Latest

ಕುಂಭಮೇಳದಲ್ಲಿ ಕೋಳಿ ಅಡುಗೆ – ಭಕ್ತರಲ್ಲಿ ಆಕ್ರೋಶ

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ಲಕ್ಷಾಂತರ ಭಕ್ತರು ಆಗಮಿಸಿ, ಪವಿತ್ರ ಗಂಗೆಯಲ್ಲಿ ಸ್ನಾನ ಮಾಡುವ ಮೂಲಕ ಪುಣ್ಯ ಸಂಪಾದಿಸುತ್ತಿದ್ದಾರೆ. ಜಗತ್ತಿನ ಅತಿ ದೊಡ್ಡ ಧಾರ್ಮಿಕ ಮಹಾಸಂಭ್ರಮವೆನಿಸಿರುವ ಈ ಮೇಳದಲ್ಲಿ ದೇಶದಾದ್ಯಂತ ಹಾಗೂ ವಿದೇಶಗಳಿಂದಲೂ ಭಕ್ತಾದಿಗಳು ಪಾಲ್ಗೊಳ್ಳುತ್ತಿದ್ದಾರೆ.

ಆದರೆ, ಇಂತಹ ಪವಿತ್ರ ಮೇಳದ ಮೈದಾನದಲ್ಲಿ ನಡೆದ ಒಂದು ಘಟನೆ ಭಾರಿ ವಿವಾದಕ್ಕೆ ಕಾರಣವಾಗಿದೆ. ಕುಂಭಮೇಳಕ್ಕೆ ಬಂದ ದಂಪತಿಯೊಬ್ಬರು ತಮ್ಮ ಟೆಂಟ್‌ನಲ್ಲಿ ಕೋಳಿ ಬೇಯಿಸಿದ್ದು, ಇದನ್ನು ಗಮನಿಸಿದ ಸ್ಥಳೀಯರು ಹಾಗೂ ಸಾಧುಸಂತರು ಆಕ್ರೋಶ ವ್ಯಕ್ತಪಡಿಸಿದರು. ಸ್ಥಳೀಯರ ಹಸ್ತಕ್ಷೇಪದ ಬಳಿಕ, ಆ ದಂಪತಿಗಳು ತಕ್ಷಣವೇ ಸ್ಥಳವನ್ನು ಅಗಲಬೇಕಾಯಿತು.

ಮಾಂಸಾಹಾರ ನಿಷೇಧದ ಆದೇಶ

ಕುಂಭಮೇಳದ ಪೂರ್ವಭಾವಿಯಲ್ಲಿ ಉತ್ತರ ಪ್ರದೇಶ ಸರ್ಕಾರ ಮಹಾಮೇಳದ 500 ಮೀಟರ್ ವ್ಯಾಪ್ತಿಯಲ್ಲಿ ಮಾಂಸ, ಮೊಟ್ಟೆ ಮತ್ತು ಮಾರಾಟವನ್ನು ನಿಷೇಧಿಸಿತ್ತು. ಆಹಾರ ಸುರಕ್ಷತೆ ಮತ್ತು ಔಷಧಿ ಆಡಳಿತ ಇಲಾಖೆಯ ಅಧಿಕಾರಿಗಳು ಈ ನಿಯಮದ ಅನುಷ್ಠಾನಕ್ಕಾಗಿ ವಿಶೇಷ ಕ್ರಮಗಳನ್ನೂ ಕೈಗೊಂಡಿದ್ದರು. ಇದನ್ನು ಪೂರಕವಾಗಿ, ಹಲವು ಹಿಂದೂ ಧಾರ್ಮಿಕ ಸಂಸ್ಥೆಗಳು ಕೂಡ ಮಾಂಸ ಮಾರಾಟ ನಿಷೇಧಕ್ಕೆ ಒತ್ತಾಯಿಸಿದ್ದವು.

ಭಕ್ತರಲ್ಲಿ ಆಕ್ರೋಶ

ಪವಿತ್ರ ಸ್ಥಳದಲ್ಲಿ ಕೋಳಿ ಅಡುಗೆ ಮಾಡಿರುವುದು ಭಕ್ತಾದಿಗಳ ಧಾರ್ಮಿಕ ಭಾವನೆಗೆ ಧಕ್ಕೆಯಾಗಿದೆ ಎಂದು ನೆಟ್ಟಿಗರು ಸಾಮಾಜಿಕ ಜಾಲತಾಣದಲ್ಲಿ ಕಿಡಿಕಾರಿದ್ದಾರೆ. ಅನೇಕರು ಈ ಘಟನೆಗೆ ಖಂಡನೆ ವ್ಯಕ್ತಪಡಿಸಿದ್ದು, “ಧಾರ್ಮಿಕ ಸ್ಥಳಗಳ ನಿಯಮಗಳಿಗೆ ಗೌರವ ತೋರಬೇಕು” ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಈ ಘಟನೆಯಿಂದ ಕುಂಭಮೇಳದಲ್ಲಿ ಅಹಿಂಸಾ ಮತ್ತು ಶುದ್ಧತೆಯ ಮೌಲ್ಯಗಳನ್ನು ಉಳಿಸಬೇಕಾದ ಅವಶ್ಯಕತೆಯನ್ನು ಮತ್ತೊಮ್ಮೆ ಒತ್ತಿಹೇಳಲಾಗಿದೆ.

nazeer ahamad

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago