Latest

ಪ್ರೀತಿಯ ನೆಪದಲ್ಲಿ ಮೋಸ: ಯುವತಿಯ ಕಿರುಕುಳದಿಂದ ಬೇಸತ್ತ ಯುವಕ ಆತ್ಮಹತ್ಯೆ

ದೊಡ್ಡಬಳ್ಳಾಪುರ (ಬೆಂಗಳೂರು ಗ್ರಾಮಾಂತರ): ಪ್ರೀತಿಸಿದ ಯುವತಿಯ ಮಾನಸಿಕ ಕಿರುಕುಳ ತಾಳಲಾರದ ಸ್ಥಿತಿಗೆ ತಲುಪಿದ ಯುವಕನು ಸೆಲ್ಫಿ ವಿಡಿಯೋ ಮಾಡಿರುವ ಬೆನ್ನಲ್ಲೇ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಶರಣಾದ ದುರ್ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ರಾಜಘಟ್ಟದಲ್ಲಿ ನಡೆದಿದೆ.

ಮೃತಪಟ್ಟ ಯುವಕನನ್ನು ಮಂಜುನಾಥ್ ಎಂದು ಗುರುತಿಸಲಾಗಿದ್ದು, ಜೂನ್ 13ರಂದು ರಾಜಘಟ್ಟ ಗ್ರಾಮದ ಕೆರೆ ಸಮೀಪ ಮೊಬೈಲ್‌ನಲ್ಲಿ ವಿಡಿಯೋ ಮಾಡಿದ್ದು, ನಂತರ ವಿಷಪೂರಿತ ಮಾತ್ರೆ ಸೇವಿಸಿದ್ದಾನೆ. ತನ್ನ ಸಾವಿಗೆ ಕಾರಣವಾಗಿ ಯುವತಿ ಹಾಗೂ ಆಕೆಯ ಕುಟುಂಬಸ್ಥರು ಜವಾಬ್ದಾರರಿದ್ದಾರೆ ಎಂದು ವಿಡಿಯೋದಲ್ಲಿ ಆರೋಪಿಸಿದ್ದಾನೆ.

ವೀಡಿಯೋದಲ್ಲಿ ಪ್ರೇಮದ ಹೆಸರಿನಲ್ಲಿ ಗಗನ ಎನ್ನುವ ಯುವತಿ ನಿರಂತರ ಕಿರುಕುಳ ನೀಡುತ್ತಿದ್ದಳು. ಜೊತೆಗೆ ಮತ್ತೊಬ್ಬ ಯುವಕನೊಂದಿಗೆ ಸಂಬಂಧ ಹೊಂದಿದ್ದಳು ಎಂಬ ಆರೋಪವನ್ನೂ ಮಂಜುನಾಥ್ ಮಾಡಿದ್ದಾನೆ. ತನ್ನನ್ನು ಸುಳ್ಳು ಆಶ್ವಾಸನೆಗಳೊಂದಿಗೆ ಮೋಸಗೊಳಿಸಲಾಗಿದ್ದು, ಆಕೆಯ ಕುಟುಂಬದಿಂದಲೂ ಆತ ಹಲ್ಲೆ ಮತ್ತು ದೌರ್ಜನ್ಯಕ್ಕೆ ಗುರಿಯಾಗುತ್ತಿದ್ದಾನೆ ಎನ್ನಲಾಗಿದೆ.

ಮಾತ್ರೆ ಸೇವನೆಯಿಂದಾಗಿ ಮಂಜುನಾಥ್ ಅಸ್ವಸ್ಥಗೊಂಡಿದ್ದನ್ನು ಗಮನಿಸಿದ ಗ್ರಾಮಸ್ಥರು ತಕ್ಷಣ ಆಸ್ಪತ್ರೆಗೆ ಸಾಗಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಯುವಕ ಮೃತಪಟ್ಟಿದ್ದಾನೆ.

ಯುವಕನ ಮರಣೋತ್ತರ ವೀಡಿಯೋ ಹರಿದಾಡುತ್ತಿದ್ದು, ಘಟನೆಗೆ ಸಂಬಂಧಿಸಿದಂತೆ ಯುವತಿ ಮತ್ತು ಆಕೆಯ ಕುಟುಂಬಸ್ಥರು ನಾಪತ್ತೆಯಾಗಿದ್ದಾರೆ. ಈ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ದೂರು ಪಡೆದುಕೊಂಡ ಪೊಲೀಸರು ನಾಪತ್ತೆಯಾಗಿರುವ ಆರೋಪಿಗಳಿಗಾಗಿ ಶೋಧ ಆರಂಭಿಸಿದ್ದು, ಮಂಜುನಾಥ್‌ನ ಕೊನೆಯ ಸೆಲ್ಫಿ ವಿಡಿಯೋವನ್ನು ಪ್ರಮುಖ ಸಾಕ್ಷಿಯಾಗಿ ಪರಿಗಣಿಸಲಾಗಿದೆ.

nazeer ahamad

Recent Posts

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

19 hours ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

1 day ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

1 day ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

2 days ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

2 days ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

2 days ago