Categories: CrimeLatestSports

ಐಪಿಎಲ್ ಟಿಕೆಟ್ ಕಾಳಬಜಾರ್ ಭೇದಿಸಿದ ಸಿಸಿಬಿ! ₹1,200 ಟಿಕೆಟ್ ₹19,000ಕ್ಕೆ ಮಾರಾಟ—ಚಿನ್ನಸ್ವಾಮಿ ಒಳಗೇ ನಡೆಯುತ್ತಿದ್ದ ದೊಡ್ಡ ದಂಧೆ ಬಯಲು

ಬೆಂಗಳೂರು: ಐಪಿಎಲ್ ಹುಚ್ಚನ್ನು ದುರುಪಯೋಗಪಡಿಸಿಕೊಂಡು ಅಭಿಮಾನಿಗಳಿಂದ ಲಕ್ಷಾಂತರ ಹಣ ದೋಚುತ್ತಿದ್ದ ದೊಡ್ಡ ಟಿಕೆಟ್ ಕಾಳಬಜಾರ್ ಜಾಲವೊಂದನ್ನು ಸಿಸಿಬಿ ಪೊಲೀಸರು ಭೇದಿಸಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದ ಒಳಗೇ ಕೆಲಸ ಮಾಡುತ್ತಿದ್ದ ಕ್ಯಾಂಟೀನ್ ನೌಕರನೊಬ್ಬನ ಬಂಧನದೊಂದಿಗೆ ಈ ದಂಧೆಯ ಅಸಲಿ ಮುಖ ಹೊರಬಿದ್ದಿದೆ.

ಬಂಧಿತನನ್ನು ಪಿ. ಚಂದ್ರಶೇಖರ್ ಎಂದು ಗುರುತಿಸಲಾಗಿದ್ದು, ಆತ ‘ಶ್ರೀ ಲಕ್ಷ್ಮಿ ಕ್ಯಾಂಟೀನ್’ನಲ್ಲಿ ಕೆಲಸ ಮಾಡುತ್ತಿದ್ದನು. ಪೊಲೀಸರ ದಾಳಿಯಲ್ಲಿ ಆತನಿಂದ 100ಕ್ಕೂ ಹೆಚ್ಚು ಐಪಿಎಲ್ ಟಿಕೆಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ತನಿಖೆಯಲ್ಲಿ ಆಘಾತಕಾರಿ ವಿಷಯ ಬೆಳಕಿಗೆ ಬಂದಿದ್ದು, ಕೇವಲ ₹1,200 ಮುಖಬೆಲೆಯ ಟಿಕೆಟ್‌ಗಳನ್ನು ₹15,000 ರಿಂದ ₹19,000ರವರೆಗೆ ಅತಿಯಾದ ದರಕ್ಕೆ ಮಾರಾಟ ಮಾಡುತ್ತಿದ್ದದ್ದು ಪತ್ತೆಯಾಗಿದೆ.

ಇನ್ನಷ್ಟು ಆತಂಕಕಾರಿ ಸಂಗತಿ ಎಂದರೆ, ಈ ಪ್ರಕರಣದಲ್ಲಿ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (KSCA) ಸದಸ್ಯ ಎನ್ನಲಾದ ಗಣೇಶ್ ಹರಿಕೇಶ್ ಅವರ ಕೈವಾಡವೂ ಕೇಳಿಬಂದಿದೆ. ವಿಚಾರಣೆ ವೇಳೆ ಆರೋಪಿ ಚಂದ್ರಶೇಖರ್, ಈ ಟಿಕೆಟ್‌ಗಳನ್ನು ಗಣೇಶ್ ಹರಿಕೇಶ್ ಅವರೇ ನೀಡಿದ್ದು, ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಸೂಚಿಸಿದ್ದರು ಎಂದು ಹೇಳಿದ್ದಾನೆ.

ಈ ಜಾಲವು ಮುಖ್ಯವಾಗಿ ಆರ್‌ಸಿಬಿ ವಿರುದ್ಧ ಎಸ್‌ಆರ್‌ಹೆಚ್ ಮತ್ತು ಆರ್‌ಸಿಬಿ ವಿರುದ್ಧ ಎಲ್‌ಎಸ್‌ಜಿ ಪಂದ್ಯಗಳ ಟಿಕೆಟ್‌ಗಳನ್ನು ಹೊಂದಿತ್ತು. ಮಾರ್ಚ್ 28ರಂದು ನಡೆದ ಆರ್‌ಸಿಬಿ–ಎಸ್‌ಆರ್‌ಹೆಚ್ ಪಂದ್ಯಕ್ಕೆ ಸಂಬಂಧಿಸಿದಂತೆ 81 ಟಿಕೆಟ್‌ಗಳು ಮತ್ತು ಆರ್‌ಸಿಬಿ–ಎಲ್‌ಎಸ್‌ಜಿ ಪಂದ್ಯಕ್ಕೆ ಸಂಬಂಧಿಸಿದಂತೆ 100 ಟಿಕೆಟ್‌ಗಳನ್ನು ಜಪ್ತಿಮಾಡಲಾಗಿದೆ.

ಈ ಅಕ್ರಮಕ್ಕೆ ಸಹಕರಿಸಿದ ಆರೋಪದ ಮೇಲೆ ಕೆಲವು ಖಾಸಗಿ ಕಂಪನಿಗಳ ವ್ಯವಸ್ಥಾಪಕ ನಿರ್ದೇಶಕರ ವಿರುದ್ಧವೂ ಸಿಸಿಬಿ ಎಫ್‌ಐಆರ್ ದಾಖಲಿಸಿದೆ.

ಈ ಬಗ್ಗೆ ಮಾತನಾಡಿದ ಸಿಸಿಬಿ ಡಿಸಿಪಿ ಶ್ರೀಹರಿಬಾಬು, “ಐಪಿಎಲ್ ಟಿಕೆಟ್ ಕಾಳಬಜಾರ್ ಪ್ರಕರಣಗಳಲ್ಲಿ ಈಗಾಗಲೇ 10ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಇಂತಹ ಅಕ್ರಮಗಳಲ್ಲಿ ತೊಡಗಿರುವವರ ವಿರುದ್ಧ ಯಾವುದೇ ಸಡಿಲಿಕೆ ಇಲ್ಲದೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ” ಎಂದು ಎಚ್ಚರಿಕೆ ನೀಡಿದ್ದಾರೆ.

ಅಭಿಮಾನಿಗಳಿಗೆ ಎಚ್ಚರಿಕೆ:
ಐಪಿಎಲ್ ಟಿಕೆಟ್ ಖರೀದಿಸುವಾಗ ಎಚ್ಚರಿಕೆಯಿಂದಿರಿ. ಅಧಿಕೃತ ಮಾರ್ಗಗಳ ಮೂಲಕ ಮಾತ್ರ ಟಿಕೆಟ್ ಪಡೆದುಕೊಳ್ಳಿ. ಅಕ್ರಮ ಮಾರಾಟಗಾರರಿಗೆ ಹಣ ನೀಡಿ ಮೋಸ ಹೋಗುವುದನ್ನು ತಪ್ಪಿಸಿ.

ಭ್ರಷ್ಟರ ಬೇಟೆ

Recent Posts

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

10 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

15 hours ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago

ಬಿಹಾರದಲ್ಲಿ ಬೆಚ್ಚಿಬೀಳಿಸುವ ಕೃತ್ಯ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ಬಂಧನ, ಪೋಕ್ಸೊ ಕೇಸ್ ದಾಖಲು

ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…

2 days ago

ಕಲಬುರಗಿಯಲ್ಲಿ ಜೆಸ್ಕಾಂ AEE ರಾಜೇಶ್ವರಿ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಕಲಬುರಗಿ: ನಿಗದಿತ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ರಾಜೇಶ್ವರಿ ಅವರ…

2 days ago