Latest

ಅದ್ದೂರಿಯಾಗಿ ನಡೆದ ಚಿಗಳ್ಳಿ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ..!

ಮುಂಡಗೋಡ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಪಂಚಾಯತ ಉತ್ತರ ಕನ್ನಡ,ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಪದನಿಮಿತ್ತ ಕ್ಷೇತ್ರ ಯೋಜನಾ ಸಮನ್ವಯಾಧಿಕಾರಿಗಳ ಕಛೇರಿ, ಮುಂಡಗೋಡ. ಶಿರಸಿ ಶೈಕ್ಷಣಿಕ ಜಿಲ್ಲೆ
ಸಮೂಹ‌ ಸಂಪನ್ಮೂಲ ಕೇಂದ್ರ ಚಿಗಳ್ಳಿ ಹಾಗೂ ಎಸ್ ಡಿ ಸಿ ಕೆ ಸರಕಾರಿ ಪ್ರೌಢ ಶಾಲೆ ಚಿಗಳ್ಳಿ ಹಾಗೂ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಚಿಗಳ್ಳಿ ತಾಲೂಕ: ಮುಂಡಗೋಡ, ಶಿರಸಿ ಶೈಕ್ಷಣಿಕ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಚಿಗಳ್ಳಿ ಕ್ಲಸ್ಟರ್ ಮಟ್ಟದ ಪ್ರಾಥಮಿಕ/ಪ್ರೌಢ ಶಾಲೆಗಳ ಕಲಿಕಾ ಹಬ್ಬ ಇಂದು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಚಿಗಳ್ಳಿಯಲ್ಲಿ ಅದ್ದೂರಿಯಾಗಿ ಜರುಗಿತು.
ಕಾರ್ಯಕ್ರಮವನ್ನು ಗ್ರಾಮದ ಶ್ರೀ ಗುರು ವೀರೇಶ್ವರ ಚೌಕಿ ಮಠ ಆವರಣದಿಂದ ಪೂರ್ಣ ಕುಂಭಮೇಳ, ಎತ್ತಿನ ಬಂಡಿ,ಹಾಗೂ ವಿವಿಧ ಸಾಂಸ್ಕೃತಿಕ ಜನಪದ ವೇಷಭೂಷಣಗಳೊಂದಿಗೆ ಅಲಂಕೃತಗೊಂಡ ಶಾಲಾ ವಿದ್ಯಾರ್ಥಿಗಳ ತಂಡಗಳನ್ನು ಚಿಗಳ್ಳಿ ಗ್ರಾಮ ಪಂಚಾಯತನ ಅಧ್ಯಕ್ಷರಾದ ಶ್ರೀಮತಿ ಭಾರತಿ ನಿಂಬಾಯಿ ಅವರು ಹಾಗೂ ಗ್ರಾಮ ಪಂಚಾಯತನ ಸರ್ವ ಸದಸ್ಯರು ಕಲಿಕಾ ಹಬ್ಬದ ವೃತ್ತಗಳನ್ನು ಬೀಸುವುದರೊಂದಿಗೆ ಚಾಲನೆ ನೀಡಿದರು.
ತದನಂತರ ಕಲಿಕಾ ಹಬ್ಬದ ಹಾಡುಗಳನ್ನು ಹಾಡುತ್ತಾ ಊರಿನ ಪ್ರಮುಖ ಬೀದಿಗಳಲ್ಲಿ ಜಾಥಾ ಮೂಲಕ ಸಂಚರಿಸಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಚಿಗಳ್ಳಿಯ ಆವರಣಕ್ಕೆ ಬರಲಾಯಿತು. ಕಲಿಕಾ ಹಬ್ಬದ ಹಾಡುಗಳೊಂದಿಗೆ ವೇದಿಕೆ ಮೇಲಿರುವ ಗಣ್ಯರನ್ನು ವಿದ್ಯಾರ್ಥಿಗಳು ಸ್ವಾಗತಿಸಿದರು.
ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್‌.ಡಿ.ಎಂ. ಸಿ ಅಧ್ಯಕ್ಷರಾದ ಶ್ರೀ ಪರಶುರಾಮ ಷ ತೆಗ್ಗಳ್ಳಿ ವಹಿಸಿಕೊಂಡಿದ್ದರು. ಚಿಗಳ್ಳಿ ಸಿ ಆರ್ ಪಿ ಶ್ರೀ ಪ್ರಶಾಂತ್ ಸಾವಳಗಿ ಪ್ರಸ್ತಾವಿಕವಾಗಿ ಮಾತನಾಡಿ, ಇಲಾಖೆ ಹಮ್ಮಿಕೊಂಡಿರುವ ಈ ಕಲಿಕಾ ಹಬ್ಬದ ಮಹತ್ವ, ಉದ್ದೇಶಗಳು ಹಾಗೂ ಪಾಲಕರ ಜವಾಬ್ದಾರಿಯ ಬಗ್ಗೆ ವಿವರಿಸಿದರು. ಚಿಗಳ್ಳಿ ಗ್ರಾಮ ಪಂಚಾಯತನ ಅಧ್ಯಕ್ಷರಾದ ಶ್ರೀಮತಿ ಭಾರತಿ ನಿಂಬಾಯಿರವರು ವಿಜ್ಞಾನ ವಿಸ್ಮಯ ಪ್ರಯೋಗದ ಮೂಲಕ ಕಾರ್ಯಕ್ರಮವನ್ನು ವಿನೂತನವಾಗಿ ಉದ್ಘಾಟಿಸಿ ಶುಭ ಹಾರೈಸಿದರು. ಗ್ರಾಮದ ಹಿರಿಯರಾದ ಶ್ರೀ ಎಂ ಪಿ ಕುಸೂರವರು ಅತಿಥಿಗಳಾಗಿ ಮಾತನಾಡಉತ್ತಾ ನಮ್ಮ ಸಂಸ್ಕ್ರತಿ, ಸಂಪ್ರದಾಯ, ಜಾನಪದ ಹಿರಿಮೆ, ಗ್ರಾಮೀಣ ಬದುಕಿನ ಸೊಗಡಿನ ಬಗ್ಗೆ ಮಕ್ಕಳಿಗೆ ಕಿವಿಮಾತು ಹೇಳಿದರು. ಗ್ರಾಮ ಪಂಚಾಯತ ಸದಸ್ಯರಾದ ಶ್ರೀ ಪರಶುರಾಮ ಟಿಕ್ಕೋಜಿಯವರು ವಿದ್ಯಾರ್ಥಿಗಳಿಗೆ ಶುಭ ಕೋರಿದರು. ಶಿಕ್ಷಣ ಸಂಯೋಜಕ ಪಾಂಡುರಂಗ ಟಿಕ್ಕೋಜಿ ಅವರು ಕಾರ್ಯಕ್ರಮ ಕುರಿತು ಮಾತನಾಡಿ ಶಿಕ್ಷಕರ ಪ್ರತಿಭೆ ಹಾಗೂ ಶ್ರಮದ ಸಾರ್ಥಕತೆಯನ್ನು ಮಕ್ಕಳು ಬಳಸಿಕೊಂಡು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಶಾಲಾ ವಿದ್ಯಾರ್ಥಿನಿ ಕುಮಾರಿ ಶ್ರೇಯಾ ಶ್ರೀ ಜಾದವ ಕಲಿಕಾ ಚೇತರಿಕೆ ವರ್ಷ ಹಾಗೂ ಕಲಿಕಾ ಹಬ್ಬದ ಬಗ್ಗೆ ತನ್ನ ಅನಿಸಿಕೆ ವ್ಯಕ್ತಪಡಿಸಿದಳು.
ನಂತರ ಶ್ರೀಮತಿ ದೇವಕಿ ಛಾಯಪ್ಪ ಕಲಾಲ ಸರಕಾರಿ ಪ್ರೌಢಶಾಲೆ ಚಿಗಳ್ಳಿ ಹಾಗೂ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಸಿದ್ದನ ಕೊಪ್ಪ ವಿದ್ಯಾರ್ಥಿಗಳಿಂದ ನೃತ್ಯ ಪ್ರದರ್ಶನ ನೆರವೇರಿತು. ಗ್ರಾಮ ಪಂಚಾಯತ ಸದಸ್ಯರುಗಳಾದ ಶ್ರೀ ಪ್ರಭುಲಿಂಗ ಕೆಂಣ್ಣನವರ, ಶ್ರೀ ಉದಯ ಕುಸೂರ ಶ್ರೀಮತಿ ರಹೀಮಾ ಮಕ್ತೇಸರ್ ರವರು ಉಪಸ್ಥಿತರಿದ್ದರು. ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ ಶ್ರೀ ಶಿವಾಜಿ ವಾಸಂಬಿ ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ದಾಸಪ್ಪ, ಎ , ಪ್ರೌಢಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀ ಪಕ್ಕೀರಸ್ವಾಮಿ ಹುಲಿಯವರ ಹಾಗೂ ಎರಡೂ ಶಾಲೆಗಳ ಎಸ್.ಡಿ.ಎಮ್.ಸಿ ಯ ಸರ್ವ ಸದಸ್ಯರು ಮತ್ತು ಶಿಕ್ಷಕ ವೃಂದ, ಸೊಸೈಟಿಯ ನಿರ್ದೇಶಕರುಗಳು, ಕ್ಲಸ್ಟರನ ಎಲ್ಲಾ ಶಾಲೆಗಳ ಮುಖ್ಯ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕರಾದ ಅಶೋಕ ಹಂಚಿನಮನೆ ಸ್ವಾಗತಿಸಿದರು, ಬಸವರಾಜ ಬೆಂಡ್ಲಗಟ್ಟಿ ನಿರೂಪಿಸಿದರು,ಕೆ ಕೆ ಕರುವಿನಕೊಪ್ಪ ವಂದಸಿದರು.
ನಂತರ ನಾಲ್ಕು ಕೊಠಡಿಗಳ ಆಡು-ಹಾಡು, ಕಾಗದ – ಕತ್ತರಿ, ಬಣ್ಣ, ಮಾಡು-ಆಡು, ಹಾಗೂ ಊರು ಸುತ್ತೋಣ ಎಂಬ ಹೆಸರಿನ ನಾಲ್ಕು ಕಲಿಕಾ ಮೂಲೆಗಳಲ್ಲಿ ಕಲಿಕಾ ಹಬ್ಬದ ಚಟುವಟಿಕೆಗಳು ಜರುಗಿದವು.
ವರದಿ:ಮಂಜುನಾಥ ಹರಿಜನ.

ಭ್ರಷ್ಟರ ಬೇಟೆ

Recent Posts

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

4 hours ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

1 day ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

1 day ago

ಬಿಹಾರದಲ್ಲಿ ಬೆಚ್ಚಿಬೀಳಿಸುವ ಕೃತ್ಯ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ಬಂಧನ, ಪೋಕ್ಸೊ ಕೇಸ್ ದಾಖಲು

ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…

1 day ago

ಕಲಬುರಗಿಯಲ್ಲಿ ಜೆಸ್ಕಾಂ AEE ರಾಜೇಶ್ವರಿ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಕಲಬುರಗಿ: ನಿಗದಿತ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ರಾಜೇಶ್ವರಿ ಅವರ…

1 day ago

10ನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ: ಇಬ್ಬರು ಆರೋಪಿಗಳಿಗೆ ಪೊಲೀಸರ ಗುಂಡೇಟು

ಜಮುಯಿ: ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದ 10ನೇ ತರಗತಿ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯನ್ನು ರಸ್ತೆಯಲ್ಲಿ ಅಡ್ಡಗಟ್ಟಿ, ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ…

1 day ago