ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರು ನಡೆಸಿದ ಅಮಾನುಷ ದಾಳಿಯಲ್ಲಿ 26 ಅಮಾಯಕರ ಜೀವ ಹಾರಿದ ಘಟನೆಗೆ ದೇಶಾದ್ಯಾಂತ ಶೋಕ ಹಾಗೂ ಕೋಪ ಉಂಟಾಗಿದ್ದರೆ, ಇದೇ ಸಂದರ್ಭದಲ್ಲಿ ದೆಹಲಿಯ ಪಾಕಿಸ್ತಾನ ಹೈಕಮಿಷನ್ ಕಚೇರಿಯಲ್ಲಿ ನಡೆದ ಸಂಭ್ರಮಾಚರಣೆಯ ದೃಶ್ಯಗಳು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿವೆ.
ಸಮಾಜಮಾಧ್ಯಮಗಳಲ್ಲಿ ಹರಿದಾಡುತ್ತಿರುವ ವೀಡಿಯೋದಲ್ಲಿ, ಒಬ್ಬ ಯುವಕನು ಕೇಕ್ ಹೊತ್ತು ಹೈಕಮಿಷನ್ ಕಚೇರಿಗೆ ಪ್ರವೇಶಿಸುತ್ತಿರುವುದು ಕಂಡುಬರುತ್ತದೆ. ಪತ್ರಕರ್ತರು ಕೇಳಿದ ಪ್ರಶ್ನೆಗಳಿಗೆ ಆತ ನುಣುಚಿಕೊಂಡು ಉತ್ತರಿಸಲು ನಿರಾಕರಿಸಿದ್ದಾನೆ. “ನೀವು ಯಾರು?”, “ಪಾಕಿಸ್ತಾನದಿಂದ ಬಂದಿದ್ದೀರಾ?”, “ಕೇಕ್ ಯಾಕೆ ತೆಗೆದುಕೊಂಡು ಹೋಗುತ್ತಿದ್ದೀರಿ?” ಎಂಬ ಪ್ರಶ್ನೆಗಳಿಗೆ ಸ್ಪಷ್ಟ ಉತ್ತರವೇ ಸಿಗಲಿಲ್ಲ.
ಈ ಘಟನೆಗೆ ತೀವ್ರ ಪ್ರತಿಕ್ರಿಯೆ ನೀಡಿದ ಭಾರತದ ಸರ್ಕಾರ, ಪಾಕಿಸ್ತಾನ ಹೈಕಮಿಷನ್ ಸಿಬ್ಬಂದಿಯ ಸಂಖ್ಯೆಗೆ ಕಡಿತ ಹಾಕಿರುವ ಮಾಹಿತಿ ಲಭ್ಯವಾಗಿದೆ. ಈ ಹಿಂದೆ 50 ಮಂದಿ ಕೆಲಸ ಮಾಡುತ್ತಿದ್ದರೆ, ಇದೀಗ ಕೇವಲ 20 ಜನರಿಗೆ ಮಾತ್ರ ಗೇಟ್ ಪಾಸ್ ನೀಡಲಾಗಿದೆ. ಮೇ 1ರೊಳಗೆ ನಿರ್ದಿಷ್ಟ ರಾಜತಾಂತ್ರಿಕರು ಭಾರತ ತೊರೆಯುವಂತೆ ಸೂಚನೆ ನೀಡಲಾಗಿದೆ.
ಪಹಲ್ಗಾಮ್ ದಾಳಿ ನಂತರವೇ ಈ ರೀತಿಯ ಸಂಭ್ರಮಾಚರಣೆ ನಡೆದಿರುವ ಶಂಕೆ ಮೂಡಿದ್ದು, ದೇಶದ ಜನರಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಭಾರತ–ಪಾಕಿಸ್ತಾನ ಸಂಬಂಧಗಳು ಮತ್ತಷ್ಟು ಕುಂದುಕೊಳ್ಳುವ ಲಕ್ಷಣಗಳು ಕಾಣಿಸುತ್ತಿವೆ
ಮುಂಡಗೋಡ: ಪ್ರಸ್ತುತ ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಇರಾನ್–ಅಮೇರಿಕಾ ಉದ್ವಿಗ್ನತೆ (ಯುದ್ಧ) ಪರಿಣಾಮವಾಗಿ ಇಂಧನ ಕ್ಷೇತ್ರದಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ. ಈ ಪರಿಸ್ಥಿತಿಯ…
ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…
ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…
ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…
ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…
ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…