Latest

ಎಂಡಿಎಂಎ ಮಾದಕ ವಸ್ತು ಸಾಗಾಟ – ಸುಳ್ಯದ ವ್ಯಕ್ತಿ ಸಿಸಿಬಿ ಅರೆಸ್ಟ್‌

ಮಂಗಳೂರಿನ ಲಾಲ್‌ಬಾಗ್‌ ಪ್ರದೇಶದಲ್ಲಿ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟದಲ್ಲಿ ತೊಡಗಿದ್ದ ಒಬ್ಬ ವ್ಯಕ್ತಿಯನ್ನು ಮಂಗಳೂರು ನಗರದ ಸಿಸಿಬಿ ಪೊಲೀಸರು ಬಂಧಿಸಿರುವ ಘಟನೆ ಬೆಳಕಿಗೆ ಬಂದಿದೆ. ಬಂಧಿತನಿಂದ 11 ಗ್ರಾಂ ಎಂಡಿಎಂಎ ಜೊತೆಗೆ ಮೊಬೈಲ್‌ ಫೋನ್‌ ಹಾಗೂ ಸ್ಕೂಟರ್‌ ವಶಪಡಿಸಿಕೊಂಡಿದ್ದಾರೆ.

ಬಂಧಿತನನ್ನು ಸುಳ್ಯ ತಾಲೂಕಿನ ಪೆರುವಾಜೆ ಗ್ರಾಮದ ಅಲಂತಡ್ಕ ಹೌಸ್‌ನ ನಿವಾಸಿ ಮೊಹಮ್ಮದ್‌ ಅಶ್ರಫ್‌ ಅಲಂತಡ್ಕ (ವಯಸ್ಸು 50) ಎಂದು ಗುರುತಿಸಲಾಗಿದೆ. ನವದೆಹಲಿಯಿಂದ ಕೊರಿಯರ್‌ ಮೂಲಕ ಎಂಡಿಎಂಎ ಮಾದಕ ವಸ್ತು ತರಿಸಿಕೊಂಡು, ಮಂಗಳೂರು ನಗರಕ್ಕೆ ತಂದು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಖಚಿತ ಮಾಹಿತಿಯ ಮೇರೆಗೆ ಮಂಗಳೂರು ಸಿಸಿಬಿ ಪೊಲೀಸರು ಲಾಲ್‌ಬಾಗ್‌ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿ ಅಶ್ರಫ್‌ಅನ್ನು ಬಂಧಿಸಿದ್ದಾರೆ. ಈ ವೇಳೆ ಅಂದಾಜು ರೂ. 1 ಲಕ್ಷ ಮೌಲ್ಯದ 11 ಗ್ರಾಂ ಎಂಡಿಎಂಎ, ಮೊಬೈಲ್‌ ಫೋನ್‌ ಹಾಗೂ ಸ್ಕೂಟರ್‌ ಸೇರಿದಂತೆ ಒಟ್ಟು ರೂ. 1.60 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಈ ಸಂಬಂಧ ಬರ್ಕೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿದಿದೆ.

ಕಾರ್ಯಾಚರಣೆಯಲ್ಲಿ ಸಿಸಿಬಿ ಘಟಕದ ಎಸಿಪಿ ಮನೋಜ್‌ ಕುಮಾರ್‌ ನಾಯ್ಕ ಅವರ ಮಾರ್ಗದರ್ಶನದಲ್ಲಿ ಪೊಲೀಸರು ರಫೀಕ್‌ ಕೆ.ಎಂ. ಅವರ ನೇತೃತ್ವದಲ್ಲಿ ಪಿಎಸ್‌ಐ ಸುದೀಪ್‌ ಎಂ.ವಿ., ಶರಣಪ್ಪ ಭಂಡಾರಿ, ಎಎಸ್‌ಐ ಮೋಹನ್‌ ಕೆ.ವಿ., ರಾಮ ಮತ್ತು ಸಿಸಿಬಿ ಸಿಬ್ಬಂದಿ ಭಾಗವಹಿಸಿದ್ದರು.

nazeer ahamad

Recent Posts

ಬಾಗಲಕೋಟೆ ನಗರದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ಬಾಗಲಕೋಟೆ: ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಚೀಫ್ ಇಂಜಿನಿಯರ್ ವಸಂತ ವಾಲಪ್ಪ ನಾಯಕ ಅವರ ಬೆಂಗಳೂರು ಸೇರಿದಂತೆ ಬಾಗಲಕೋಟೆಯಲ್ಲಿರುವ ಮನೆಯ…

14 hours ago

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

2 weeks ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago