Latest

ಸಿಸಿಬಿ ಪೋಲೀಸರಿಂದ ಎರಡು ಪ್ರತ್ಯೇಕ ಮಟ್ಕಾ ಪ್ರಕರಣಗಳಲ್ಲಿ ಇಬ್ಬರು ಆರೋಪಿಗಳ ಬಂಧನ.

ಸಿ.ಸಿ.ಬಿ ಪೊಲೀಸರು ಖಚಿತ ಮಾಹಿತಿ ಮೇರೆಗೆ ದಿನಾಂಕ ೧೨/೦೯/೨೦೨೨ ರಂದು ಮಂಡಿ ಮೊಹಲ್ಲಾದ ಪುಲಿಕೇಶಿ ರಸ್ತೆಯಲ್ಲಿರುವ ಕರ್ನಾಟಕ ಆಟೋ ಕುಷನ್‌ವರ್ಕ್ಸ್ಗೆ ದಾಳಿ ಮಾಡಿ ಮಟ್ಕಾ ದಂದೆಯಲ್ಲಿ ತೊಡಗಿದ್ದ ಒಬ್ಬ ಆರೋಪಿಯನ್ನು ಬಂಧಿಸಿ ಮಟ್ಕಾ ದಂಧೆಯಲ್ಲಿ ಗಿರಾಕಿಗಳಿಂದ ಸಂಗ್ರಹಿಸಿದ ರೂ ೭೦.೦೦೦/- ನಗದು ಹಣ ಮತ್ತು ೪ ಮಟ್ಕಾ ಚೀಟಿಗಳನ್ನು ವಶಪಡಿಸಿಕೊಂಡಿರುತ್ತಾರೆ. ಹಾಗೂ ದಿನಾಂಕ ೧೫/೦೯/೨೦೨೨ ರಂದು ಉದಯಗಿರಿ ಪೊಲೀಸ್ ಠಾಣಾ ಸರಹದ್ದು ಕೆ.ಎನ್.ಪುರ ಟೆಂಟ್ ರಸ್ತೆಯಲ್ಲಿರುವ ಆರ್.ಜೆ ಟೀ ಸ್ಟಾಲ್‌ನಲ್ಲಿ ದಾಳಿ ಮಾಡಿ ಮಟ್ಕಾ ದಂದೆಯಲ್ಲಿ ತೊಡಗಿದ್ದ ಒಬ್ಬ ಆರೋಪಿಯನ್ನು ಬಂಧಿಸಿ ಮಟ್ಕಾ ದಂಧೆಯಲ್ಲಿ ಗಿರಾಕಿಗಳಿಂದ ಸಂಗ್ರಹಿಸಿದ ರೂ ೨೦.೦೦೦/- ನಗದು ಹಣ ಮತ್ತು ೪ ಮಟ್ಕಾ ಚೀಟಿಗಳನ್ನು ಅಮಾನತ್ತು ಪಡಿಸಿಕೊಂಡಿರುತ್ತಾರೆ.
ಈ ದಾಳಿ ಕಾರ್ಯವನ್ನು ಮೈಸೂರು ನಗರದ ಡಿಸಿಪಿ, ಕೇಂದ್ರಸ್ಥಾನ, ಅಪರಾಧ ಮತ್ತು ಸಂಚಾರ ವಿಭಾಗ ರವರಾದ ಶ್ರೀಮತಿ ಗೀತ ಎಂ.ಎಸ್, ಐ.ಪಿ.ಎಸ್ ಹಾಗೂ ಸಿ.ಸಿ.ಬಿ ಘಟಕದ ಎ.ಸಿ.ಪಿ ರವರಾದ ಶ್ರೀ ಸಿ.ಕೆ. ಅಶ್ವಥನಾರಾಯಣ ರವರ ಮಾರ್ಗದರ್ಶನದಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಎ. ಮಲ್ಲೇಶ್, ಎ.ಎಸ್.ಐ ರಾಜು ಹಾಗೂ ಸಿಬ್ಬಂದಿಗಳಾದ ರವಿಕುಮಾರ್.ಎಸ್, ರಾಧೇಶ್.ಬಿ, ಸುಬಾನಲ್ಲಾ ಬಾಲ್‌ದಾರ್, ಕೆ,ಜಿ. ಶ್ರೀನಿವಾಸ ರವರುಗಳು ಮಾಡಿರುತ್ತಾರೆ.
ಈ ದಾಳಿ ಕಾರ್ಯವನ್ನು ಮೈಸೂರು ನಗರದ ಪೊಲೀಸ್ ಆಯುಕ್ತರವರಾದ ಡಾ: ಚಂದ್ರಗುಪ್ತ, ಐ.ಪಿ.ಎಸ್. ರವರು ಪ್ರಶಂಸಿಸಿರುತ್ತಾರೆ.

ಭ್ರಷ್ಟರ ಬೇಟೆ

Recent Posts

ಗ್ರಾಮ ಪಂಚಾಯಿತಿ ನಿರ್ಲಕ್ಷ್ಯ; ಬೇಸತ್ತು ಚರಂಡಿ ಸ್ವಚ್ಛಗೊಳಿಸಿದ ಮಹಿಳೆ.

ಕೊಟ್ಟೂರು:- ತಾಲ್ಲೂಕಿನ ಕೆ. ಅಯ್ಯನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಹರಾಳು ಗ್ರಾಮದ ದುಮ್ಮಾಡಿ ಕೆಂಚಮ್ಮ ಎಂಬ ಮಹಿಳೆಯೋರ್ವರು ತಮ್ಮ…

13 hours ago

ಬಸವನ ಬಾಗೇವಾಡಿಯಲ್ಲಿ ಅಕ್ರಮ LPG ರೀಫಿಲ್ಲಿಂಗ್ ಆರೋಪ: ಅಧಿಕಾರಿಗಳ ಮೌನಕ್ಕೆ ಸಾರ್ವಜನಿಕರ ಆಕ್ರೋಶ

ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ನಗರದಲ್ಲಿ ಗೃಹಬಳಕೆಯ LPG ಸಿಲಿಂಡರ್‌ಗಳಿಂದ ಆಟೋಗಳಿಗೆ ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡಲಾಗುತ್ತಿದೆ ಎಂಬ ಆರೋಪ…

20 hours ago

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

2 days ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

3 days ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

3 days ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

3 days ago