಟೆ: ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆಯೇ ಎಂಬ…