ಕಲಬುರಗಿ ಜಿಲ್ಲೆಯ ರಟಕಲ್ ಪೊಲೀಸ್ ಠಾಣೆಯ ಪಿಎಸ್‌ಐ ಗಂಗಮ್ಮ ಅವರನ್ನು ಅಮಾನತುಗೊಳಿಸಲಾಗಿದೆ. ಎರಡು ಕುಟುಂಬಗಳ ನಡುವಿನ ಜಮೀನು ವಿವಾದವನ್ನು ಇತ್ಯರ್ಥಪಡಿಸಲು ನಡೆದ ಮಾತುಕತೆ ವೇಳೆ, ಪರಿಶಿಷ್ಟ ಸಮುದಾಯದ ಬಗ್ಗೆ ಹಗುರವಾಗಿ ಮಾತನಾಡಿದ ಆರೋಪ ಅವರ ಮೇಲೆ ಮೂಡಿತ್ತು.
ಸೇರಿ ಗ್ರಾಮದ ಅಣಬಸಪ್ಪಗೌಡ ಪಾಟೀಲ್ ಹಾಗೂ ಮತ್ತೊಂದು ಕುಟುಂಬದ ನಡುವಿನ ವಿವಾದವನ್ನು ಸೀಮಿತಗೊಳಿಸಲು ಪಿಎಸ್‌ಐ ಗಂಗಮ್ಮ ಚರ್ಚೆ ನಡೆಸುತ್ತಿದ್ದಾಗ, ಪರಿಶಿಷ್ಟ ಸಮುದಾಯದ ವಿರುದ್ಧ ನಿಂದನೀಯ ಪದಗಳನ್ನು ಬಳಸಿದರು ಎಂಬ ಆರೋಪ ಹೊರಿಸಲಾಗಿದೆ. ಇದನ್ನು ಗಮನಿಸಿದ ದಲಿತ ಪ್ಯಾಂಥರ್ ಮತ್ತು ದಲಿತ ಸೇನೆ ಸಂಘಟನೆಗಳ ಪದಾಧಿಕಾರಿಗಳು ಚಿಂಚೋಳಿ ಡಿವೈಎಸ್ಪಿ ಹಾಗೂ ಕಲಬುರಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ಸಲ್ಲಿಸಿದರು.
ವಿಷಯದ ಸತ್ಯಾಸತ್ಯತೆ ಪರಿಶೀಲಿಸಿದ ಈಶಾನ್ಯ ವಲಯ ಐಜಿಪಿ ಅಜಯ್ ಹಿರೋಳಿ ಅವರ ವರದಿಯ ಮೇರೆಗೆ ಪಿಎಸ್‌ಐ ಗಂಗಮ್ಮ ಅವರನ್ನು ಅಮಾನತುಗೊಳಿಸಿ ಕ್ರಮ ಕೈಗೊಳ್ಳಲಾಗಿದೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…