ಲಬುರಗಿ ಜಿಲ್ಲೆಯ ರಟಕಲ್ ಪೊಲೀಸ್ ಠಾಣೆಯ ಪಿಎಸ್‌ಐ ಗಂಗಮ್ಮ ಅವರನ್ನು ಅಮಾನತುಗೊಳಿಸಲಾಗಿದೆ. ಎರಡು ಕುಟುಂಬಗಳ ನಡುವಿನ ಜಮೀನು ವಿವಾದವನ್ನು ಇತ್ಯರ್ಥಪಡಿಸಲು ನಡೆದ ಮಾತುಕತೆ ವೇಳೆ, ಪರಿಶಿಷ್ಟ ಸಮುದಾಯದ ಬಗ್ಗೆ ಹಗುರವಾಗಿ ಮಾತನಾಡಿದ ಆರೋಪ ಅವರ ಮೇಲೆ ಮೂಡಿತ್ತು.
ಸೇರಿ ಗ್ರಾಮದ ಅಣಬಸಪ್ಪಗೌಡ ಪಾಟೀಲ್ ಹಾಗೂ ಮತ್ತೊಂದು ಕುಟುಂಬದ ನಡುವಿನ ವಿವಾದವನ್ನು ಸೀಮಿತಗೊಳಿಸಲು ಪಿಎಸ್‌ಐ ಗಂಗಮ್ಮ ಚರ್ಚೆ ನಡೆಸುತ್ತಿದ್ದಾಗ, ಪರಿಶಿಷ್ಟ ಸಮುದಾಯದ ವಿರುದ್ಧ ನಿಂದನೀಯ ಪದಗಳನ್ನು ಬಳಸಿದರು ಎಂಬ ಆರೋಪ ಹೊರಿಸಲಾಗಿದೆ. ಇದನ್ನು ಗಮನಿಸಿದ ದಲಿತ ಪ್ಯಾಂಥರ್ ಮತ್ತು ದಲಿತ ಸೇನೆ ಸಂಘಟನೆಗಳ ಪದಾಧಿಕಾರಿಗಳು ಚಿಂಚೋಳಿ ಡಿವೈಎಸ್ಪಿ ಹಾಗೂ ಕಲಬುರಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ಸಲ್ಲಿಸಿದರು.
ವಿಷಯದ ಸತ್ಯಾಸತ್ಯತೆ ಪರಿಶೀಲಿಸಿದ ಈಶಾನ್ಯ ವಲಯ ಐಜಿಪಿ ಅಜಯ್ ಹಿರೋಳಿ ಅವರ ವರದಿಯ ಮೇರೆಗೆ ಪಿಎಸ್‌ಐ ಗಂಗಮ್ಮ ಅವರನ್ನು ಅಮಾನತುಗೊಳಿಸಿ ಕ್ರಮ ಕೈಗೊಳ್ಳಲಾಗಿದೆ.

Related News

error: Content is protected !!