Categories: CrimeLatest

10 ವರ್ಷಗಳ ಅನೈತಿಕ ಸಂಬಂಧದ ಬಲೆ: 65ರ ವೈದ್ಯನಿಗೆ ವಯಾಗ್ರ ನೀಡಿ ₹2 ಕೋಟಿ ದೋಚಿದ ನರ್ಸ್ ಬಂಧನ!

ರಾಜಸ್ಥಾನದಲ್ಲಿ ವೈದ್ಯರೊಬ್ಬರನ್ನು ಪ್ರೀತಿ ಮತ್ತು ಅನೈತಿಕ ಸಂಬಂಧದ ಹೆಸರಿನಲ್ಲಿ ವಂಚಿಸಿ ಕೋಟ್ಯಂತರ ರೂಪಾಯಿ ದೋಚಿದ ಪ್ರಕರಣ ಬೆಳಕಿಗೆ ಬಂದಿದೆ. 65 ವರ್ಷದ ವೈದ್ಯರಿಗೆ ದೀರ್ಘಕಾಲ ಬ್ಲಾಕ್‌ಮೇಲ್ ಮಾಡಿ ಸುಮಾರು ₹2 ಕೋಟಿ ಮೌಲ್ಯದ ಹಣ, ಚಿನ್ನಾಭರಣ ಹಾಗೂ ಆಸ್ತಿಯನ್ನು ತನ್ನ ಹೆಸರಿಗೆ ಮಾಡಿಸಿಕೊಂಡಿದ್ದ ಆರೋಪದ ಮೇಲೆ ನರ್ಸ್ ಕಮಲಾಳನ್ನು ಪೊಲೀಸರು ಬಂಧಿಸಿದ್ದಾರೆ.

ಪೊಲೀಸರ ಮಾಹಿತಿ ಪ್ರಕಾರ, ಬಾರ್ಮೇರ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದ ಡಾ. ಸೈಮನ್ ಮತ್ತು ನರ್ಸ್ ಕಮಲಾ ನಡುವೆ ಸುಮಾರು ಹತ್ತು ವರ್ಷಗಳಿಂದ ಆಪ್ತ ಸಂಬಂಧವಿತ್ತು ಎನ್ನಲಾಗಿದೆ. ಈ ಸಂಬಂಧದ ವೇಳೆ ವೈದ್ಯರ ಖಾಸಗಿ ಮಾಹಿತಿ ಮತ್ತು ವಿಡಿಯೊಗಳನ್ನು ಸಂಗ್ರಹಿಸಿಕೊಂಡಿದ್ದ ಕಮಲಾ, ಬಳಿಕ ಅವುಗಳನ್ನು ಬಹಿರಂಗಪಡಿಸುವುದಾಗಿ ಬೆದರಿಸಿ ನಿರಂತರವಾಗಿ ಹಣ ಮತ್ತು ಆಸ್ತಿಯನ್ನು ಪಡೆದುಕೊಳ್ಳುತ್ತಿದ್ದಳು ಎಂದು ಆರೋಪಿಸಲಾಗಿದೆ.

ವೈದ್ಯರನ್ನು ತನ್ನ ಹಿಡಿತದಲ್ಲಿಡುವ ಉದ್ದೇಶದಿಂದ ಕಮಲಾ ಆಗಾಗ ಲೈಂಗಿಕ ಸಾಮರ್ಥ್ಯ ಹೆಚ್ಚಿಸುವ ವಯಾಗ್ರ ಮಾತ್ರೆಗಳನ್ನು ಸೇವಿಸುವಂತೆ ಒತ್ತಾಯಿಸುತ್ತಿದ್ದಳು ಎನ್ನಲಾಗಿದೆ. ಇತ್ತೀಚೆಗೆ ಒಂದೇ ಬಾರಿ ಎರಡು ಮಾತ್ರೆಗಳನ್ನು ಸೇವಿಸುವಂತೆ ಒತ್ತಾಯಿಸಿದಾಗ ವೈದ್ಯರು ಆರೋಗ್ಯದ ಕಾರಣ ನೀಡಿ ನಿರಾಕರಿಸಿದ್ದರು. ಇದೇ ವಿಚಾರವಾಗಿ ಇಬ್ಬರ ನಡುವೆ ವಾಗ್ವಾದ ನಡೆದಿದ್ದು, ಬಳಿಕ ಕಮಲಾ ಮತ್ತೆ ಬೆದರಿಕೆ ಹಾಕಲು ಆರಂಭಿಸಿದ್ದಾಳೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ನಿರಂತರ ಕಿರುಕುಳದಿಂದ ಬೇಸತ್ತ ವೈದ್ಯರು ಕೊನೆಗೆ ಪೊಲೀಸ್ ಠಾಣೆಗೆ ದೂರು ನೀಡಿದರು. ಪ್ರಕರಣ ದಾಖಲಿಸಿಕೊಂಡ ಕೊತ್ವಾಲಿ ಪೊಲೀಸರು ತನಿಖೆ ನಡೆಸಿ ನರ್ಸ್ ಕಮಲಾಳನ್ನು ಬಂಧಿಸಿದ್ದಾರೆ. ಆರೋಪಿಯ ವಿರುದ್ಧ ಬ್ಲಾಕ್‌ಮೇಲ್, ವಂಚನೆ ಹಾಗೂ ಬೆದರಿಕೆ ಸೇರಿದಂತೆ ವಿವಿಧ ಆರೋಪಗಳಡಿ ತನಿಖೆ ಮುಂದುವರಿದಿದೆ.

ಈ ಪ್ರಕರಣ ರಾಜಸ್ಥಾನದಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದು, ವೈಯಕ್ತಿಕ ಸಂಬಂಧಗಳನ್ನು ದುರುಪಯೋಗಪಡಿಸಿಕೊಂಡು ನಡೆಯುವ ವಂಚನೆಗಳ ಬಗ್ಗೆ ಮತ್ತೊಮ್ಮೆ ಎಚ್ಚರಿಕೆಯ ಸಂದೇಶ ನೀಡಿದೆ.

ಭ್ರಷ್ಟರ ಬೇಟೆ

Recent Posts

ಪತಿಯನ್ನೇ ಕೊಲ್ಲಲು ಪತ್ನಿಯ ಸ್ಕೆಚ್‌! ಪ್ರಿಯಕರನ ಮೊಬೈಲ್‌ನಲ್ಲಿ ಸಿಕ್ತು ಶಾಕಿಂಗ್ ಸಾಕ್ಷಿ..!

ಸೂರ್ಯಾಪೇಟೆ: ಅನೈತಿಕ ಸಂಬಂಧಕ್ಕೆ ಪತಿ ಅಡ್ಡಿಯಾಗಿದ್ದಾನೆ ಎಂಬ ಕಾರಣಕ್ಕೆ ಪತಿಯನ್ನೇ ಕೊಲೆ ಮಾಡಲು ಪತ್ನಿ ಹಾಗೂ ಆಕೆಯ ಕುಟುಂಬಸ್ಥರು ಸಂಚು…

12 hours ago

ಗಂಡ ನೈಟ್ ಡ್ಯೂಟಿಗೆ ಹೋದಾಗ ಮಕ್ಕಳಿಗೆ ನಿದ್ರೆ ಗುಳಿಗೆ; ಲವ್ವರ್ ಜೊತೆ ಪತ್ನಿಯ ಚಕ್ಕಂದ.. ಮಧ್ಯರಾತ್ರಿ ಮನೆಗೆ ಬಂದ ಗಂಡನಿಗೆ ಕಾದಿತ್ತು ಘೋರ ದುರಂತ!

ಸೋನ್‌ಭದ್ರ: ಗಂಡ ನೈಟ್ ಡ್ಯೂಟಿಗೆ ಹೋದ ಬಳಿಕ ಮಕ್ಕಳಿಗೆ ನಿದ್ರೆ ಮಾತ್ರೆ ನೀಡಿ, ಪ್ರಿಯಕರನನ್ನು ಮನೆಗೆ ಕರೆಸಿಕೊಳ್ಳುತ್ತಿದ್ದ ಪತ್ನಿ, ಕೊನೆಗೆ…

12 hours ago

ರೈಲ್ವೆ ಕಾಮಗಾರಿ ಕಾರ್ಮಿಕರಿದ್ದ ಬೊಲೆರೋ ಪಲ್ಟಿ: ಎಂಟು ಮಂದಿಗೆ ಗಂಭೀರ ಗಾಯ

ಗೌರಿಬಿದನೂರು: ರೈಲ್ವೆ ಇಲಾಖೆಯ ಕಾಮಗಾರಿ ಕೆಲಸಕ್ಕೆ ತೆರಳುತ್ತಿದ್ದ ಕೂಲಿ ಕಾರ್ಮಿಕರಿದ್ದ ಬೊಲೆರೋ ವಾಹನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾದ…

12 hours ago

ಹುಬ್ಬಳ್ಳಿ–ಧಾರವಾಡದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ: 1,339 ಮಂದಿ ವಿರುದ್ಧ ಪ್ರಕರಣ

ಹುಬ್ಬಳ್ಳಿ–ಧಾರವಾಡ: ಅವಳಿ ನಗರದಲ್ಲಿ ಮಾದಕ ವಸ್ತುಗಳ ಜಾಲವನ್ನು ಬೇರುಸಹಿತ ಕಿತ್ತುಹಾಕಲು ಹುಬ್ಬಳ್ಳಿ–ಧಾರವಾಡ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದು, ಕಳೆದ ಮೂರು…

1 day ago

ವಿದ್ಯುತ್ ತಂತಿ ಅಳವಡಿಸಿ ಎರಡು ಜಿಂಕೆಗಳ ಬಲಿ: ಜಮೀನಿನಲ್ಲೇ ಮಾಂಸ ಬೇಯಿಸುತ್ತಿದ್ದ ಆರೋಪಿಗಳು!

ಸಾಗರ: ಜಮೀನಿಗೆ ಅಕ್ರಮವಾಗಿ ವಿದ್ಯುತ್ ತಂತಿ ಅಳವಡಿಸಿ ಎರಡು ಗಂಡು ಜಿಂಕೆಗಳನ್ನು ವಿದ್ಯುತ್ ಸ್ಪರ್ಶದಿಂದ ಸಾಯಿಸಿ, ಅವುಗಳ ಮಾಂಸವನ್ನು ಜಮೀನಿನಲ್ಲೇ…

1 day ago

ಅರ್ಚಕ ವಿಶ್ವೇಶ್ವರ ಭಟ್ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಕುಮಟಾ: ನಗರದ ಪ್ರಸಿದ್ಧ ಕುಂಭೇಶ್ವರ ದೇವಸ್ಥಾನದ ಅರ್ಚಕ ವಿಶ್ವೇಶ್ವರ ಭಟ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರ ಜಿಲ್ಲಾ ಮತ್ತು…

1 day ago