Latest

ಪಹಲ್ಗಾಮ್ ದಾಳಿಯ ಬಳಿಕ ಪಾಕಿಸ್ತಾನ ಹೈಕಮಿಷನ್‌ನಲ್ಲಿ ಸಂಭ್ರಮಾಚರಣೆ? – ಭಾರತೀಯರಲ್ಲಿ ಭಾರೀ ಆಕ್ರೋಶ

ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರು ನಡೆಸಿದ ಅಮಾನುಷ ದಾಳಿಯಲ್ಲಿ 26 ಅಮಾಯಕರ ಜೀವ ಹಾರಿದ ಘಟನೆಗೆ ದೇಶಾದ್ಯಾಂತ ಶೋಕ ಹಾಗೂ ಕೋಪ ಉಂಟಾಗಿದ್ದರೆ, ಇದೇ ಸಂದರ್ಭದಲ್ಲಿ ದೆಹಲಿಯ ಪಾಕಿಸ್ತಾನ ಹೈಕಮಿಷನ್ ಕಚೇರಿಯಲ್ಲಿ ನಡೆದ ಸಂಭ್ರಮಾಚರಣೆಯ ದೃಶ್ಯಗಳು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿವೆ.

ಸಮಾಜಮಾಧ್ಯಮಗಳಲ್ಲಿ ಹರಿದಾಡುತ್ತಿರುವ ವೀಡಿಯೋದಲ್ಲಿ, ಒಬ್ಬ ಯುವಕನು ಕೇಕ್ ಹೊತ್ತು ಹೈಕಮಿಷನ್ ಕಚೇರಿಗೆ ಪ್ರವೇಶಿಸುತ್ತಿರುವುದು ಕಂಡುಬರುತ್ತದೆ. ಪತ್ರಕರ್ತರು ಕೇಳಿದ ಪ್ರಶ್ನೆಗಳಿಗೆ ಆತ ನುಣುಚಿಕೊಂಡು ಉತ್ತರಿಸಲು ನಿರಾಕರಿಸಿದ್ದಾನೆ. “ನೀವು ಯಾರು?”, “ಪಾಕಿಸ್ತಾನದಿಂದ ಬಂದಿದ್ದೀರಾ?”, “ಕೇಕ್ ಯಾಕೆ ತೆಗೆದುಕೊಂಡು ಹೋಗುತ್ತಿದ್ದೀರಿ?” ಎಂಬ ಪ್ರಶ್ನೆಗಳಿಗೆ ಸ್ಪಷ್ಟ ಉತ್ತರವೇ ಸಿಗಲಿಲ್ಲ.

ಈ ಘಟನೆಗೆ ತೀವ್ರ ಪ್ರತಿಕ್ರಿಯೆ ನೀಡಿದ ಭಾರತದ ಸರ್ಕಾರ, ಪಾಕಿಸ್ತಾನ ಹೈಕಮಿಷನ್ ಸಿಬ್ಬಂದಿಯ ಸಂಖ್ಯೆಗೆ ಕಡಿತ ಹಾಕಿರುವ ಮಾಹಿತಿ ಲಭ್ಯವಾಗಿದೆ. ಈ ಹಿಂದೆ 50 ಮಂದಿ ಕೆಲಸ ಮಾಡುತ್ತಿದ್ದರೆ, ಇದೀಗ ಕೇವಲ 20 ಜನರಿಗೆ ಮಾತ್ರ ಗೇಟ್ ಪಾಸ್ ನೀಡಲಾಗಿದೆ. ಮೇ 1ರೊಳಗೆ ನಿರ್ದಿಷ್ಟ ರಾಜತಾಂತ್ರಿಕರು ಭಾರತ ತೊರೆಯುವಂತೆ ಸೂಚನೆ ನೀಡಲಾಗಿದೆ.

ಪಹಲ್ಗಾಮ್ ದಾಳಿ ನಂತರವೇ ಈ ರೀತಿಯ ಸಂಭ್ರಮಾಚರಣೆ ನಡೆದಿರುವ ಶಂಕೆ ಮೂಡಿದ್ದು, ದೇಶದ ಜನರಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಭಾರತ–ಪಾಕಿಸ್ತಾನ ಸಂಬಂಧಗಳು ಮತ್ತಷ್ಟು ಕುಂದುಕೊಳ್ಳುವ ಲಕ್ಷಣಗಳು ಕಾಣಿಸುತ್ತಿವೆ

nazeer ahamad

Recent Posts

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

17 hours ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

1 day ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

1 day ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

2 days ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

2 days ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

2 days ago