Categories: LatestPolitics

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ; ರಾಜಕೀಯ ಬದುಕಿನ ಮೌನ ಶಕ್ತಿಗೆ ಅಂತಿಮ ವಿದಾಯ

ಬೆಂಗಳೂರು: ಭಾರತದ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಅವರ ಧರ್ಮಪತ್ನಿ ಚನ್ನಮ್ಮ (85) ಅವರು ಶನಿವಾರ ವಿಧಿವಶರಾಗಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರು, ಆರೋಗ್ಯದಲ್ಲಿ ಏಕಾಏಕಿ ಏರುಪೇರಾದ ಹಿನ್ನೆಲೆಯಲ್ಲಿ ಜುಲೈ 15ರಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಚನ್ನಮ್ಮ ಅವರ ಅಗಲಿಕೆ ದೇವೇಗೌಡರ ಕುಟುಂಬಕ್ಕೆ ಮಾತ್ರವಲ್ಲದೆ ಜೆಡಿಎಸ್ ಪಕ್ಷದ ಕಾರ್ಯಕರ್ತರು ಹಾಗೂ ಅಪಾರ ಅಭಿಮಾನಿಗಳಿಗೆ ತೀವ್ರ ದುಃಖವನ್ನುಂಟು ಮಾಡಿದೆ. ದೇವೇಗೌಡರ ದೀರ್ಘ ರಾಜಕೀಯ ಪಯಣದಲ್ಲಿ ಅವರು ಸದಾ ಮೌನ ಬೆಂಬಲವಾಗಿ ನಿಂತು, ಕುಟುಂಬದ ಸಂಪೂರ್ಣ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಿದ್ದರು.

ಹಾಸನ ಜಿಲ್ಲೆಯ ಮುತ್ತಿಗೆ ಹಿರೇಹಳ್ಳಿ ಗ್ರಾಮದ ಮೂಲದ ಚನ್ನಮ್ಮ ಅವರು 1954ರ ಮೇ 25ರಂದು ಹೆಚ್.ಡಿ. ದೇವೇಗೌಡ ಅವರನ್ನು ವಿವಾಹವಾಗಿದ್ದರು. ದೇವೇಗೌಡರು ರಾಜಕೀಯ ಜೀವನದಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದರೂ, ಕುಟುಂಬದ ಎಲ್ಲಾ ಹೊಣೆಗಾರಿಕೆಯನ್ನು ಚನ್ನಮ್ಮ ಅವರು ಸಮರ್ಥವಾಗಿ ನಿಭಾಯಿಸಿ, ಸುಭದ್ರ ಕುಟುಂಬ ವ್ಯವಸ್ಥೆಯನ್ನು ಕಟ್ಟಿಕೊಟ್ಟಿದ್ದರು.

ಹೆಚ್.ಡಿ. ರೇವಣ್ಣ, ಹೆಚ್.ಡಿ. ಬಾಲಕೃಷ್ಣ, ಹೆಚ್.ಡಿ. ರಮೇಶ್ ಗೌಡ, ಹೆಚ್.ಡಿ. ಕುಮಾರಸ್ವಾಮಿ ಸೇರಿದಂತೆ ನಾಲ್ವರು ಪುತ್ರರು ಹಾಗೂ ಶೈಲಜಾ ಮತ್ತು ಅನಸೂಯಾ ಎಂಬ ಇಬ್ಬರು ಪುತ್ರಿಯರನ್ನು ಉತ್ತಮ ಸಂಸ್ಕಾರ ಮತ್ತು ಶಿಕ್ಷಣದೊಂದಿಗೆ ಬೆಳೆಸುವಲ್ಲಿ ಚನ್ನಮ್ಮ ಅವರ ಪಾತ್ರ ಮಹತ್ವದ್ದಾಗಿತ್ತು.

ದೇವೇಗೌಡರ ರಾಜಕೀಯ ಯಶಸ್ಸಿನ ಹಿಂದೆ ಚನ್ನಮ್ಮ ಅವರ ತ್ಯಾಗ, ಸಹನೆ ಹಾಗೂ ಕುಟುಂಬದ ಮೇಲಿನ ಅಚಲ ಬದ್ಧತೆ ಪ್ರಮುಖ ಕಾರಣವೆಂದು ಹಲವರು ಸ್ಮರಿಸಿದ್ದಾರೆ. ಅವರ ನಿಧನಕ್ಕೆ ವಿವಿಧ ರಾಜಕೀಯ ಪಕ್ಷಗಳ ನಾಯಕರು, ಗಣ್ಯರು ಹಾಗೂ ಸಾರ್ವಜನಿಕರು ತೀವ್ರ ಸಂತಾಪ ಸೂಚಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಪತಿಯನ್ನೇ ಕೊಲ್ಲಲು ಪತ್ನಿಯ ಸ್ಕೆಚ್‌! ಪ್ರಿಯಕರನ ಮೊಬೈಲ್‌ನಲ್ಲಿ ಸಿಕ್ತು ಶಾಕಿಂಗ್ ಸಾಕ್ಷಿ..!

ಸೂರ್ಯಾಪೇಟೆ: ಅನೈತಿಕ ಸಂಬಂಧಕ್ಕೆ ಪತಿ ಅಡ್ಡಿಯಾಗಿದ್ದಾನೆ ಎಂಬ ಕಾರಣಕ್ಕೆ ಪತಿಯನ್ನೇ ಕೊಲೆ ಮಾಡಲು ಪತ್ನಿ ಹಾಗೂ ಆಕೆಯ ಕುಟುಂಬಸ್ಥರು ಸಂಚು…

1 day ago

ಗಂಡ ನೈಟ್ ಡ್ಯೂಟಿಗೆ ಹೋದಾಗ ಮಕ್ಕಳಿಗೆ ನಿದ್ರೆ ಗುಳಿಗೆ; ಲವ್ವರ್ ಜೊತೆ ಪತ್ನಿಯ ಚಕ್ಕಂದ.. ಮಧ್ಯರಾತ್ರಿ ಮನೆಗೆ ಬಂದ ಗಂಡನಿಗೆ ಕಾದಿತ್ತು ಘೋರ ದುರಂತ!

ಸೋನ್‌ಭದ್ರ: ಗಂಡ ನೈಟ್ ಡ್ಯೂಟಿಗೆ ಹೋದ ಬಳಿಕ ಮಕ್ಕಳಿಗೆ ನಿದ್ರೆ ಮಾತ್ರೆ ನೀಡಿ, ಪ್ರಿಯಕರನನ್ನು ಮನೆಗೆ ಕರೆಸಿಕೊಳ್ಳುತ್ತಿದ್ದ ಪತ್ನಿ, ಕೊನೆಗೆ…

1 day ago

ರೈಲ್ವೆ ಕಾಮಗಾರಿ ಕಾರ್ಮಿಕರಿದ್ದ ಬೊಲೆರೋ ಪಲ್ಟಿ: ಎಂಟು ಮಂದಿಗೆ ಗಂಭೀರ ಗಾಯ

ಗೌರಿಬಿದನೂರು: ರೈಲ್ವೆ ಇಲಾಖೆಯ ಕಾಮಗಾರಿ ಕೆಲಸಕ್ಕೆ ತೆರಳುತ್ತಿದ್ದ ಕೂಲಿ ಕಾರ್ಮಿಕರಿದ್ದ ಬೊಲೆರೋ ವಾಹನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾದ…

1 day ago

ಹುಬ್ಬಳ್ಳಿ–ಧಾರವಾಡದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ: 1,339 ಮಂದಿ ವಿರುದ್ಧ ಪ್ರಕರಣ

ಹುಬ್ಬಳ್ಳಿ–ಧಾರವಾಡ: ಅವಳಿ ನಗರದಲ್ಲಿ ಮಾದಕ ವಸ್ತುಗಳ ಜಾಲವನ್ನು ಬೇರುಸಹಿತ ಕಿತ್ತುಹಾಕಲು ಹುಬ್ಬಳ್ಳಿ–ಧಾರವಾಡ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದು, ಕಳೆದ ಮೂರು…

2 days ago

ವಿದ್ಯುತ್ ತಂತಿ ಅಳವಡಿಸಿ ಎರಡು ಜಿಂಕೆಗಳ ಬಲಿ: ಜಮೀನಿನಲ್ಲೇ ಮಾಂಸ ಬೇಯಿಸುತ್ತಿದ್ದ ಆರೋಪಿಗಳು!

ಸಾಗರ: ಜಮೀನಿಗೆ ಅಕ್ರಮವಾಗಿ ವಿದ್ಯುತ್ ತಂತಿ ಅಳವಡಿಸಿ ಎರಡು ಗಂಡು ಜಿಂಕೆಗಳನ್ನು ವಿದ್ಯುತ್ ಸ್ಪರ್ಶದಿಂದ ಸಾಯಿಸಿ, ಅವುಗಳ ಮಾಂಸವನ್ನು ಜಮೀನಿನಲ್ಲೇ…

2 days ago

ಅರ್ಚಕ ವಿಶ್ವೇಶ್ವರ ಭಟ್ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಕುಮಟಾ: ನಗರದ ಪ್ರಸಿದ್ಧ ಕುಂಭೇಶ್ವರ ದೇವಸ್ಥಾನದ ಅರ್ಚಕ ವಿಶ್ವೇಶ್ವರ ಭಟ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರ ಜಿಲ್ಲಾ ಮತ್ತು…

2 days ago